ಅಂತರ್ ರಾಷ್ಟ್ರೀಯ ವಿಮಾನಗಳು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ: ಕೇಂದ್ರ ಸರಕಾರ

ಹೊಸದಿಲ್ಲಿ: ಅಂತರ್ ರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಶೀಘ್ರದಲ್ಲೇ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ವಿಮಾನಯಾನ ಸಚಿವಾಲಯದ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಬುಧವಾರ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಕಳೆದ ವಾರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಂತರರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಸಾಮಾನ್ಯಗೊಳಿಸುವ ಪ್ರಕ್ರಿಯೆಯನ್ನು ಸರಕಾರ ಮೌಲ್ಯಮಾಪನ ಮಾಡುತ್ತಿದೆ ಎಂದು ಹೇಳಿದ್ದರು.
ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಸಿಂಧಿಯಾ, ಸರಕಾರವು ಈಗಿನ ಪರಿಸ್ಥಿತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಉತ್ಸುಕವಾಗಿದೆ ಎಂದು ಒತ್ತಿ ಹೇಳಿದ್ದರು.
ದೇಶವನ್ನು ಹೊಸ ಅಲೆಯ ಕೊರೋನವೈರಸ್ ಸೋಂಕಿನ ವಿರುದ್ಧ ರಕ್ಷಿಸಲು ಸರಕಾರವು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ವಿಶೇಷವಾಗಿ ಹಲವಾರು ಪ್ರಮುಖ ಯುರೋಪಿಯನ್ ರಾಷ್ಟ್ರಗಳಲ್ಲಿ ದೈನಂದಿನ ಹೊಸ ಪ್ರಕರಣಗಳು ಹೆಚ್ಚಳವಾಗಿ ಆತಂಕ ಮೂಡಿಸಿದೆ ಎಂದು ಹೇಳಿದ್ದಾರೆ.
Next Story