Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೈಕ್ಷಣಿಕ ವಲಯ-ಉದ್ಯಮ ವಲಯದ ಸಂಬಂಧ...

ಶೈಕ್ಷಣಿಕ ವಲಯ-ಉದ್ಯಮ ವಲಯದ ಸಂಬಂಧ ಮತ್ತಷ್ಟು ಗಟ್ಟಿ: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಉದ್ಯೋಗಾವಕಾಶ ಹೆಚ್ಚಿಸಲು ‘ಕೈಗಾರಿಕಾ ಸಂಪರ್ಕ ಕೋಶ’ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Nov 2021 11:05 PM IST
share
ಶೈಕ್ಷಣಿಕ ವಲಯ-ಉದ್ಯಮ ವಲಯದ ಸಂಬಂಧ ಮತ್ತಷ್ಟು ಗಟ್ಟಿ: ಡಾ.ಸಿ.ಎನ್.ಅಶ್ವತ್ಥ ನಾರಾಯಣ


ಬೆಂಗಳೂರು, ನ.25: ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಪ್ರಬಲ ಬಾಂಧವ್ಯ ಬೆಳೆಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪಿಸಿರುವ `ಕೈಗಾರಿಕಾ ಸಂಪರ್ಕ ಕೋಶ’ಕ್ಕೆ ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು. 

ಗುರುವಾರ ನಗರದ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಏರ್ಪಡಿಸಿದ್ದ ಎಲೆಕ್ಟ್ರಾನಿಕ್ ವಲಯದ ಉದ್ದಿಮೆಗಳ `ಕೈಗಾರಿಕಾ ಸಂಪರ್ಕ ಸಮಾವೇಶ’ದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಈ ಕೋಶವು ಕೇಂದ್ರೀಕೃತ ವ್ಯವಸ್ಥೆಯಾಗಿದ್ದು, ರಾಜ್ಯದಲ್ಲಿರುವ ಕೌಶಲ್ಯದ ಗುಣಮಟ್ಟ ಮತ್ತು ಪ್ರಸ್ತುತತೆಯನ್ನು ಸುಧಾರಿಸುವ ಗುರಿ ಹೊಂದಿದೆ. ಇದರಿಂದ ಪ್ರವರ್ಧಮಾನಕ್ಕೆ ಬರುತ್ತಿರುವ ಉದ್ಯಮ ವಲಯಗಳ ನಡುವೆ ಕಾರ್ಯತಂತ್ರ ಬಾಂಧವ್ಯ ಬಲವರ್ಧನೆ ಆಗಲಿದ್ದು, ಕೌಶಲ್ಯ ಪೂರೈಕೆ ಜಾಲವೂ ಪ್ರಬಲವಾಗಲಿದೆ ಎಂದರು. 

ಉದ್ದಿಮೆಗಳೊಂದಿಗೆ ಸಂಪರ್ಕ ಹೊಂದುವುದರಿಂದ ಅವುಗಳ ಬೇಡಿಕೆಗೆ ತಕ್ಕಂತೆ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಅವಕಾಶಗಳು ಸಿಗಲಿವೆ. ಇದರಿಂದ ಅಂತಿಮವಾಗಿ ಕೌಶಲಗಳ ಪೂರೈಕೆಯಲ್ಲಿ ಈಗಿರುವ ಕೊರತೆ ನೀಗಲಿದ್ದು, ಕೈಗಾರಿಕೆಗಳಿಗೆ ಕೂಡ ಅಪೇಕ್ಷಿತ ಮಾನವ ಸಂಪನ್ಮೂಲ ಸಿಗಲಿದೆ. ಜತೆಗೆ ನಿರುದ್ಯೋಗವನ್ನು ಎದುರಿಸುತ್ತಿರುವ ಯುವಜನರಿಗೆ ಉತ್ತಮ ಉದ್ಯೋಗಗಳು ಸಿಗಲಿವೆ ಎಂದು ಅವರು ತಿಳಿಸಿದರು. 
ಕೇಂದ್ರ ಸರಕಾರದ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳು ಅಗಾಧವಾಗಿ ಬೆಳೆಯುತ್ತಿವೆ. ಇದು ದೇಶದಲ್ಲಿ ಅಪಾರ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಕಾರಣವಾಗಲಿದೆ. ಇದನ್ನು ಪರಿಗಣಿಸಿ, ರಾಜ್ಯದಲ್ಲಿ `ಕೈಗಾರಿಕಾ ಸಂಪರ್ಕ ಕೋಶ’ವನ್ನು ಆರಂಭಿಸಲಾಗಿದೆ. ಇದು ಶೈಕ್ಷಣಿಕ ವಲಯ ಹಾಗೂ ಉದ್ಯಮ ವಲಯದ ನಡುವಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿದೆ ಎಂದು ಅವರು ವಿವರಿಸಿದರು. 

`ಕೌಶಲಗಳಿಗೆ ಸಂಬಂಧಿಸಿದಂತೆ ಉದ್ಯಮಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಇರುವ ಅಂತರವನ್ನು ಕೊನೆಗೊಳಿಸಬೇಕಾದ ಅಗತ್ಯವಿದೆ. ಕೈಗಾರಿಕಾ ಸಂಪರ್ಕ ಕೋಶವು ರಾಜ್ಯದ 31 ಜಿಲ್ಲೆಗಳಲ್ಲೂ ಉದ್ದಿಮೆಗಳೊಂದಿಗಿನ ಸಂಪರ್ಕವನ್ನು ಬೆಳೆಸಿಕೊಳ್ಳುವ ಚಟುವಟಿಕೆಗಳ ಮೇಲೆ ನಿಗಾ ಇಡಲಿದೆ. ಸರಕಾರವು ಉದ್ದಿಮೆಗಳ ಬೆಳವಣಿಗೆಗೆ ಕೌಶಲ್ಯ ಸಲಹಾ ಸಮಿತಿ ಮತ್ತು ರಾಜ್ಯದ ಆದ್ಯತಾ ವಲಯಗಳಿಗೆ ಸಂಬಂಧಿಸಿದಂತೆ ಉಪಸಮಿತಿಗಳನ್ನು ರಚಿಸಲಿದೆ. ಅಲ್ಲದೆ, ಸಂಬಂಧಿತ ಉದ್ದಿಮೆಗಳೊಂದಿಗೆ ಸೇರಿಕೊಂಡು ಸುಸ್ಥಿರ ಮತ್ತು ಗುಣಮಟ್ಟದ ಕೌಶಲ್ಯ ತರಬೇತಿ ಸಂಸ್ಥೆಗಳನ್ನು ರಾಜ್ಯದಾದ್ಯಂತ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು. 

ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ, ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಒಕ್ಕೂಟ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ಸೇರಿ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದವು. ಕಾರ್ಯಕ್ರಮದಲ್ಲಿ ಎಲ್ಸಿಯಾ ಮುಖ್ಯಸ್ಥ ಭವೇಶ್ ಕುಮಾರ್, ಸಿಇಒ ಎನ್.ಎಸ್.ರಮಾ, ಇಎಸ್ ಡಿಸಿ ಮುಖ್ಯಸ್ಥ ಎ.ವೈದ್ಯನಾಥನ್, ಸರಕಾರದ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಮತ್ತು ವ್ಯವಸ್ಥಾಪಕಿ ಕವಿತಾ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X