ಮಂಗಳೂರು; ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳಿಗೆ ಪೊಲೀಸ್ ಕಸ್ಟಡಿ

ಮಂಗಳೂರು, ನ.26: ನಗರ ಹೊರವಲಯದ ಉಳಾಯಿಬೆಟ್ಟು ಸಮೀಪದ ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಪ್ರಕರಣದ ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು ಈ ಆರೋಪಿಗಳಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
ಮಧ್ಯಪ್ರದೇಶದ ಜೈಸಿಂಗ್(21), ಮುಖೇಶ್ ಸಿಂಗ್(20), ಮುನೀಮ್ ಸಿಂಗ್(20) ಹಾಗೂ ಜಾರ್ಖಂಡ್‌ನ ರಾಂಚಿ ಜಿಲ್ಲೆಯ ನಿವಾಸಿ ಮನೀಶ್ ತಿರ್ಕಿ(33) ಬಂಧಿತ ಆರೋಪಿಗಳು.
ಈ ನಾಲ್ವರು ಆರೋಪಿಗಳು ನ. 21ರಂದು ಸಂಜೆ ಆಟವಾಡುತ್ತಿದ್ದ ಬಾಲಕಿಯ ಬಾಯಿ ಮುಚ್ಚಿ ಬಲವಂತವಾಗಿ ಕೊಠಡಿಯೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದರು. ಕೃತ್ಯ ಬಯಲಾಗುವ ಭೀತಿಯಿಂದ ಚೀರಾಡುತ್ತಿದ್ದ ಬಾಲಕಿಯನ್ನು ಆರೋಪಿಗಳು ಕತ್ತು ಹಿಸುಕಿ ಕೊಲೆ ಮಾಡಿ ಚರಂಡಿಯಲ್ಲಿ ಎಸೆದು ಹೋಗಿದ್ದರು.
Next Story





