Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಜುಮನ್ ಕಾಲೇಜಿನಲ್ಲಿ ಸಂವಿಧಾನ...

ಅಂಜುಮನ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Nov 2021 11:02 PM IST
share
ಅಂಜುಮನ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಭಟ್ಕಳ: ಸಂವಿಧಾನದತ್ತವಾದ ಹಕ್ಕುಗಳನ್ನು ನ್ಯಾಯ ಮಾರ್ಗದಲ್ಲಿ ಪಡೆದುಕೊಳ್ಳುತ್ತ ಸಂವಿಧಾನ ಸೂಚಿಸಿದ ಕರ್ತವ್ಯಗಳನ್ನು ಪರಿಪಾಲಿಸುತ್ತ ಘನತೆವೆತ್ತ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕೆಂದು ಶಿರಾಲಿಯ ಜನತಾವಿದ್ಯಾಲಯದ ಉಪನ್ಯಾಸಕ ಪ್ರೊ. ರವಿ ಚಿತ್ರಾಪುರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅಂಜುಮನ್ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದ ಮುಖ್ಯ ಅತಿಥಿ ಮತ್ತು ಪ್ರಧಾನ ಭಾಷಣಕಾರರಾಗಿ ಆಗಮಿಸಿದ ರವಿ ಚಿತ್ರಾಪುರ, ಸಂವಿಧಾನ ರಚನೆಯ ಹಿನ್ನೆಲೆ, ಸಂವಿಧಾನ ರಚನಾಕಾರರು ಜಗತ್ತಿನಲ್ಲಿಯೇ ಉತ್ತಮ ಸಂವಿಧಾನವನ್ನು ರಚಿಸುವಲ್ಲಿ ಪಟ್ಟ ಪರಿಶ್ರಮ, ಸಂವಿಧಾನದ ಯಾವ ಯಾವ ಭಾಗದಲ್ಲಿ ಯಾವ ಯಾವ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ, ಜಗತ್ತಿನ ಬೇರೆ ಬೇರೆ ದೇಶಗಳ ಸಂವಿಧಾನದಿಂದ ಯಾವ ಯಾವ ಅಂಶಗಳನ್ನು ಎತ್ತಿಕೊಳ್ಳಲಾಗಿದೆ ಇತ್ಯಾದಿ ವಿಚಾರಗಳನ್ನು ಎಳೆಯೆಳೆಯಾಗಿ ತಿಳಿಸಿಕೊಟ್ಟರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಎಂ. ಕೆ. ಶೇಖ್ ಭಾರತೀಯ ಸಂವಿಧಾನದ ಶ್ರೇಷ್ಠತೆಯನ್ನು ಹೇಳುವುದರ ಜೊತೆಗೆ, ಸಂವಿಧಾನದ ನೆರಳಿನಡಿಯಲ್ಲಿ ಭಾರತೀಯರಾದ ನಾವೆಲ್ಲ ಯಾವುದೇ ಜಾತಿ ಮತ ಧರ್ಮ ಭಾಷೆ ಲಿಂಗ ಪ್ರದೇಶಗಳ ಬೇಧವಿಲ್ಲದೆ ಒಂದಾಗಿದ್ದೇವೆ ಎಂಬುದನ್ನು ನೆನಪಿಸುವುದರ ಜೊತೆಗೆ ಸಂವಿಧಾನದ ಆಶಯಗಳಿಗೆ ಕುಂದು ಬರದಂತೆ ನಡೆದುಕೊಳ್ಳಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. 

ರಾಷ್ಟ್ರೀಯ ಸೇವಾ ಯೋಜನ ಘಟಕದ ಅಧಿಕಾರಿಯಾದ ಪ್ರೊ. ಆರ್. ಎಸ್. ನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಿ ಸರ್ವರನ್ನು ಸ್ವಾಗತಿಸಿದರೆ, ವಿದ್ಯಾರ್ಥಿ ಶ್ರೇಯಸ್ ನಾಯಕ ಅತಿಥಿಗಳನ್ನು ಪರಿಚಯಿಸಿದರು. ಆರಂಭದಲ್ಲಿ ನಯೀಮ್ ಪ್ರಾರ್ಥಿಸಿದರೆ, ಕೊನೆಯಲ್ಲಿ ಸ್ವಾತಿ ನಾಯ್ಕ ವಂದಿಸಿದರು.

ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್. ಎ. ಇಂಡಿಕರ್ ಮತ್ತು ಪ್ರೊ. ಬಿ. ಎಚ್. ನದಾಫ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕುಮಾರಿ ನಯನಾ ಮೊಗೇರ ಮತ್ತು ದೀಪಾ ನಾಯ್ಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಕುಮಾರಿ ಲಾವಣ್ಯ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X