ರಾಷ್ಟ್ರೀಯ ಲೋಕದಳ- ಸಮಾಜವಾದಿ ಪಕ್ಷದ ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢಪಟ್ಟಿದೆ: ಜಯಂತ್ ಸಿಂಗ್
photo: twitter
ಲಕ್ನೊ: ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಹಾಗೂ ಸಮಾಜವಾದಿ ಪಕ್ಷ (ಎಸ್ಪಿ) ನಡುವೆ ಚುನಾವಣಾ ಪೂರ್ವ ಮೈತ್ರಿ ದೃಢಪಟ್ಟಿದೆ ಎಂದು ಆರ್ಎಲ್ಡಿ ಅಧ್ಯಕ್ಷ ಜಯಂತ್ ಸಿಂಗ್ ಚೌಧರಿ ಇಂದು ಎನ್ಡಿಟಿವಿಗೆ ತಿಳಿಸಿದ್ದಾರೆ.
ಉಭಯ ನಾಯಕರು ಲಕ್ನೋದಲ್ಲಿ ಭೇಟಿಯಾದ ನಂತರ ಚೌಧರಿ ಅವರು ಶೀಘ್ರದಲ್ಲೇ ಔಪಚಾರಿಕ ಘೋಷಣೆ ಮಾಡಲಾಗುವುದು. ಅಖಿಲೇಶ್ ಯಾದವ್ ಅವರೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಅವರು ಹೇಳಿದರು.
ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಯಾವುದೇ ಹೊಂದಾಣಿಕೆಯನ್ನು ಬಲವಾಗಿ ನಿರಾಕರಿಸಿದ ಆರ್ಎಲ್ಡಿ ಮುಖ್ಯಸ್ಥರು, ಬಿಜೆಪಿ ಜೊತೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಇದಕ್ಕೂ ಮುನ್ನ ಇಬ್ಬರೂ ನಾಯಕರು ಒಟ್ಟಿಗೆ ಇರುವ ಚಿತ್ರಗಳನ್ನು ಟ್ವೀಟ್ ಮಾಡಿ ಔಪಚಾರಿಕ ಘೋಷಣೆಯನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು ಎಂದು ಸುಳಿವು ನೀಡಿದ್ದರು. ಚೌಧರಿ ಅವರು ಅಖಿಲೇಶ್ ಯಾದವ್ ಅವರೊಂದಿಗೆ "ಬಡ್ತೇ ಕದಮ್ (ಮುಂದುವರಿಯುತ್ತಿರುವ ಹೆಜ್ಜೆಗಳು)" ಎಂಬ ಪದಗಳೊಂದಿಗೆ ಅವರ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ಆದರೆ ಯಾದವ್ ಅವರು " ಜಯಂತ್ ಚೌಧರಿ ಅವರೊಂದಿಗೆ ಬದಲಾವಣೆಯ ಕಡೆಗೆ" ಎಂಬ ಕಿರು ಸಂದೇಶದೊಂದಿಗೆ ಕೈಕುಲುಕುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಎರಡು ಪಕ್ಷಗಳು 2019ರ ಲೋಕಸಭೆ ಚುನಾವಣೆಯಲ್ಲಿ ಮಾಯಾವತಿಯವರ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ಚುನಾವಣೆಗೆ ಎರಡು ಪಕ್ಷಗಳ ನಡುವಿನ ಮೈತ್ರಿಯು ನಿರ್ಣಾಯಕ ಪಶ್ಚಿಮ ಉತ್ತರಪ್ರದೇಶದಲ್ಲಿ ಮುಸ್ಲಿಂ ಹಾಗೂ ಜಾಟ್ ಸಮುದಾಯದ ಮತಗಳನ್ನು ಕ್ರೋಢೀಕರಿಸುವ ಗುರಿಯನ್ನು ಹೊಂದಿದೆ.
श्री जयंत चौधरी जी के साथ बदलाव की ओर pic.twitter.com/iwJe8Onuy6
— Akhilesh Yadav (@yadavakhilesh) November 23, 2021