Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ 'ಆಪರೇಷನ್...

ಉಡುಪಿ ಜಿಲ್ಲೆಯಾದ್ಯಂತ 'ಆಪರೇಷನ್ ಸನ್‌ಸೆಟ್' ವಿಸ್ತರಣೆ: ತಿಂಗಳ ಮಾಧ್ಯಮ ಸಂವಾದದಲ್ಲಿ ಎಸ್ಪಿ ವಿಷ್ಣುವರ್ಧನ್

ವಾರ್ತಾಭಾರತಿವಾರ್ತಾಭಾರತಿ23 Nov 2021 6:29 PM IST
share
ಉಡುಪಿ ಜಿಲ್ಲೆಯಾದ್ಯಂತ ಆಪರೇಷನ್ ಸನ್‌ಸೆಟ್ ವಿಸ್ತರಣೆ: ತಿಂಗಳ ಮಾಧ್ಯಮ ಸಂವಾದದಲ್ಲಿ ಎಸ್ಪಿ ವಿಷ್ಣುವರ್ಧನ್

ಉಡುಪಿ, ನ.23: ಮಹಿಳೆಯರು ಮತ್ತು ಮಕ್ಕಳ ರಕ್ಷಣೆ, ಕಳವು, ಮಾದಕ ದ್ರವ್ಯ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿಗೆ ತಂದಿರುವ ಆಪರೇಷನ್ ಸನ್‌ಸೆಟ್ ಯೋಜನೆಯನ್ನು ಮುಂದೆ ಉಡುಪಿ ನಗರ, ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಂತಹಂತವಾಗಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ವಿಸ್ತರಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ಆಯೋಜಿಸಲಾದ ತಿಂಗಳ ಮಾಧ್ಯಮ ಸಂವಾದದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು.

ಮಾದಕ ದ್ರವ್ಯಕ್ಕೆ ಸಂಬಂಧಿಸಿದಂತೆ ಕೆಲವು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಕೃತ್ಯದಲ್ಲಿ ಹಿಂದೆ ಭಾಗಿಯಾಗಿದ್ದ ಆರೋಪಿಗಳ ಮೇಲೆಯೂ ನಿಗಾ ಇರಿಸಲಾಗುತ್ತಿದೆ. ಈ ಮೂಲಕ ಅನೇಕ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟ ಹಾಗೂ ಸೇವನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ಹೇಳಿದರು.

ಮಾಹಿತಿ ನೀಡಿದರೆ ಕ್ರಮ
ಜಿಲ್ಲೆಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ನನಗೆ ನೇರವಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕವೂ ಮಾಹಿತಿ ನೀಡಬಹುದಾಗಿದೆ. ಈ ಬಗ್ಗೆ ಪರಿಶೀಲಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುವುದು. ಮುಖ್ಯವಾಗಿ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಅವರು ತಿಳಿಸಿದರು.

ವಂಚನೆಗೆ ಒಳಗಾಗಿ ಎಟಿಎಂ ಹಾಗೂ ಬ್ಯಾಂಕ್ ಖಾತೆಯಿಂದ ಹಣ ಕಳೆದು ಕೊಂಡವರು ತಕ್ಷಣವೇ ಹತ್ತಿರದಲ್ಲಿರುವ ಪೊಲೀಸ್ ಠಾಣೆಗೆ ದೂರು ನೀಡಬೇಕು. ಅಲ್ಲಿಂದ ಉಡುಪಿ ಸೆನ್ ಪೊಲೀಸ್‌ಗೆ ಮಾಹಿತಿ ವರ್ಗಾಯಿಸಿ, ತನಿಖೆ ಮಾಡಲಾಗುತ್ತದೆ. ಇದರಿಂದ ಖಾತೆಯಿಂದ ಹಲವು ಬಾರಿ ಹಣ ವರ್ಗಾವಣೆ ಆಗದಂತೆ ತಡೆಯಬಹುದು. ಅದು ಬಿಟ್ಟು ತಕ್ಷಣವೇ ಹಣ ವಾಪಾಸ್ಸು ಬರುವಂತೆ ಮಾಡಲು ಆಗುವುದಿಲ್ಲ ಎಂದರು.

ಇತರ ಜಿಲ್ಲೆಗೆ ಹೊಲಿಕೆ ಮಾಡಿದರೆ ಉಡುಪಿ ಜಿಲ್ಲೆಯಿಂದ ಪೊಲೀಸ್ ವೃತ್ತಿಗೆ ಬರುವವರ ಸಂಖ್ಯೆ ತೀರಾ ಕಡಿಮೆ ಆದುದರಿಂದ ಜಿಲ್ಲೆಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಇಲಾಖೆಗೆ ಸೆರ್ಪಡೆಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಉಡುಪಿ ಆಗಮಿಸುವ ವಲಸೆ ಕಾರ್ಮಿಕರ ಸಂಪೂರ್ಣ ಮಾಹಿತಿಗಳು ಬೀಟ್ ಸಿಬ್ಬಂದಿ ಬಳಿ ಇರುತ್ತದೆ ಎಂದ ಅವರು, ಜಿಲ್ಲೆಯಾದ್ಯಂತ ಮಟ್ಕಾ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

ಬಸ್ ನಿಲ್ದಾಣಗಳಲ್ಲಿ ಕುಡುಕರ ಹಾಗೂ ಕಾಮುಕರ ಹಾವಳಿ ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಮಣಿಪಾಲದಲ್ಲಿ ಅಳವಡಿಸಲಾದ ಟ್ರಾಫಿಕ್ ಸಿಗ್ನಲ್‌ಗಳನ್ನು ಉಡುಪಿ ನಗರದ 12 ಕಡೆಗಳಲ್ಲಿ ಅಳವಡಿಸಲಾಗುತ್ತದೆ. ಫುಟ್‌ಪಾತ್‌ಗಳ ಮೇಲೆ ವಾಹನ ನಿಲ್ಲಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ವಾರ್ತಾಧಿಕಾರಿ ಮಂಜುನಾಥ್, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಳ್ಳಿ ಉಪಸ್ಥಿತರಿದ್ದರು.

ಕಲ್ಸಂಕ ಜಂಕ್ಷನ್ ಅಗಲೀಕರಣಕ್ಕೆ ಕ್ರಮ
ಕಲ್ಸಂಕ ಜಂಕ್ಷನ್‌ನಲ್ಲಿ ಪ್ರತಿದಿನ ಸಂಭವಿಸುತ್ತಿರುವ ಟ್ರಾಫಿಕ್ ಸಮಸ್ಯೆ ಸಂಬಂಧ ಜಂಕ್ಷನ್ ಇನ್ನಷ್ಟು ಅಭಿವೃದ್ಧಿ ಹಾಗೂ ಅಗಲೀಕರಣ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕೇಳಿಕೊಂಡಿದ್ದೇವೆ. ಈ ಜಂಕ್ಷನ್‌ನಲ್ಲಿ ಉಡುಪಿಯಿಂದ ಗುಂಡಿಬೈಲು ಕಡೆ ಮತ್ತು ಗುಂಡಿಬೈಲು ಕಡೆಯಿಂದ ಮಣಿಪಾಲ ಕಡೆ ಫ್ರೀ ಲೆಫ್ಟ್ ಮಾಡಿದರೆ ಟ್ರಾಫಿಕ್ ಜಾಮ್ ಸಮಸ್ಯೆ ಸ್ವಲ್ಪ ಪ್ರಮಾಣದಲ್ಲಿ ಸರಿಯಾಗಬಹುದು. ಈ ಕುರಿತು ಮಳೆ ಮುಗಿದ ಬಳಿಕ ನಾವು ಹಾಗೂ ಜಿಲ್ಲಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ ಟ್ರಾಫಿಕ್ ನಿಯಂತ್ರಣಕ್ಕಾಗಿ ಇಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ಕೂಡ ನಿಯೋಜಿಸಲಾಗುವುದು ಎಂದು ಎಸ್ಪಿ ಎನ್.ವಿಷ್ಣುವರ್ಧನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X