Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇನ್ಶೂರೆನ್ಸ್ ವರ್ಗಾವಣೆ ಮೊದಲೇ ಸವಾರ...

ಇನ್ಶೂರೆನ್ಸ್ ವರ್ಗಾವಣೆ ಮೊದಲೇ ಸವಾರ ಸಾವು: ವಿಮೆ ಕ್ಲೇಮ್ ನಿರಾಕರಿಸಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Nov 2021 5:11 PM IST
share
ಇನ್ಶೂರೆನ್ಸ್ ವರ್ಗಾವಣೆ ಮೊದಲೇ ಸವಾರ ಸಾವು: ವಿಮೆ ಕ್ಲೇಮ್ ನಿರಾಕರಿಸಿದ ಕೋರ್ಟ್

ಬೆಂಗಳೂರು, ನ.23: ಹಳೆಯ ಬೈಕ್ ಕೊಂಡುಕೊಂಡಿದ್ದ ವ್ಯಕ್ತಿ ಅದರ ವಿಮೆ ವರ್ಗಾವಣೆಗೂ ಮೊದಲೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರಿಂದ ಮೃತನ ಕುಟುಂಬದವರಿಗೆ ಮೋಟಾರು ವಾಹನ ಅಪಘಾತ ವಿಮೆ ಕ್ಲೇಮ್ ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬೆಂಗಳೂರಿನ ಗ್ರಾಹಕ ಕೋರ್ಟ್ ಆದೇಶಿಸಿದೆ.

ಮೃತ ಬೈಕ್ ಮಾಲಕನ ಪತ್ನಿ ಮತ್ತು ಮಗ ಪರಿಹಾರ ನಿರಾಕರಿಸಿದ ವಿಮಾ ಸಂಸ್ಥೆಯ ವಿರುದ್ಧ ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಗ್ರಾಹಕ ನ್ಯಾಯಾಲಯದ ಈ ಆದೇಶ ಮಾಡಿದೆ. ಅಪಘಾತ ನಡೆದ ಸಮಯದಲ್ಲಿ ವಾಹನದ ವಿಮೆ ಅದರ ಮೂಲ ಮಾಲಕರ ಹೆಸರಿನಲ್ಲಿದೆ. ಹೀಗಾಗಿ, ಮೃತನ ಕುಟುಂಬಸ್ಥರು ಗ್ರಾಹಕ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಯಾವುದೇ ಕ್ಲೇಮ್ ಮಾಡಲು ಅರ್ಹತೆ ಹೊಂದಿಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಪರ ವಕೀಲರು ವಾದಿಸಿ, ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅರುಣ್ ಅವರ ಕುಟುಂಬವು ವಿಮಾ ಕ್ಲೇಮ್‍ಗೆ ಅರ್ಹವಾಗಿದೆ. ಮೋಟಾರು ಸೈಕಲ್ ಅರುಣ್ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ. ಖರೀದಿಸಿದ ಎರಡು ವಾರಗಳಲ್ಲಿ ವಿಮಾ ಪಾಲಿಸಿಯಲ್ಲಿಯೂ ಹೆಸರನ್ನು ಬದಲಾಯಿಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ಬೈಕ್ ಖರೀದಿಸಿದ 7 ದಿನಗಳಲ್ಲೇ ಅವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವಾದಿಸಿದ್ದರು.

ವಿಮಾ ಸಂಸ್ಥೆ ಪರ ವಕೀಲರು ವಾದಿಸಿ, ಅಪಘಾತವಾದ ಸಮಯದಲ್ಲಿ ಮೊದಲ ಮಾಲಕ ಮೊಹಮ್ಮದ್ ಹೆಸರಿನಲ್ಲಿ ಪಾಲಿಸಿ ಇತ್ತು. ಬೈಕ್ ಖರೀದಿಸಿದ ಅರುಣ್ ಮತ್ತು ವಿಮಾ ಸಂಸ್ಥೆ ನಡುವೆ ಯಾವುದೇ ಸಂಬಂಧ ಇರಲಿಲ್ಲ. ಹೀಗಾಗಿ, ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಪಾವತಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರುಣ್ ಮತ್ತು ನ್ಯಾಷನಲ್ ಇನ್ಶುರೆನ್ಸ್ ಕಂಪೆನಿ ಲಿಮಿಟೆಡ್ ನಡುವೆ ಯಾವುದೇ ಒಪ್ಪಂದವಿರಲಿಲ್ಲ. ಹಾಗೆಯೇ, ಸಂತ್ರಸ್ತರು ಸಂಸ್ಥೆಗೆ ಯಾವುದೇ ಪ್ರೀಮಿಯಂ ಪಾವತಿಸಿಲ್ಲ. ಹೀಗಾಗಿ, ಅರ್ಜಿದಾರರನ್ನು ಇಲ್ಲಿ ಗ್ರಾಹಕರು ಎಂದು ಪರಿಗಣಿಸಲು ಬರುವುದಿಲ್ಲ ಎಂದಿದ್ದಾರೆ.

ಮೋಟಾರು ವಾಹನಗಳ ಕಾಯ್ದೆ ಅಡಿಯಲ್ಲಿ ಕ್ಲೇಮ್ ಮಾಡುವ ಹಕ್ಕುಗಳನ್ನು ಹೊಂದಿರಬಹುದು. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಇದು ಸಾಧ್ಯವಿಲ್ಲ. ಸಂತ್ರಸ್ತ ಕುಟುಂಬ ಮೋಟಾರು ಅಪಘಾತಗಳ ಪರಿಹಾರ ನ್ಯಾಯಮಂಡಳಿ ಎದುರು ತಮ್ಮ ಅಹವಾಲು ಸಲ್ಲಿಸಬಹುದು ಎಂದು ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಕರಣವೇನು: ಬನಶಂಕರಿ 2ನೆ ಹಂತದ ನಿವಾಸಿಯಾಗಿರುವ ಅರುಣ್ ಎಂ ಶೆಣೈ 2018ರ ನ.23ರಂದು ಮೊಹಮ್ಮದ್ ಹರ್ಷದ್ ಎಂಬುವರಿಂದ 100 ಸಿಸಿಯ ಬೈಕ್‍ವೊಂದನ್ನು ಖರೀದಿಸಿದ್ದರು. ವಾಹನದ ಮಾಲಕತ್ವವನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದ ಅವರಿಗೆ ವಿಮಾ ಪಾಲಿಸಿಯನ್ನು ವರ್ಗಾಯಿಸಿಕೊಳ್ಳಲು 14 ದಿನಗಳ ಕಾಲಾವಕಾಶವಿತ್ತು. ವಿಮೆ ಪಾಲಿಸಿ ಅವಧಿ 2019 ರ ಅ.31 ವರೆಗೆ ಇದ್ದುದರಿಂದ ಅದೇ ವಿಮಾ ಪಾಲಿಸಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲು ಯೋಜಿಸಿದ್ದರು. ದುರದೃಷ್ಟವಶಾತ್, 2018 ನವೆಂಬರ್ 30 ರಂದು ಅರುಣ್ ಅಪಘಾತದಲ್ಲಿ ಸಾವನ್ನಪ್ಪಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X