Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎನ್‌ಡಬ್ಲ್ಯುಎಫ್ ಕರ್ನಾಟಕ...

ಮಂಗಳೂರು: ಎನ್‌ಡಬ್ಲ್ಯುಎಫ್ ಕರ್ನಾಟಕ ರಾಜ್ಯ ಪ್ರತಿನಿಧಿ ಸಭೆ

ವಾರ್ತಾಭಾರತಿವಾರ್ತಾಭಾರತಿ23 Nov 2021 6:19 PM IST
share

ಮಂಗಳೂರು, ನ.23: ಕರ್ನಾಟಕ ರಾಜ್ಯ ನ್ಯಾಷನಲ್ ವಿಮೆನ್ಸ್ ಫ್ರಂಟ್‌ನ ಪ್ರತಿನಿಧಿ ಸಭೆಯು ರವಿವಾರ ನಗರದಲ್ಲಿ ನಡೆಯಿತು. ಫರ್ಝಾನ ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ರಮ್ಲತ್ ವರದಿ ಮಂಡಿಸಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮವು ಭಾರತೀಯರ ತ್ಯಾಗ, ಬಲಿದಾನ ಏಕತೆ ಮತ್ತು ಸಮರ್ಪಣಾಭಾವದ ಸಂಕೇತ. ಕಂಗನಾ ರಾಣಾವತ್ ಇದನ್ನು ಭಿಕ್ಷೆಗೆ ಹೋಲಿಸಿ ಸಮಸ್ತ ಸ್ವಾತಂತ್ರ್ಯ ಸೇನಾನಿಗಳನ್ನು ಅವಮಾನಿಸಿದ್ದಾರೆ. ಸಾಧಕರು ಹಾಗೂ ಗೌರವಾನ್ವಿತ ವ್ಯಕ್ತಿಗಳಿಗೆ ಸಿಗಬೇಕಾದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಯನ್ನು ದೇಶದ್ರೋಹದ ಮಾತುಗಳನ್ನಾಡಿ ಸದಾ ವಿವಾದ ಸೃಷ್ಟಿಸುವಲ್ಲಿ ನಿರತರಾಗಿರುವ ಕಂಗನಾರಿಗೆ ನೀಡಿರುವುದು ವಿಪರ್ಯಾಸ. ಇಂತಹ ಅನೇಕ ಪ್ರಶಸ್ತಿಗಳು ಇತ್ತೀಚೆಗೆ ಅನರ್ಹರ ಪಾಲಿಗೆ ಸೇರುತ್ತಿದೆ. ಪ್ರಶಸ್ತಿಯ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಶಸ್ತಿಯನ್ನು ವಿವಾದಾತೀತ ಸಾಧಕರಿಗೆ ನೀಡಬೇಕು ಎಂದು ಸಭೆಯು ಒತ್ತಾಯಿಸಿದೆ.

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಸರಕಾರದ ನಿರ್ಧಾರ ರೈತರ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಈ ನಿರ್ಧಾರವು ಕಾರ್ಯರೂಪಕ್ಕೆ ತರುವವರೆಗೆ ಹೋರಾಟವು ಚಾಲ್ತಿಯಲ್ಲಿರಬೇಕು. ಯಾಕೆಂದರೆ ಈ ಹೋರಾಟವು ಅನೇಕ ತ್ಯಾಗ, ಬಲಿದಾನಗಳಿಗೆ ಸಾಕ್ಷಿಯಾಗಿದೆ. ಹೋರಾಟವನ್ನು ಹತ್ತಿಕ್ಕಲು ಸರಕಾರವು ನಡೆಸಿದ ಅನೇಕ ಕುತಂತ್ರಗಳ ಪರಿಣಾಮವಾಗಿ ಅನೇಕ ರೈತಾಪಿ ಕುಟುಂಬಗಳು ಬೀದಿಗೆ ಬಿದ್ದಿವೆ. ಇದಕ್ಕೆ ಸರಕಾರ ವೇ ನೇರ ಹೊಣೆ. ಆದ್ದರಿಂದ ಈ ಹೋರಾಟದಲ್ಲಿ ಮಡಿದ ರೈತರ ಕುಟುಂಬಗಳಿಗೆ ಪರಿಹಾರ ಧನ ನೀಡಬೇಕೆಂದು ಸಭೆಯು ಆಗ್ರಹಿಸಿದೆ.

ರಾಜ್ಯದಲ್ಲಿ ಇತ್ತೀಚಿಗೆ ಸಂಘಪರಿವಾರದ ಪುಂಡಾಟಿಕೆ ಮಿತಿ ಮೀರುತ್ತಿದ್ದು, ವಿವಿಧೆಡೆ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿಯಿಂದ ಜನರ ಬದುಕನ್ನು ಭೀತಿಗೆ ತಳ್ಳಿದೆ. ಕೊಡಗಿನ ಶನಿವಾರ ಸಂತೆಯಲ್ಲಿ ವಿದ್ಯಾರ್ಥಿನಿಯರನ್ನು ನಡುರಸ್ತೆಯಲ್ಲಿ ತಡೆದು ಅವರ ಜೊತೆ ಅನಾಗರಿಕವಾಗಿ ವರ್ತಿಸಿದ ಸಂಘಪರಿವಾರದ ಗೂಂಡಾಗಳ ವರ್ತನೆ ಖಂಡನೀಯ. ಈ ಬಗ್ಗೆ ಸರಕಾರ ಎಚ್ಚೆತ್ತುಕೊಂಡು ಕಠಿಣ ಶಿಕ್ಷೆ ವಿಧಿಸಲು ಕ್ರಮಜರುಗಿಸಬೇಕು ಎಂದು ಸಭೆ ಒತ್ತಾಯಿಸಿದೆ,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X