ಮಂಗಳೂರು ವಲಯ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ

ಉಡುಪಿ, ನ.24: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2021- 22ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರು ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ನಡೆಯಿತು.
ಶಿರ್ವ ಪೊಲೀಸ್ ಠಾಣಾ ಉಪನಿರೀಕ್ಷಕ ಶ್ರೀಶೈಲ ಮುರುಗೋಡ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಗೌರವ ಅತಿಥಿಯಾಗಿ ಸಂಸ್ಥೆಯ ಕಾರ್ಯ ದರ್ಶಿ ರತ್ನಕುಮಾರ್ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಕ್ರೀಡಾ ನಿರ್ದೇಶಕ ಗಣೇಶ್ ಪೂಜಾರಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮುರಳೀಧರ ಶರ್ಮ ಉಪಸ್ಥಿತರಿದ್ದರು.
ಕ್ರೀಡಾ ಸಂಯೋಜಕ ಸಚಿನ್ ಪ್ರಭು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಯಶಸ್ವಿನಿ ಎ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮುರಳಿಧರ ಶರ್ಮ ವಂದಿಸಿದರು. ನಿಹಾರಿಕ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾವಳಿಯಲ್ಲಿ ಮಂಗಳೂರು ವಲಯದ ವಿವಿಧ ತಾಂತ್ರಿಕ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.







