ನ.26: ದೇರಳಕಟ್ಟೆಯಲ್ಲಿ ಯುನಿವೆಫ್ ನಿಂದ ಸೀರತ್ ಸಮಾವೇಶ
ಮಂಗಳೂರು, ನ.25: ಯುನಿವೆಫ್ ಕರ್ನಾಟಕ 'ಮಾನವೀಯ ಮೌಲ್ಯಗಳು, ಪರಧರ್ಮ ಸಹಿಷ್ಣುತೆ ಮತ್ತು ಪ್ರವಾದಿ ಮುಹಮ್ಮದ್ (ಸ.)' ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ನ.26ರ ಸಂಜೆ 6:45ಕ್ಕೆ ದೇರಳಕಟ್ಟೆಯ ಸಿಟಿ ಗ್ರೌಂಡ್ ನಲ್ಲಿ ಸೀರತ್ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ 'ಜಾಗತಿಕ ಶಾಂತಿಯಲ್ಲಿ ಪ್ರವಾದಿಯ ಪಾತ್ರ' ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story