Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಂಬೆಟ್ಟು ಕಾಲೇಜು ಘಟನೆ ಮರುಕಳಿಸದಂತೆ...

ಕೊಂಬೆಟ್ಟು ಕಾಲೇಜು ಘಟನೆ ಮರುಕಳಿಸದಂತೆ ಕ್ರಮ : ಶಾಸಕ ಸಂಜೀವ ಮಠಂದೂರು

'ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಕೌನ್ಸಿಲ್'

ವಾರ್ತಾಭಾರತಿವಾರ್ತಾಭಾರತಿ26 Nov 2021 4:32 PM IST
share
ಕೊಂಬೆಟ್ಟು ಕಾಲೇಜು ಘಟನೆ ಮರುಕಳಿಸದಂತೆ ಕ್ರಮ : ಶಾಸಕ ಸಂಜೀವ ಮಠಂದೂರು

ಪುತ್ತೂರು : ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುವ ಯಾವುದೇ ರೀತಿಯ ಚಟುವಟಿಕೆಗಳಿಗೆ ಅಥವಾ ಅಹಿತಕರ ಘಟನೆಗಳಿಗೆ, ವಿದ್ಯಾರ್ಥಿಗಳ ನಡುವೆ ಘರ್ಷಣೆಗೆ ಅವಕಾಶವಾಗಬಾರದು ಹಾಗೂ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಹಾಗೂ ಶೈಕ್ಷಣಿಕ ಶಿಸ್ತನ್ನು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‍ನಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ. ವಿದ್ಯಾರ್ಥಿಗಳ ನಡುವೆ ಘರ್ಷಣೆ ತಡೆಯುವ ನಿಟ್ಟಿನಲ್ಲಿ ಪ್ರತಿ ತಿಂಗಳು ಕಾಲೇಜ್‍ಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಿಲ್ ನಡೆಸುವಂತೆ  ಪುತ್ತೂರು ಶಾಸಕ ಸಂಜೀವ ಮಠಂದೂರು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

ಅವರು ಶುಕ್ರವಾರ ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‍ನಲ್ಲಿ ಎಸ್‍ಡಿಎಂಸಿ, ಅಭಿವೃದ್ಧಿ ಸಮಿತಿ ಹಾಗೂ ಮಕ್ಕಳ ಪೋಷಕರ ಸಭೆಯನ್ನು ನಡೆಸಿ ಮಂಗಳವಾರ ಮತ್ತು ಬುಧವಾರದಂದು ನಡೆದ ಘಟನೆಯ ಕುರಿತಂತೆ ವಿವರಗಳನ್ನು ಪಡೆದುಕೊಂಡರು.

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಅಶಿಸ್ತಿನ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿ ಪೋಷಕರಿಗೆ ತಿಳಿಸಿರುವುದಾಗಿ ಹೇಳಿದರು.

ಪ್ರತೀ ತಿಂಗಳು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಅವರು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಕ್ರಮಕೈಗೊಳ್ಳಲಾಗುವುದು. ಈ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದಲ್ಲಿ ಉತ್ತಮ ಫಲಿತಾಂಶ ಬರುವಂತೆ ಪ್ರಯತ್ನಿಸಬೇಕೆಂದು ಅಧ್ಯಾಪಕರು ಮತ್ತು ಉಪನ್ಯಾಸಕರಿಗೆ ಸೂಚನೆ ನೀಡಿರುವುದಾಗಿ ಶಾಸಕರು ತಿಳಿಸಿದರು.

ತಾಲೂಕಿನ ಅತ್ಯಂತ ಹಿರಿಯ ಶಿಕ್ಷಣ ಸಂಸ್ಥೆಯಾದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‍ನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲರೂ ಶ್ರಮಿಸುವಂತೆ ಶಾಸಕರು ಸಭೆಯಲ್ಲಿ ವಿನಂತಿಸಿದರು.

ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‍ನಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಹಾಗೂ ಸಂಸ್ಥೆಯ ಅಭಿವೃದ್ಧಿಗಾಗಿ ಸರಕಾರದಿಂದ ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವಲ್ಲಿ ಎಸ್‍ಡಿಎಂಸಿ, ಅಭಿವೃದ್ಧಿ ಸಮಿತಿ ಮತ್ತು ಮಕ್ಕಳ ಪೋಷಕರು ಶ್ರಮಿಸಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.

ಈ ಸಂದರ್ಭ ಎಸ್‍ಡಿಎಂಸಿ ಕಾರ್ಯಾಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಕಾಲೇಜ್‍ನ ಪ್ರಾಂಶುಪಾಲ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X