Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಂಪಿ ವಿಶ್ವ ವಿದ್ಯಾಲಯದಲ್ಲಿ ಹಗರಣ:...

ಹಂಪಿ ವಿಶ್ವ ವಿದ್ಯಾಲಯದಲ್ಲಿ ಹಗರಣ: ಮುಖ್ಯಮಂತ್ರಿ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ25 Nov 2021 5:47 PM IST
share
ಹಂಪಿ ವಿಶ್ವ ವಿದ್ಯಾಲಯದಲ್ಲಿ ಹಗರಣ: ಮುಖ್ಯಮಂತ್ರಿ ಬೊಮ್ಮಾಯಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ

ಬೆಂಗಳೂರು, ನ.25: ಹಂಪಿಯ ಕನ್ನಡ ವಿಶ್ವವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು. ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ದಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ ಎಂದು ಹೇಳಿದ್ದಾರೆ.

ವಿವಿಯಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಸಹ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದುದರಿಂದ, ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು  ತಯಾರಿಸಿ ಅವರನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗದಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಹಾಗೂ ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ,ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X