Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬರೀಶ್ ಗೆ 'ಕರ್ನಾಟಕ ರತ್ನ'ಕ್ಕೆ...

ಅಂಬರೀಶ್ ಗೆ 'ಕರ್ನಾಟಕ ರತ್ನ'ಕ್ಕೆ ಅಭಿಮಾನಿಗಳ ಬೇಡಿಕೆ; ಸುಮಲತಾ ಆಕ್ಷೇಪ: ಬಹಿರಂಗ ಪತ್ರ

ವಾರ್ತಾಭಾರತಿವಾರ್ತಾಭಾರತಿ23 Nov 2021 3:50 PM IST
share
ಅಂಬರೀಶ್ ಗೆ ಕರ್ನಾಟಕ ರತ್ನಕ್ಕೆ ಅಭಿಮಾನಿಗಳ ಬೇಡಿಕೆ; ಸುಮಲತಾ ಆಕ್ಷೇಪ: ಬಹಿರಂಗ ಪತ್ರ

ಬೆಂಗಳೂರು: ನಟ ದಿವಂಗತ ಡಾ. ಅಂಬರೀಶ್ ಗೆ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕೆಂದು ಅವರ ಅಭಿಮಾನಿಗಳು ಒತ್ತಾಯಿಸುತ್ತಿದ್ದು, ಸಂಸದೆ ಸುಮಲತಾ ಅವರ ಗಮನಕ್ಕೆ ಬಂದಿದೆ. ಈ ಕುರಿತು ಅಂಬರೀಶ್ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ.  

 ಸಂಸದೆ ಸುಮಲತಾ ಅಂಬರೀಶ್ ಅವರು ತನ್ನ ಇನ್ಸ್ಟಾ ಗ್ರಾಮ್ ನಲ್ಲಿ ಬರೆದಿರುವ ಪತ್ರದ ಸಾರಾಂಶ ಹೀಗಿದೆ...

ನಮ್ಮ ಪ್ರೀತಿಯ ಡಾ. ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಿಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.

ನಮ್ಮ ಕುಟುಂಬದೊಂದಿಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜ್​ಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ.

ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.

ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಅತಿಶಯೋಕ್ತಿಯಾಗಬಾರದು.

ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತಹ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.

ಆದುದರಿಂದ ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ' ಎಂದು ಮಂಡ್ಯ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಅವರ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

View this post on Instagram

A post shared by Sumalatha Ambareesh (@sumalathaamarnath)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X