ಅರಿವು ರಿನ್ಯೂವಲ್ ಸಾಲ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ನ.24: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಇಟಿ, ನೀಟ್‌ನಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಶ್, ಬಿ.ಆರ್ಕ್, ಬಿ.ಇ ಹಾಗೂ ಬಿ.ಟೆಕ್ ಪದವಿ ಕೋರ್ಸ್ ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ರಿನ್ಯೂವಲ್ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು, ನಿಗಮದಿಂದ ಹಿಂದಿನ ವರ್ಷದಲ್ಲಿ ಪಡೆದಿರುವ ಒಟ್ಟು ಸಾಲದ ಬಾಕಿ ಮೊತ್ತದ ಶೇ.12ರಷ್ಟನ್ನು ಜಿಲ್ಲಾ ಕಛೇರಿಗಳಲ್ಲಿ ಪಾವತಿಸಿರುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ ನಲ್ಲಿ ಡಿಸೆಂಬರ್ 20ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಕೆಎಂಡಿಸಿ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳನ್ನು ಡಿ.31 ರ ಒಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಝಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಇವರಿಗೆ ಸಲ್ಲಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





