Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದಲ್ಲಿ ಬಿಜೆಪಿ, ಆರೆಸ್ಸೆಸ್ ತಳವೂರಲು...

ಕೇರಳದಲ್ಲಿ ಬಿಜೆಪಿ, ಆರೆಸ್ಸೆಸ್ ತಳವೂರಲು ಬಿಡಲಾರೆವು: ಶೈಲಜಾ ಟೀಚರ್

ಸಿಪಿಎಂ ದ.ಕ.ಜಿಲ್ಲಾ ಸಮ್ಮೇಳನ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ23 Nov 2021 8:25 PM IST
share
ಕೇರಳದಲ್ಲಿ ಬಿಜೆಪಿ, ಆರೆಸ್ಸೆಸ್ ತಳವೂರಲು ಬಿಡಲಾರೆವು: ಶೈಲಜಾ ಟೀಚರ್

ಮಂಗಳೂರು: ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ನೇತೃತ್ವದ ಸರಕಾರವಿದೆ. ಆದರೆ ಆಡಳಿತ ನಡೆಸುವುದು ಸಂಘ ಪರಿವಾರವಾಗಿದೆ. ಈ ಸಂಘ ಪರಿವಾರ, ಬಿಜೆಪಿಯು ಭಕ್ತಿಯ ಹೆಸರಲ್ಲಿ ಜನರನ್ನು ಮೋಸಮಾಡುತ್ತದೆ. ದೇಶದ ಬಹುತೇಕ ಕಡೆ ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೇರಿದ ಬಿಜೆಪಿಯು ಕೇರಳದಲ್ಲೂ ತಳವೂರಲು ಯತ್ನಿಸುತ್ತಿದೆ. ಆದರೆ ಸಿಪಿಎಂ ಅದಕ್ಕೆ ಎಂದೂ ಅವಕಾಶ ಕೊಡುವುದಿಲ್ಲ ಎಂದು ಸಿಪಿಎಂ ಕೇಂದ್ರ ಸಮಿತಿ ಸದಸ್ಯೆ ಹಾಗೂ ಕೇರಳದ ಮಾಜಿ ಸಚಿವೆ, ಹಾಲಿ ಶಾಸಕಿ ಶೈಲಚಾ ಟೀಚರ್ ಹೇಳಿದರು.

ಗುರುಪುರ ಕೈಕಂಬದ ಖಾಸಗಿ ಸಭಾಗೃಹದ ಮೈದಾನದಲ್ಲಿ ನಡೆಯುತ್ತಿರುವ ಸಿಪಿಎಂ ಪಕ್ಷದ ದ.ಕ. ಜಿಲ್ಲಾ 23ನೆ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.

ದೇಶದಲ್ಲಿರುವುದು ಕಾರ್ಪೊರೇಟ್ ಕಂಪೆನಿಗಳ ಸರಕಾರವಾಗಿದೆ. ಅದರ ವಿರುದ್ಧವೂ ಹೋರಾಟ ಆರಂಭವಾಗಿದೆ. ರೈತರ ಹೋರಾಟವು ಕೇವಲ ನರೇಂದ್ರ ಮೋದಿಯ ವಿರುದ್ದವಲ್ಲ. ಕಾರ್ಪೊರೇಟ್ ಕಂಪೆನಿಗಳ ವಿರುದ್ದವೂ ಆಗಿದೆ ಎಂದ ಶೈಲಜಾ ಟೀಚರ್ ಪ್ರಧಾನಿ ನರೇಂದ್ರ ಮೋದಿ ರೈತರ ಅಭಿವೃದ್ಧಿ ಹೆಸರಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೆಗೊಳಿಸಿದರು. ಈ ಕಾಯ್ದೆಯನ್ನು ಸಮರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ವೌನಕ್ಕೆ ಶರಣಾಗಿದ್ದಾರೆ ಎಂದರು.

ಬಿಜೆಪಿ ಪಕ್ಷದ ನೀತಿಗಳು ಕಾರ್ಪೊರೇಟ್ ನೀತಿಗಳಾಗಿದೆ. ಅಲ್ಲದೆ ದೇಶದಲ್ಲಿ ಧರ್ಮಗಳ ಮಧ್ಯೆ ವೈಷಮ್ಯ ತಂದು ಗೊಂದಲ ಸೃಷ್ಟಿಸುತ್ತದೆ. ಈ ದೇಶದಲ್ಲಿ ಕೇವಲ ಹಿಂದೂಗಳು ಮಾತ್ರ ಇದ್ದರೆ ಸಾಕು ಎಂದು ಮೋದಿ, ಅಮಿತ್ ಶಾ, ಸಂಘಪರಿವಾರದ ಮುಖಂಡರು ಹೇಳುತ್ತಾರೆ. ಹಿಂದೂ ಹೆಸರಲ್ಲಿ ಮೇಲ್ಜಾತಿಯವರು ಅಭಿವೃದ್ಧಿ ಹೊಂದಿದರೆ, ಇತರರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಹಿಂದೆ ಗುಜರಾತ್‌ನಲ್ಲಿ ಹಿಂದೂ-ಮುಸ್ಲಿಂ ಎಂಬ ಭೇದ ಭಾವ ಇರಲಿಲ್ಲ, ಕರಸೇವೆಯ ಹೆಸರಲ್ಲಿ ಜನಾಂಗೀಯ ಹತ್ಯೆ ಮಾಡಲಾಗಿದೆ. ಬಿಜೆಪಿಯ ಒಡೆದಾಳುವ ಈ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ಎದುರಾಗುವ ಅಪಾಯವಿದೆ ಎಂದು ಶೈಲಜಾ ಟೀಚರ್ ಎಚ್ಚರಿಸಿದರು.

ಕಮ್ಯುನಿಸ್ಟ್ ಪಕ್ಷವು ಈ ದೇಶದ ದುಡಿಯುವ ವರ್ಗದ ಜೀವಾಳವಾಗಿದೆ. ದುಡಿಯುವ ವರ್ಗದ ಮೇಲಿನ ದೌರ್ಜನ್ಯ ವಿರೋಧಿಸಿ ನಿರಂತರ ಹೋರಾಟ ಮಾಡುತ್ತ ಬಂದಿರುವ ಪಕ್ಷ ಸಿಪಿಎಂ ಆಗಿದೆ. ರಷ್ಯಾದಲ್ಲಿ ಹೋರಾಟದ ಕಿಚ್ಚು ಹಚ್ಚಿದ ಕಮ್ಯುನಿಸ್ಟರು ಅಮೆರಿಕ, ಭಾರತ ಮತ್ತಿತರ ರಾಷ್ಟ್ರಗಳಲ್ಲಿ ಸಾಮ್ರಾಜ್ಯಶಾಹಿಗಳು ಮತ್ತು ಬಂಡವಾಳಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಶೈಲಜಾ ಟೀಚರ್ ಹೇಳಿದರು.

ಪಕ್ಷದ ಜಿಲ್ಲಾ ಮುಖಂಡ ವಸಂತ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳದ ಸ್ವಾಗತ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಪಕ್ಷದ ಮುಖಂಡರಾದ ಕೆ.ಎಸ್.ಶ್ರೀಯಾನ್, ಯುಬಿ ಲೋಕಯ್ಯ, ಯಾದವ ಶೆಟ್ಟಿ, ಕೃಷ್ಣಪ್ಪಸಾಲ್ಯಾನ್, ಸದಾಶಿವ ದಾಸ್, ಪದ್ಮಾವತಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಾಸುದೇವ ಉಚ್ಚಿಲ್, ಮನೋಜ್ ವಾಮಂಜೂರು ಮತ್ತಿತರರು ಉಪಸ್ಥಿತರಿದ್ದರು.

ತುಳುನಾಡಿದ ಸಂಸ್ಕೃತಿಯಂತೆ ಶೈಲಜಾ ಟೀಚರ್‌ರ ತಲೆಗೆ ಮುಟ್ಟಾಳೆ ಇಟ್ಟು, ಫಲಕ ನೀಡಿ ಗೌರವಿಸಲಾಯಿತು.

ಪೊಳಲಿ ದ್ವಾರದ ಬಳಿಯಿಂದ ಸಮ್ಮೇಳನದ ವೇದಿಕೆಯವರೆಗೆ ತಾಲೀಮು, ಹುಲಿವೇಷ ಕುಣಿತ, ಯಕ್ಷಗಾನ ವೇಷಗಳನ್ನೊಳಗೊಂಡ ಕಾರ್ಮಿಕರ ಮೆರವಣಿಗೆ ಸಾಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X