Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ?, ಫೀಸ್...

'ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ?, ಫೀಸ್ ಕಟ್ಟೋಕೆ ಆಗಲ್ವಾ?': ದೂರು ನೀಡಲು ಬಂದವರಿಗೆ ಜಿಲ್ಲಾಧಿಕಾರಿ ಬೆದರಿಕೆ; ಆರೋಪ

ವಾರ್ತಾಭಾರತಿವಾರ್ತಾಭಾರತಿ24 Nov 2021 6:04 PM IST
share
ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ?, ಫೀಸ್ ಕಟ್ಟೋಕೆ ಆಗಲ್ವಾ?: ದೂರು ನೀಡಲು ಬಂದವರಿಗೆ ಜಿಲ್ಲಾಧಿಕಾರಿ ಬೆದರಿಕೆ; ಆರೋಪ

ಬೆಂಗಳೂರು, ನ. 24: ‘ಹೇಯ್ ಸುಮ್ನೆ ಕೂತ್ಕೋಳಯ್ಯ, ಎಷ್ಟು ಮಾತಾಡ್ತೀಯಾ? ಯಾವ್ ಡಿಪಾಟ್‍ಮೆಂಟ್ ನಿಂದು? ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ? ಸರಕಾರಿ ಸ್ಕೂಲ್ ಆಪ್ಷನ್ ಇತ್ತಲ್ಲಾ, ಸೇರಿಸಬೇಕಾಗಿತ್ತು. ಫೀಸ್ ಕಟ್ಟೋಕೆ ಆಗಲ್ವಾ? ಸುಮ್ನೆ ಬಂದು ನಮ್ಮ ಟೈಂ ವೆಸ್ಟ್ ಮಾಡಿಸ್ತೀರಾ? ಐ ಯಾಮ್ ಡೆಪ್ಯೂಟಿ ಕಮಿಷನರ್ ಸ್ಪೀಕಿಂಗ್' ..ಹೀಗೆಂದು ಖಾಸಗಿ ಶಾಲೆಗಳ ಶುಲ್ಕ ವಸೂಲಿ ನಿಯಂತ್ರಣಕ್ಕೆ ದೂರು ನೀಡಲು ಬಂದ ಸಾರ್ವಜನಿಕರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬೆದರಿಕೆ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.

ಜಿಲ್ಲಾಧಿಕಾರಿ ಉದ್ಧಟತನದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಪೋಷಕರ ಸಂಘಟನೆಗಳ ಸಮನ್ವಯ ವೇದಿಕೆ, ಮುಖ್ಯಮಂತ್ರಿ, ಶಿಕ್ಷಣ ಸಚಿವ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಮಾನವ ಹಕ್ಕುಗಳ ಆಯೋಗ ಹಾಗೂ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದೆ.

ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ನೀಡುವಂತೆ ಬಲವಂತ ಮಾಡಿದರೆ ಜಿಲ್ಲಾ ವ್ಯಾಪ್ತಿಯಲ್ಲಿನ ‘ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ’ಕ್ಕೆ ದೂರು ನೀಡಬಹುದು. ಈ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿಯೇ ಮುಖ್ಯಸ್ಥರು. ಹೀಗಾಗಿ ದೂರು ನೀಡಲು ತೆರಳಿದ ಸಾರ್ವಜನಿಕರೊಂದಿಗೆ ಜಿಲ್ಲಾಧಿಕಾರಿ ಮಂಜುನಾಥ್ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬ ದೂರು ಕೇಳಿಬಂದಿದೆ.

‘ವಾಣಿ ಎಜುಕೇಷನ್ ಸೆಂಟರ್ ವಿರುದ್ಧ ಪ್ರಾಧಿಕಾರಕ್ಕೆ ಜಿ.ರವಿಕುಮಾರ್, ಲಕ್ಷ್ಮಿನಾರಾಯಣ ಮತ್ತು ಡಾ.ಅರುಣ್‍ಕುಮಾರ್ ದೂರು ನೀಡಲು ತೆರಳಿದ್ದರು. ಆ ಸಂದರ್ಭದಲ್ಲಿ ಮೇಲ್ಕಂಡ ಘಟನೆ ನಡೆದಿದೆ ಎಂದು ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾನವ ಹಕ್ಕುಗಳ ಆಯೋಗದ ಸದಸ್ಯ ಆರ್.ಕೆ.ದತ್ತ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಆಯೋಗವು ಸರಕಾರಕ್ಕೆ ಸೂಚನೆ ನೀಡಿದೆ ಎಂದು ತಿಳಿಸಲಾಗಿದೆ.

‘ಹೆಚ್ಚುವರಿ ಶುಲ್ಕ ಪಡೆಯುತ್ತಿರುವ ಬಗ್ಗೆ ದಾಖಲಾಗಿದ್ದ ದೂರುಗಳನ್ನು ಪರಿಶೀಲಿಸಲು ಆ.5ರಂದು ಜಿಲ್ಲಾಧಿಕಾರಿ ಸಭೆ ನಡೆಸಿದ್ದರು. ದೂರು ಸಲ್ಲಿಸಿದ್ದ ಪೋಷಕರ ವಿರುದ್ಧ ಜಿಲ್ಲಾಧಿಕಾರಿ ಬೆದರಿಕೆ ಹಾಕಿದ್ದು, ಅಲ್ಲದೆ, ಯಾವ ಡಿಪಾರ್ಟ್‍ಮೆಂಟ್ ನಿಂದು, ನಿಂಗೆ ಬಿಟ್ಟಿ ಎಜುಕೇಷನ್ ಬೇಕಾ, ಫೀಸ್ ಕಟ್ಟೋಕೆ ಆಗಲ್ವಾ, ನಿಂಗೆ ಸಂಬಳ ಕೊಡೊದು ಏಕೆ, ಸಂಬಳ ಕಟ್ ಮಾಡಿಸ್ತೀನಿ, ಡಾಕ್ಟರ್ ಅಂತೀಯ ಎಷ್ಟು ಸಂಬಳ, ನಿನ್ನ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದೆಲ್ಲಾ.. ಮನಸೋ ಇಚ್ಛೇ ಏಕವಚನದಲ್ಲೇ ನಿಂದಿಸಿದ್ದಾರೆ’ ಎಂದು ವೇದಿಕೆ ಆರೋಪಿಸಿದೆ.

‘ದೂರು ನೀಡಲು ಹೋದವರನ್ನೇ ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದು, ಅಲ್ಲದೆ, ಬೇಕಾಬಿಟ್ಟಿ ಶುಲ್ಕ ವಸೂಲಿಗೆ ಮಾಡುವ ಖಾಸಗಿ ಶಾಲೆಗಳ ಪ್ರೋತ್ಸಾಹ ನೀಡುವ ರೀತಿಯಲ್ಲಿ ನಡೆದುಕೊಂಡಿದ್ದು ಅವರ ವಿರುದ್ಧ ಕೂಡಲೇ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ವೇದಿಕೆಯ ರವಿಕುಮಾರ್ ಜಿ. ಲಕ್ಷ್ಮಿ ನಾರಾಯಣ ಹಾಗೂ ಡಾ.ಅರುಣ್ ಕುಮಾರ್ ಜಿ. ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X