2020ರಲ್ಲಿ ಸಿಎಎ ವಿರೋಧಿ ಪೋಸ್ಟರ್ ಗಳನ್ನು ಹಾಕಿದ್ದಕ್ಕಾಗಿ ನಾಲ್ವರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಕಳೆದ ವರ್ಷ ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ಹಾಕಿದ್ದ ಪೋಸ್ಟರ್ಗಳನ್ನು ಹಾಕಿದ್ದವರ ವಿರುದ್ದ ಕಾನೂನು ಕ್ರಮ ಜರುಗಿಸಲು ಉತ್ತರ ಪ್ರದೇಶ ಸರ್ಕಾರ ಪೊಲೀಸರಿಗೆ ಅನುಮತಿ ನೀಡಿದ ನಂತರ ನಾಲ್ವರನ್ನು ಬಂಧಿಸಲಾಗಿದೆ ಎಂದು indianexpress.com ವರದಿ ಮಾಡಿದೆ.
ಪೊಲೀಸರು ಆರೋಪಿಗಳ ವಿರುದ್ಧ ಸೆಕ್ಷನ್ 153-ಎ , 295-ಎ ಮತ್ತು 505(2) ಅಡಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬಂಧಿತ ನಾಲ್ವರೂ ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ವರದಿಯಾಗಿದೆ.
ನಾಲ್ವರ ವಿರುದ್ಧದ ಪ್ರಕರಣವು ಜನವರಿ 26, 2020 ರಂದು ಪ್ರಾರಂಭವಾಗಿದೆ. ನಾಲ್ವರು ಮೀರತ್ ನ ಲಾಲ್ಕುರ್ತಿ ಪ್ರದೇಶದಲ್ಲಿ ಸಿಎಎ ಹಾಗೂ ಎನ್ ಆರ್ ಸಿ ವಿರುದ್ಧ ಪ್ರತಿಭಟಿಸಿ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಪೋಸ್ಟರ್ ಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳಿವೆ ಎಂದು ಪೊಲೀಸರು ಆರೋಪಿಸಿದ್ದಾರೆ.
Next Story