ಮಮತಾ ಬ್ಯಾನರ್ಜಿಯನ್ನು ಭೇಟಿಯಾಗಲಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಸುಬ್ರಮಣಿಯನ್ ಸ್ವಾಮಿ (PTI)
ಹೊಸದಿಲ್ಲಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬುಧವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.
ದಿಲ್ಲಿಯಲ್ಲಿರುವ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಅಧಿಕೃತ ನಿವಾಸದಲ್ಲಿ ಮಧ್ಯಾಹ್ನ 3.30ಕ್ಕೆ ಸಭೆ ನಡೆಯುವ ಸಾಧ್ಯತೆ ಇದೆ. ಕಾಕತಾಳೀಯವೆಂಬಂತೆ ಮಂಗಳವಾರ, ಸ್ವಾಮಿ ಅವರು ಕೋಲ್ಕತ್ತಾದಲ್ಲಿದ್ದರು, ಅಲ್ಲಿ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾದರು.
ಸಂಜೆ 5 ಗಂಟೆಗೆ, ಮಮತಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ, ಅಲ್ಲಿ ಅವರು ಬಂಗಾಳದಲ್ಲಿ ಬಿಎಸ್ಎಫ್ನ ಪ್ರಾದೇಶಿಕ ಅಧಿಕಾರ ವ್ಯಾಪ್ತಿ ವಿಸ್ತರಣೆ ಹಾಗೂ ತ್ರಿಪುರಾದಲ್ಲಿ ಟಿಎಂಸಿ ಕಾರ್ಯಕರ್ತರ ಮೇಲಿನ ದಾಳಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.
ಕಳೆದ ತಿಂಗಳು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಸ್ವಾಮಿಯವರನ್ನು ಕೈಬಿಡಲಾಗಿದ್ದು, ಸ್ವಾಮಿ, ಈ ಹಿಂದೆ ಹಲವು ಸಂದರ್ಭಗಳಲ್ಲಿ ಮಮತಾ ಬ್ಯಾನರ್ಜಿಯವರನ್ನು ಹೊಗಳಿದ್ದರು.