ದ.ಕ.ಜಿಲ್ಲೆ: ಮಂಗಳವಾರ 17 ಮಂದಿಗೆ ಕೋವಿಡ್ ಪಾಸಿಟಿವ್; ಓರ್ವ ಮೃತ್ಯು
![ದ.ಕ.ಜಿಲ್ಲೆ: ಮಂಗಳವಾರ 17 ಮಂದಿಗೆ ಕೋವಿಡ್ ಪಾಸಿಟಿವ್; ಓರ್ವ ಮೃತ್ಯು ದ.ಕ.ಜಿಲ್ಲೆ: ಮಂಗಳವಾರ 17 ಮಂದಿಗೆ ಕೋವಿಡ್ ಪಾಸಿಟಿವ್; ಓರ್ವ ಮೃತ್ಯು](https://www.varthabharati.in/sites/default/files/images/articles/2021/11/23/314914-1637676991.jpg)
ಸಾಂದರ್ಭಿಕ ಚಿತ್ರ (PTI)
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಂಗಳವಾರ 17 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಬ್ಬರು ಬಲಿಯಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ.0.46 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 22,13,7223 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 20,97,949 ನೆಗೆಟವ್ ಮತ್ತು 1,15,773 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,13,969 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1693 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 111 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 88,834 ಪ್ರಕರಣ ದಾಖಲಿಸಿ, 1,07,76,270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story