Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಳೆಯಿಂದ ಹಾನಿ: ಶೀಘ್ರ ಪರಿಹಾರಕ್ಕೆ...

ಮಳೆಯಿಂದ ಹಾನಿ: ಶೀಘ್ರ ಪರಿಹಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Nov 2021 6:40 PM IST
share
ಮಳೆಯಿಂದ ಹಾನಿ: ಶೀಘ್ರ ಪರಿಹಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಬೆಂಗಳೂರು, ನ.23: ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ.ಗಳು, ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ.ಗಳ ತುರ್ತು ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಮಂಗಳವಾರ ಬೆಳಗ್ಗೆ ಮಳೆ ನೀರಿನಿಂದ ಜಲಾವೃತವಾಗಿರುವ ಯಲಹಂಕದ ಕೇಂದ್ರೀಯ ವಿಹಾರ್ ಅಪಾಟ್ಮೆರ್ಂಟ್ ಸಮುಚ್ಚಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈ ಪೈಕಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ.ಗಳನ್ನು ಇಂದೇ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಯಲಹಂಕ ಪ್ರದೇಶದಲ್ಲಿ 400 ಮನೆಗಳಿಗೆ ಹಾನಿಯಾಗಿದೆ. 10 ಕಿ.ಮೀ ಮುಖ್ಯರಸ್ತೆ, 20 ಕಿ.ಮೀ ಇತರೆ ರಸ್ತೆಗಳು ಹಾನಿಯಾಗಿದೆ. ಮೂಲಭೂತ ಸೌಕರ್ಯಗಳ ದುರಸ್ತಿಗೆ ಅಗತ್ಯವಿರುವ ಅನುದಾನದ ಅಂದಾಜು ಮಾಡಲು ಸೂಚನೆ ನೀಡಿದ್ದು, ತಕ್ಷಣವೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. 

ಬೆಂಗಳೂರಿನಲ್ಲಿ ರಾಜಕಾಲುವೆಗಳ ಸಮಸ್ಯೆ ಇದ್ದು, 50.ಕಿ.ಮೀ ರಾಜಕಾಲುವೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇನ್ನೂ 50 ಕಿ.ಮೀ ಹೆಚ್ಚಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇಂದು ಮತ್ತೊಮ್ಮೆ ಸಭೆ ಕರೆದು ಎಲ್ಲೆಲ್ಲಿ ರಾಜಕಾಲುವೆ ಸಣ್ಣದಿದ್ದು, ಅಡಚಣೆ ಇದೆ ಅಲ್ಲಿ ಶಾಶ್ವತ ಪರಿಹಾರ ಕೈಗೊಳ್ಳಲು ತೀರ್ಮಾನಿಸಿ, ಅಗತ್ಯ ಅನುದಾನದ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

ಆದುದರಿಂದ, ಮಳೆ ನಿಂತ ಕೂಡಲೇ ಬಿಬಿಎಂಪಿ ವತಿಯಿಂದ ರಾಜಕಾಲುವೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಡಚಣೆ ಇರುವಲ್ಲಿ ಆ ಸ್ಥಳದ ಮಾಲಕರ ಬಳಿ ಮಾತನಾಡಿ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಎಂಟು ಅಡಿಯಿರುವ ರಾಜಕಾಲುವೆಯನ್ನು 30 ಅಡಿಗಳಿಗೆ ಹೆಚ್ಚಿಸಬೇಕು. ಮತ್ತು 2 ರಾಜಕಾಲುವೆಗಳಿಗೆ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. 

ಕಳೆದ ಮೂರು ದಿನಗಳಿಂದ ಯಲಹಂಕ ಭಾಗದಲ್ಲಿ ಅತಿಹೆಚ್ಚು ಮಳೆಯಾಗಿರುವುದರಿಂದ ಯಲಹಂಕ ಕೆರೆ ಕಟ್ಟೆ ಒಡೆದು ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಅದರಲ್ಲಿಯೂ ಕೇಂದ್ರೀಯ ವಿಹಾರ ಸಮುಚ್ಚಯದಲ್ಲಿ 603 ಜನ ವಾಸವಿದ್ದು, ಇಲ್ಲಿ 4-5 ಅಡಿ ನೀರು ನಿಂತು ಜನರು ಓಡಾಡಲು ಕಷ್ಟವಾಗಿದೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೂಡಲೇ ಸಂಪೂರ್ಣ ಸಹಾಯ ಮತ್ತು ಸಹಕಾರ ನೀಡಿದ್ದಾರೆ. ಜನರ ಓಡಾಟಕ್ಕೆ ಸಹಾಯ ಹಾಗೂ ಆಹಾರ ಮತ್ತು ನೀರು ಪೂರೈಸಿದ್ದಾರೆ ಎಂದು ಅವರು ಹೇಳಿದರು. 

ಯಲಹಂಕ ಪ್ರದೇಶದಲ್ಲಿ ಉಂಟಾಗಿರುವ ಹಾನಿಗೆ ವ್ಯವಸ್ಥಿತ ಪರಿಹಾರ ನೀಡಬೇಕೆಂದು ವಿಶ್ವನಾಥ್ ಅವರೊಂದಿಗೆ ನಿನ್ನೆ ಚರ್ಚಿಸಿ, ಇಂದು ಪರಿಸ್ಥಿತಿಯನ್ನು ಖುದ್ದು ವೀಕ್ಷಿಸಲು ಆಗಮಿಸಿದ್ದೇನೆ. 603 ಜನರಿರುವ ಕೇಂದ್ರೀಯ ವಿಹಾರ್ ಸಮುಚ್ಚಯದಲ್ಲಿ ನೀರು ಹೊರಹಾಕಲು ಅಗತ್ಯವಿರುವ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ರಾಷ್ಟ್ರೀಯ ಹೆದ್ದಾರಿಯ ಕೆಳಗೆ ಒಳಚರಂಡಿ ಹೋಗುವುದರಿಂದ ಅವರ ಒಪ್ಪಿಗೆ ಪಡೆಯಲಾಗುವುದು.  ಆಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಹೇಳಿದರು. 

ಯಲಹಂಕ ಮೇಲ್ಭಾಗದಲ್ಲಿರುವ ಸುಮಾರು 11 ಕೆರೆಗೆಳು ಯಲಹಂಕ ಕೆರೆಗೆ ಸೇರುತ್ತವೆ. ಈ ಬಾರಿ ದಕ್ಷಿಣ ಉತ್ತರ ಒಳನಾಡು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಹೆಚ್ವಿನ ಮಳೆಯಾಗಿದೆ. ಇಲ್ಲಿಯೂ ಅತಿವೃಷ್ಟಿಯಾಗಿ, ಯಲಹಂಕ ಕೆರೆಯಿಂದ ಹೆಚ್ವಿನ ಪ್ರಮಾಣದಲ್ಲಿ ನೀರು ಹರಿದಿದೆ. ಯಲಹಂಕ ಕೆರೆಗೆ ಎರಡು ಕೋಡಿಗಳಿವೆ. ಇವೆರಡು ತುಂಬಿ ಹರಿದಿದೆ ಹಾಗೂ ಎರಡು ರಾಜಕಾಲುವೆಗಳ ಗಾತ್ರವೂ ಬಹಳ ಕಡಿಮೆಯಿದೆ. ಯಲಹಂಕ ಕೆರೆ ದೊಡ್ಡದಿದ್ದು, ಅದರ ಹೊರಹರಿವಿನ ಪ್ರಮಾಣವೂ ಹೆಚ್ಚಿದೆ. ರಾಜಕಾಲುವೆಗಳು ಅತಿಕ್ರಮಣವಾಗಿದೆ ಇಲ್ಲವೇ ಮುಚ್ಚಿಹೋಗಿರುವುದರಿಂದ ಈ  ಸಮಸ್ಯೆ  ಉಂಟಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X