ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಬ್ರಹ್ಮಾವರ, ನ.23: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಸುಕ್ರು ಪೂಜಾರಿ(65) ಎಂಬವರು ನ.22ರಂದು ಮಧ್ಯಾಹ್ನ ಯಡ್ತಾಡಿ ಗ್ರಾಮದ ಕಂಬಳಗದ್ದೆ ರಸ್ತೆಯ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಅನಾರೋಗ್ಯ ಹಾಗೂ ವಿಪರೀತ ಮದ್ಯಪಾನ ಸೇವನೆ ಚಟದಿಂದ ಮಾನಸಿಕವಾಗಿ ನೊಂದ ಭಾಸ್ಕರ್ ಶೆಟ್ಟಿ ಎಂಬವರ ಮಗ ಅನಿಲ್ ಶೆಟ್ಟಿ(54) ಎಂಬವರು ನ.23ರಂದು ಬೆಳಗ್ಗೆ ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ: ಕೊರೋನಾದಿಂದ ಉದ್ಯೋಗ ಇಲ್ಲದ ಚಿಂತೆಯಲ್ಲಿ ಹಾಗೂ ಪತ್ನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿರುವುದರಿಂದ ಮನನೊಂದು ನ.19ರಂದು ರಾತ್ರಿ ಪಡುಬಿದ್ರಿ ಬೀಚ್ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉದಯ್ (35) ಎಂಬವರು ಸೆ.23ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





