Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಕ್ಷಿಣ ಕನ್ನಡ-ಯಾದಗಿರಿ ಜಿಲ್ಲೆಯ...

ದಕ್ಷಿಣ ಕನ್ನಡ-ಯಾದಗಿರಿ ಜಿಲ್ಲೆಯ ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ: ಸಚಿವ ಸಂಪುಟ ಸಭೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ25 Nov 2021 10:07 PM IST
share
ದಕ್ಷಿಣ ಕನ್ನಡ-ಯಾದಗಿರಿ ಜಿಲ್ಲೆಯ ತಾಲೂಕುಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ: ಸಚಿವ ಸಂಪುಟ ಸಭೆ ಅನುಮೋದನೆ

ಬೆಂಗಳೂರು, ನ.25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡಬಿದ್ರೆ, ಬಂಟ್ವಾಳ ತಾಲೂಕು ಹಾಗೂ ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮೀಣ ಜನವಸತಿ ಮತ್ತು ಮೂರು ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ ಹಾಗೂ ಹುಣಸಗಿ ಪಟ್ಟಣಗಳಿಗೆ ಕುಡಿಯುವ ನೀರನ್ನು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಜಲಜೀವನ್ ಮಿಷನ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡಬಿದ್ರೆ ತಾಲೂಕಿನ 39 ಹಳ್ಳಿಗಳಿಗೆ ಡಿಬಿಒಟಿ ಆಧಾರದಲ್ಲಿ 145 ಕೋಟಿ ರೂ.ಗಳ ಮತ್ತು ಬಂಟ್ವಾಳ, ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಹಾಗೂ ಇತರೆ 14 ಹಳ್ಳಿಗಳಿಗೆ ಡಿಬಿಒಟಿ ಆಧಾರದ ಮೇಲೆ 73.10 ಕೋಟಿ ರೂ.ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಅದೇ ರೀತಿ, ಜಲಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲ ಗ್ರಾಮೀಣ ಜನ ವಸತಿಗಳಿಗೆ ಹಾಗೂ ಮೂರು ನಗರ ಸ್ಥಳೀಯ ಸಂಸ್ಥೆಗಳಾದ ಕಕ್ಕೆರಾ, ಕೆಂಭಾವಿ ಮತ್ತು ಹುಣಸಗಿ ಪಟ್ಟಣಗಳಿಗೆ ಕುಡಿಯುವ ನೀರನ್ನು ಒದಗಿಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 1358.62 ಕೋಟಿ ರೂ. ಮೊತ್ತಕ್ಕೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

164 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನಗಳನ್ನು 41 ಕೋಟಿ ರೂ.ವೆಚ್ಚದಲ್ಲಿ ಖರೀದಿಸಲು ನಿರ್ಧರಿಸಲಾಗಿದೆ. ನಬಾರ್ಡ್ ಪ್ರಾಯೋಜಿತ ಆರ್‍ಐಡಿಎ-27 ಯೋಜನೆಗಳಡಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಗೆ ಅನುಮೋದನೆಗೊಂಡಿರುವ 79.66 ಕೋಟಿ ರೂ.ಮೊತ್ತದ ಸಿವಿಲ್ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕೆಐಎಡಿಬಿ ಜಮೀನು ಹಂಚಿಕೆ ನೀತಿಗೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಅಪರ ನಿಬಂಧಕರ(ವಿಚಾರಣೆಗಳು) ಹುದ್ದೆಗಳಿಗೆ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ವೃಂದದ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಕರ್ನಾಟಕ ಸಿವಿಲ್ ಸೇವೆಗಳು (ಪರಿವೀಕ್ಷಣೆ) (ತಿದ್ದುಪಡಿ) ನಿಯಮಗಳು 2021ಕ್ಕೆ ಅನುಮೋದನೆ ನೀಡಲಾಗಿದೆ.

2022ನೇ ಸಾಲಿಗೆ ಸಾರ್ವತ್ರಿಕ ರಜೆ ಹಾಗೂ ಪರಿಮಿತ ರಜೆಗಳ ಪಟ್ಟಿಗೆ ಒಪ್ಪಿಗೆ ನೀಡಿರುವ ಸಚಿವ ಸಂಪುಟ ಸಭೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅನುಮೋದನೆಗೊಂಡಿರುವ ಬೈಲಹೊಂಗಲ, ಜೇವರ್ಗಿ ಹಾಗೂ ಕುಷ್ಠಗಿ, ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿಯಲ್ಲಿ ಹೊಸದಾಗಿ ತಾಲೂಕು ಆಸ್ಪತ್ರೆ ಕಟ್ಟಡ ನಿರ್ಮಿಸುವ ಕಾಮಗಾರಿಗೆ 93 ಕೋಟಿ ರೂ.ಬಿಡುಗಡೆ ಮಾಡಲು ನಿರ್ಧರಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಅನುಮೋದನೆಗೊಂಡಿರುವ ಗೌರಿಬಿದನೂರು ತಾಲೂಕು ಮಟ್ಟದ ಆಸ್ಪತ್ರೆ ಮತ್ತು ಸಿಬ್ಬಂದಿ ವಸತಿಗೃಹಗಳ ನಿರ್ಮಾಣಕ್ಕೆ 27 ಕೋಟಿ ರೂ., ಕೋವಿಡ್-19 ಮೂರನೇ ಅಲೆ ಸಿದ್ಧತೆಗಾಗಿ 317 ಕೋಟಿ ರೂ.ಮೊತ್ತದ ಉಪಕರಣ ಮತ್ತು ಪರಿಕರಗಳನ್ನು ಖರೀದಿ ಹಾಗೂ 52 ಕೋಟಿ ರೂ.ಮೊತ್ತದಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟ್ಟಿ ಬಸವಣ್ಣಾ ಕುಡಿಯುವ ನೀರು ಸರಬರಾಜು ಯೋಜನೆಯ 990 ಕೋಟಿ ರೂ.ಮೊತ್ತದ ವಿವರವಾದ ಯೋಜನೆಗೆ ಘಟನೋತ್ತರ ಅನುಮೋದನೆ. ರಾಜ್ಯ ಅಣೆಕಟ್ಟು ಸುರಕ್ಷತಾ ಸಂಸ್ಥೆ ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ರಾಷ್ಟ್ರೋತ್ಥಾನ ಪರಿಷತ್‍ಗೆ 9.32 ಎಕರೆ ಭೂಮಿ

ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿ ಹುರಳಿಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ.69ರಲ್ಲಿ 9.32 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ರಾಷ್ಟ್ರೋತ್ಥಾನ ಪರಿಷತ್‍ಗೆ ಮಂಜೂರು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X