Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಂಜಿನಿಯರಿಂಗ್-ವೈದ್ಯಕೀಯ ವಿಷಯಗಳ ಪಠ್ಯ...

ಎಂಜಿನಿಯರಿಂಗ್-ವೈದ್ಯಕೀಯ ವಿಷಯಗಳ ಪಠ್ಯ ಕ್ರಮ ಕನ್ನಡದಲ್ಲಿ ರಚನೆಯಾಗಲಿ: ಗೃಹ ಸಚಿವ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ24 Nov 2021 10:58 PM IST
share
ಎಂಜಿನಿಯರಿಂಗ್-ವೈದ್ಯಕೀಯ ವಿಷಯಗಳ ಪಠ್ಯ ಕ್ರಮ ಕನ್ನಡದಲ್ಲಿ ರಚನೆಯಾಗಲಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ನ.24: ಕನ್ನಡ ಭಾಷೆಯು ಅತ್ಯಂತ ಪ್ರಾಚೀನವೂ ಮತ್ತು ಶಾಸ್ತ್ರೀಯ ಭಾಷೆಗಳಲ್ಲಿ ಪ್ರಮುಖವಾಗಿದ್ದು, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಷಯಗಳನ್ನು ಸರಳವಾಗಿ ಮತ್ತು ಸುಲಲಿತವಾಗಿ ವಿದ್ಯಾರ್ಥಿಗಳಿಗೆ ಬೋಧಿಸಲು ನೆರವಾಗುವಂತೆ ಪಠ್ಯಕ್ರಮಗಳ ರಚನೆಯ ಅಗತ್ಯವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಪಾದಿಸಿದರು.

ಬುಧವಾರ ನಗರದಲ್ಲಿ ಹಿರಿಯ ಸಾಹಿತಿ ಹಾಗೂ ಸಂಶೋಧಕ ಡಾ.ಹಂಪ ನಾಗರಾಜಯ್ಯ ರಚಿಸಿದ ‘ಚಾರುಲತ-ವಸಂತ’ ಎಂಬ ಕಾವ್ಯ ಕಥನದ ಇಂಗ್ಲೀಷ್ ಅನುವಾದ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಹಂಪನಾ ರಚಿಸಿರುವ ಚಾರುಲತಾ-ವಸಂತ ಕೃತಿ ಕನ್ನಡದಲ್ಲಿ ರಚಿತವಾದ ಸುಂದರ ಕಥನಾ ಕಾವ್ಯವಾಗಿದ್ದು, ಇಂತಹ ಕೃತಿಯನ್ನು ಮೂಲ ಕೃತಿಗೆ ಧಕ್ಕೆ ಬಾರದಂತೆ ತರ್ಜುಮೆ ಮಾಡಲಾಗಿದೆ. ಅನುವಾದ ಕೃತಿಗಳಿಂದ ಕನ್ನಡ ಸಾರಸ್ವತ ಲೋಕ ವಿಸ್ತಾರವಾಗುತ್ತದೆ ಎಂದು ಅವರು ಹೇಳಿದರು.

ಪ್ರಪಚಂದ ಯಾವುದೇ ಭಾಷೆಗಳಿಗೂ ಪ್ರಬುದ್ಧತೆಯಲ್ಲಿ ಸರಿಸಾಟಿಯಾದ ಕನ್ನಡ ಭಾಷೆಯಲ್ಲಿಯೇ ತಾಂತ್ರಿಕ ವಿಷಯಗಳಾದ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಷಯಗಳ ಪಠ್ಯಕ್ರಮಗಳು ರಚನೆಯಾಗಬೇಕು ಎಂದು ಪ್ರತಿಪಾದಿಸಿದ ಅವರು, ಈ ನಿಟ್ಟಿನಲ್ಲಿ ಸಾಹಿತಿಗಳೂ ಮತ್ತು ಚಿಂತಕರು ಸಲಹೆ ಸೂಚನೆಗಳನ್ನು ನೀಡಿ ಎಂದು ಕೋರಿದರು.

ಕನ್ನಡ ಭಾಷೆಯಲ್ಲಿ ರಚಿತವಾದ ಅತ್ಯುತ್ತಮ ಕೃತಿಗಳನ್ನು ಬೇರೆ ಭಾಷೆಗೆ ಅನುವಾದಗೊಳಿಸಲು  ಅಡ್ಡಿಯಾಗಿರುವ ‘ಲೇಖಕರ ಹಕ್ಕು’ ಸಂಬಂಧ ಇರುವ ಸಮಸ್ಯೆಗಳನ್ನು ಪರಿಹರಿಸಲು ಭರವಸೆ ನೀಡಿದ ಅವರು, ಕನ್ನಡ ಭಾಷೆಯಲ್ಲಿ ರಚಿತವಾಗುವ ಎಲ್ಲ ಮೌಲ್ಯಯುತ ಕೃತಿಗಳು ನಾಡಿನ ಆಸ್ತಿಯಾಗಿದ್ದು, ಕನ್ನಡ ಹಾಗೂ ಸಾರಸ್ವತ ಲೋಕಕ್ಕೆ ನೀಡುವ ಕೊಡುಗೆಗಳಾಗಿವೆ ಎಂದರು.

ಚಾರುಲತಾ-ವಸಂತ ಕೃತಿಯ ಬಗ್ಗೆ ವಿಮರ್ಶಕ ರಾಜೇಂದ್ರ ಚನ್ನಿ ಮತ್ತು ಪ್ರೊ.ಮಲ್ಲೇಪುರಂ ಜಿ ವೆಂಕಟೇಶ್ ಕೃತಿಯನ್ನು ಪರಿಚಯಿಸಿ ಮಾತನಾಡಿದರು. ಕೃತಿಯ ರಚನಕಾರ ಹಂಪ ನಾಗರಾಜಯ್ಯ ಮತ್ತು ಅವರ ಪತ್ನಿ ಡಾ.ಕಮಲಾ ಹಂಪನಾ ಅವರನ್ನು ಸಚಿವ ಆರಗ ಜ್ಞಾನೇಂದ್ರ ಈ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು. ಸಾಹಿತಿಗಳಾದ ಡಾ.ಎಚ್.ಎಸ್.ವೆಂಕಟೇಶ್‍ಮೂರ್ತಿ, ಗುರುರಾಜ ಕರ್ಜಗಿ ಹಾಗೂ ಇತರ ಗಣ್ಯರೂ ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X