Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಕರೂಪದ ರಾಷ್ಟ್ರೀಯತೆ ಸಂವಿಧಾನದ ಭದ್ರ...

ಏಕರೂಪದ ರಾಷ್ಟ್ರೀಯತೆ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 Nov 2021 6:18 PM IST
share
ಏಕರೂಪದ ರಾಷ್ಟ್ರೀಯತೆ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ: ಸಿದ್ದರಾಮಯ್ಯ

ಬೆಂಗಳೂರು, ನ.26: ಇಂದು ರಾಷ್ಟ್ರೀಯತೆ ಎಂಬ ಪದ ಹಲವು ವಾದ-ವಿವಾದಗಳು, ಚರ್ಚೆಗಳನ್ನು ಹುಟ್ಟುಹಾಕಿದೆ. ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳೇ ರಾಷ್ಟ್ರೀಯತೆ ಎಂಬಂತೆ ಬಿಂಬಿಸಲಾಗುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಸಂವಿಧಾನ ದಿನದ ಅಂಗವಾಗಿ ಸಂದೇಶ ನೀಡಿರುವ ಅವರು, ಧರ್ಮನಿರಪೇಕ್ಷತೆ ಸಂವಿಧಾನದ ಮೂಲ ಆಶಯಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಇಷ್ಟವಾದ ಧರ್ಮವನ್ನು ಆಚರಿಸುವ, ಅನುಸರಿಸುವ ಪಾಲಿಸುವ ಹಕ್ಕು ನೀಡಿದೆ. ರಾಜಕಾರಣ ಮತ್ತು ಶಿಕ್ಷಣದಲ್ಲಿ ಧರ್ಮ ಇಣುಕಬಾರದು ಎಂಬುದು ಧರ್ಮನಿರಪೇಕ್ಷತೆಯ ಆಶಯವೂ ಹೌದು. ಭಾರತ ಸಂವಿಧಾನದ ಮೂಲ ಆಶಯವೂ ಇದಾಗಿದೆ. ಸಂವಿಧಾನ ವಿಜ್ಞಾನವನ್ನು ಪ್ರತಿಪಾದಿಸುತ್ತದೆ ಮೂಢನಂಬಿಕೆಯನ್ನಲ್ಲ ಎಂದು ಹೇಳಿದ್ದಾರೆ.  

ಭಾರತ ಹಲವು ವೈವಿಧ್ಯತೆ, ಆಚಾರ, ವಿಚಾರ, ಸಂಸ್ಕೃತಿಗಳನ್ನು ತನ್ನ ಉದರದಲ್ಲಿ ಕಾಪಿಟ್ಟುಕೊಂಡಿದೆ. ಇಂತಹ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಮುನ್ನಡೆಯಲು ನಾವು ಮತ್ತೊಮ್ಮೆ ಮತ್ತೊಮ್ಮೆ ಸಂಕಲ್ಪ ಮಾಡಬೇಕಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿದಿನ ನಮಗೆ ಸಂವಿಧಾನದ ದಿನವಾಗಬೇಕು. ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂಬ ಹೆಮ್ಮೆಯನ್ನು ನಮಗೆ ತಂದುಕೊಟ್ಟಿರುವುದು ನಮ್ಮ ಸಂವಿಧಾನ. ಧರ್ಮನಿರಪೇಕ್ಷತೆ, ಪ್ರಜಾಸತ್ತಾತ್ಮಕ ಮತ್ತು ಗಣತಂತ್ರ ಎಂಬ ಮಂತ್ರಗಳು ನಮ್ಮ ಸಂವಿಧಾನದ ಆಧಾರ ಸ್ತಂಭಗಳಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. 

ಭಾರತ ಸಂವಿಧಾನ ಸಮಾನತೆಯನ್ನು ಸಾರಿ ಹೇಳಿದೆ. ಯಾವುದೇ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗಿಂತ ಮೇಲೂ ಅಲ್ಲ ಕೀಳೂ ಅಲ್ಲ. ಹಾಗಾಗಿಯೇ ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವವನ್ನು ಅಳವಡಿಸಲಾಗಿದೆ. ಸಂವಿಧಾನದ ಇಂತಹ ಎಲ್ಲ ಆಶಯಗಳನ್ನು ಎತ್ತಿಹಿಡಿಯುವುದು ಇಂದು ನಮ್ಮೆಲ್ಲರ ಮುಂದಿರುವ ಜವಾಬ್ದಾರಿ ಮತ್ತು ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ತಾವೇ ರಚಿಸಿರುವ ಸಂವಿಧಾನದ ಬುನಾದಿ ಮೇಲೆ ಭವಿಷ್ಯದ ಭಾರತವನ್ನು ನಿರ್ಮಾಣ ಮಾಡಲು ಬಯಸಿದ್ದರು. ಆದರೆ ಸಂವಿಧಾನವನ್ನು ಮನಃಪೂರ್ವಕವಾಗಿ ಒಪ್ಪದೆ ಇದ್ದ ಹಿಂದೂ ಧರ್ಮದೊಳಗಿದ್ದ ಒಂದು ವರ್ಗ ಮನುಸ್ಮøತಿ ಆಧಾರದಲ್ಲಿ ಸಮಾಜವನ್ನು ನಿರ್ಮಾಣ ಮಾಡಲು ಹೊರಟಿರುವುದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿಯೇ ಅವರು ಹಿಂದೂ ಧರ್ಮವನ್ನು ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೋಗಗ್ರಸ್ತ ಮನಸ್ಸುಗಳಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಹೆಚ್ಚು ಪ್ರಿಯ: ಪರಿಸ್ಥಿತಿಯಲ್ಲಿ ಹೆಚ್ಚು ಬದಲಾವಣೆಯಾಗಿಲ್ಲ. ಈಗಲೂ ಹಿಂದೂ ಧರ್ಮದೊಳಗಿರುವ ರೋಗಗ್ರಸ್ತ ಮನಸ್ಸುಗಳಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಹೆಚ್ಚು ಪ್ರಿಯವೆನಿಸಿದೆ. ಅದು ಸಾರಿರುವ ಜಾತಿ ವ್ಯವಸ್ಥೆಯ ಬುಡ ಭದ್ರಪಡಿಸುವ ಕೆಲಸವನ್ನು ಈ ವರ್ಗ ಗುಟ್ಟಾಗಿ ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಈ ದೇಶದ ಪ್ರಧಾನಿಯಾಗಲಿ, ಅವರ ಪಕ್ಷವಾಗಲಿ ಬಾಯಿಮಾತಿಗಾದರೂ ಸಚಿವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸುವುದಿಲ್ಲ. ಇದರ ಅರ್ಥ ತಮ್ಮ ಬಾಯಿಯಿಂದ ಹೇಳಬೇಕೆಂದಿರುವುದನ್ನು ಅವರು ಈ ಸಚಿವರ ಬಾಯಿಯಿಂದ ಹೇಳಿಸಿದ್ದಾರೆ. ಇದನ್ನು ನಾವು ತಿಳಿದುಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂತಹವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ, ಅದು ಸಾರುವ ಆಶಯಗಳಲ್ಲಿ ನಂಬಿಕೆ ಇಲ್ಲ. ಸಾಮಾಜಿಕ ನ್ಯಾಯದ ಸಿದ್ಧಾಂತ, ಜಾತಿನಾಶ, ಅಸ್ಪøಶ್ಯತೆಯ ನಿರ್ಮೂಲನೆ ಯಾವುದೂ ಅವರಿಗೆ ಬೇಕಾಗಿಲ್ಲ. ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವ ಯಥಾಸ್ಥಿತಿವಾದಿಗಳು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಸಂವಿಧಾನ ನಮಗೆ ನೀಡಿರುವ ಮತ್ತೊಂದು ಮಹತ್ವದ ಕೊಡುಗೆ. ಮಾನವ ಬೆಳವಣಿಗೆಯ ಇತಿಹಾಸದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯುನ್ನತ ಘಟ್ಟ. ನಮ್ಮ ಸಂವಿಧಾನ ಇದನ್ನು ಯಾವುದೇ ಧರ್ಮ, ಜಾತಿ, ಲಿಂಗ ತಾರತಮ್ಯವಿಲ್ಲದೆ ಕಲ್ಪಿಸಿದೆ. ಈ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈಗ ನಮ್ಮ ಮುಂದಿರುವ ಸವಾಲು ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಿಂತಲೂ ಮೊದಲು ಸಮಾನತೆ ಸ್ಥಾಪನೆಯಾಗಬೇಕು ಎಂದು ಅಂಬೇಡ್ಕರ್ ಬಯಸಿದ್ದರು. ನಾವು ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ತೃಪ್ತರಾಗಬಾರದು, ರಾಜಕೀಯ ಪ್ರಜಾತಂತ್ರವನ್ನು ಸಾಮಾಜಿಕ ಪ್ರಜಾತಂತ್ರವನ್ನಾಗಿ ಮಾಡಬೇಕು. ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ಇದ್ದರೆ ರಾಜಕೀಯ ಪ್ರಜಾತಂತ್ರ ಯಶಸ್ಸು ಕಾಣಲಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತದಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಸುಧಾರಿಸದೆ ಆರ್ಥಿಕ ಸುಧಾರಣೆ ತರಲು ಹೇಗೆ ಸಾಧ್ಯ? ಎಂದು ಡಾ.ಅಂಬೇಡ್ಕರ್ ಕೇಳಿದ್ದರು. ಜಾತಿ ವ್ಯವಸ್ಥೆಯಂತಹ ಭೀಕರ ಸಾಮಾಜಿಕ ರೋಗಕ್ಕೆ ಬಲಿಯಾಗಿರುವ ಭಾರತದ ಅಭಿವೃದ್ದಿ ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಸಾಧ್ಯ ಇಲ್ಲ ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಈ ಅಭಿಪ್ರಾಯವೇ ಅಂಬೇಡ್ಕರ್ ಮತ್ತು ಗಾಂಧೀಜಿ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.

ಉಳ್ಳವರ ಕೈಗೆ ರಾಜಕೀಯ ಅಧಿಕಾರವನ್ನು ನೀಡುವುದರಿಂದ ಬಡವರು, ಜಾತಿ ವ್ಯವಸ್ಥೆಗೆ ಬಲಿಯಾದ ಶೋಷಿತರು ಇನ್ನಷ್ಟು ಅನ್ಯಾಯ ಶೋಷಣೆಗೊಳಗಾಗುತ್ತಾರೆ. ಇದನ್ನು ತಪ್ಪಿಸಬೇಕಾದರೆ ಮೊದಲು ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆದುಕೊಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಸಾಧಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯವನ್ನು ನಿವಾರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಸವಣ್ಣ ಮತ್ತು ಅಂಬೇಡ್ಕರ್ ವೈಯಕ್ತಿಕವಾಗಿ ನನಗೆ ಜ್ಞಾನಗುರುಗಳು, ನಾನು ಬಸವ ಜಯಂತಿಯ ದಿನವೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೆಂದರೆ ಅಂಬೇಡ್ಕರ್ ಆಶಯಗಳನ್ನು ಜಾರಿಗೆ ತಂದ ಹಾಗೆ. ಅದೇ ರೀತಿ ಅಂಬೇಡ್ಕರ್ ಆಶಯಗಳನ್ನು ಜಾರಿಗೆತರುವುದೆಂದರೆ ಅದು ಬಸವಣ್ಣನ ಚಿಂತನೆಗಳನ್ನು ಜಾರಿಗೆ ತಂದ ಹಾಗೆ ಎಂದು ಅವರು ಹೇಳಿದ್ದಾರೆ.

ಬಸವಣ್ಣ ಮತ್ತು ಅಂಬೇಡ್ಕರ್ ಸಿದ್ಧಾಂತಗಳ ನಡುವೆ ಹಲವಾರು ಬಗೆಯ ಸಾಮ್ಯತೆಗಳನ್ನು ಕಂಡುಕೊಳ್ಳಲು ಸಾಧ್ಯ. ಬಸವಣ್ಣನವರು ಕಟ್ಟಿ ಬೆಳೆಸಿದ ಅನುಭವ ಮಂಟಪಕ್ಕೂ, ಅಂಬೇಡ್ಕರ್ ಸಂವಿಧಾನದ ಮೂಲಕ ನೀಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗೂ ಸಾಮ್ಯತೆಗಳಿವೆ. ಇಬ್ಬರ ದೃಷ್ಟಿಯಲ್ಲಿಯೂ ಸಾಮಾನ್ಯ ಜನರೇ ಪ್ರಭುಗಳೂ. ಇಬ್ಬರೂ ಜಾತಿ-ಮತ ಮೀರಿದ ಸಮಾನತೆಯ ಹರಿಕಾರರು. ಇಬ್ಬರೂ ಸಮಾಜದ ಪಿಡುಗುಗಳಾದ ವರ್ಣ ವ್ಯವಸ್ಥೆ, ಜಾತಿತಾರತಮ್ಯ ಮತ್ತು ವೈದಿಕಶಾಹಿಯನ್ನು ವಿರೋಧಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಕೋಮುವಾದ, ಜಾತಿತಾರತಮ್ಯ, ಮೂಢನಂಬಿಕೆ, ಕಂದಾಚಾರ ಮೊದಲಾದ ಸಾಮಾಜಿಕ ಪಿಡುಗುಗಳೆಲ್ಲ ಮತ್ತೆ ತಲೆ ಎತ್ತಲು ಪ್ರಯತ್ನಿಸುತ್ತಿರುವ ಈ ಹೊತ್ತಿನಲ್ಲಿ ಅದರ ವಿರುದ್ಧದ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದವರ ತತ್ವ-ಸಿದ್ಧಾಂತಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X