Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.27: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ...

ನ.27: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ26 Nov 2021 11:09 PM IST
share
ನ.27: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ವಿಟ್ಲ :   ಮಾಣಿ‌ ಬಾಲವಿಕಾಸ‌ ಆಂಗ್ಲಮಾಧ್ಯಮ ಶಾಲೆಯ  ನೂತನ ಕಟ್ಟಡವು  ಮಾಣಿ ಜಂಕ್ಷನ್ ನಿಂದ 600 ಮೀಟರ್ ದೂರದ  ವಿದ್ಯಾನಗರ ಪಾಳ್ಯದಲ್ಲಿ ನಿರ್ಮಾಣಗೊಳ್ಳಲಿದ್ದು, ನ.27 ರಂದು ಶಿಲಾನ್ಯಾಸ ನೆರವೇರಲಿದೆ ಎಂದು  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಸಿ. ಶ್ರೀಧರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1989 ರಲ್ಲಿ ಶ್ರೀ ವಿದ್ಯಾ ಆಂಗ್ಲಮಾಧ್ಯಮ ಶಾಲೆ ಎನ್ನುವ ಹೆಸರಿನಲ್ಲಿ ಆರಂಭ ಗೊಂಡು ನಂತರದ ದಿನಗಳಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಎಂದು ಹೆಸರು ಪಡೆದುಕೊಂಡು ಕಳೆದ 32  ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತರವಾದ ಸಾಧನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗಾಗಿ ಸದ್ರಿ ಶಾಲಾ ಕಟ್ಟಡವನ್ನು ತೆರವುಗೊಳಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಗೆ ಸಮೀಪದ  ಮಾಣಿ-ಮೈಸೂರು ರಸ್ತೆಯ ವಿದ್ಯಾನಗರ ಪಾಳ್ಯದಲ್ಲಿ 12 ಕೋಟಿ ರೂ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು  ಶಾಲಾ ಆಡಳಿತ ಮಂಡಳಿ ಯೋಜನೆ  ರೂಪಿಸಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿಯೇ ನೂತನ ಕಟ್ಟಡದ ತರಗತಿ ಕೋಣೆಗಳನ್ನು ವಿನ್ಯಾಸಗೊಳಿಸಲಾಗಿದ್ದು  ಮುಂದಿನ ಜೂನ್ ಗೆ ನೂತನ ಕಟ್ಟಡದಲ್ಲಿಯೇ ಶಾಲೆ ಮುನ್ನಡೆಸಬೇಕೆಂಬ ಇರಾದೆ ಇರಿಸಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಶನಿವಾರ ಅಪರಾಹ್ನ 12 ಗಂಟೆಗೆ ನಡೆಯಲಿದ್ದು ಪುತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ  ರವರ ಅಧ್ಯಕ್ಷತೆಯಲ್ಲಿ ನಡೆಯುವ  ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವರು. ಪಿ.ಎಸ್.ಸಚ್ಚಿದಾನಂದ ರೈ ಪಾಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಮಾದರಿ ಶಾಲೆಯ ಕಲ್ಪನೆಯಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿ ಪಠ್ಯ ಹಾಗೂ ಸಹ ಪಠ್ಯಚಟುವಟಿಕೆಗಳನ್ನೂ ಅಳವಡಿಸಲಾಗಿದೆ. ಯೋಗ, ನಾಟಕ, ಯಕ್ಷಗಾನ, ಸಂಗೀತ, ಭರತನಾಟ್ಯ ಮೊದಲಾದ ಕಲೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ  ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಸ್.ನಾಯ್ಕ್, ಟ್ರಸ್ಟಿ ಪುಷ್ಪರಾಜ ಹೆಗ್ಡೆ,  ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಶೆಟ್ಟಿ, ಶಾಲಾ ಮುಖ್ಯ ಶೈಕ್ಷಣಿಕ ಅಧಿಕಾರಿ ರವೀಂದ್ರ ಡಿ, ಶಾಲಾ ಮುಖ್ಯ ಶಿಕ್ಷಕಿ‌ ವಿಜಯಲಕ್ಷ್ಮೀ‌ ವಿ.ಶೆಟ್ಟಿ ಮೊದಲಾದವರು‌ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X