Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮದುವೆಗೆ ಒತ್ತಾಯ: ಬಾಲಕಿಗೆ ವಿದ್ಯಾಭ್ಯಾಸ...

ಮದುವೆಗೆ ಒತ್ತಾಯ: ಬಾಲಕಿಗೆ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 Nov 2021 11:16 PM IST
share
ಮದುವೆಗೆ ಒತ್ತಾಯ: ಬಾಲಕಿಗೆ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಕಲ್ಪಿಸಿದ ಹೈಕೋರ್ಟ್

ಬೆಂಗಳೂರು, ನ.26: ವಿದ್ಯಾಭ್ಯಾಸ ಮಾಡುವ ಆಸೆಯಿದ್ದ ಮಗಳನ್ನು ಪೋಷಕರು ಮದುವೆಯಾಗುವಂತೆ ಒತ್ತಾಯಿಸಿದ್ದರಿಂದ ಆಕೆ ಮನೆ ಬಿಟ್ಟು ಹೋಗಿದ್ದಳು. ಬಾಲಕಿ ಮನವಿ ಆಲಿಸಿದ ಹೈಕೋರ್ಟ್, ಆಕೆಗೆ ಬಾಲಮಂದಿರದಲ್ಲಿ ಇದ್ದು ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ ಕಲ್ಪಿಸಿಕೊಟ್ಟಿದೆ.

ಶಿಕ್ಷಣ ಮೊಟಕುಗೊಳಿಸಿ ಮದುವೆಯಾಗುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ ಎಂಬ ಕಾರಣಕ್ಕೆ ಹದಿನೇಳುವರೆ ವರ್ಷದ ಅಪ್ರಾಪ್ತೆಯೊಬ್ಬಳು ಮನೆಬಿಟ್ಟು ಗೋವಾದಲ್ಲಿರುವ ಸಹೋದರನ ಮನೆಗೆ ಹೋಗಿದ್ದಳು. ಮಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ಯಾರೋ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದ ಪೋಷಕರು, ಹುಡುಕಿಕೊಡುವಂತೆ ಪೊಲೀಸರಿಗೆ ನಿರ್ದೇಶನ ಕೋರಿ ತಾಯಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಗದಗದ ಲಕ್ಷ್ಮೇಶ್ವರ ಠಾಣೆ ಪೊಲೀಸರು ಅಪ್ರಾಪ್ತ ಬಾಲಕಿಯನ್ನು ಪತ್ತೆಹಚ್ಚಿ ಶುಕ್ರವಾರ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ, ಬಾಲಕಿಗೆ ಪೋಷಕರೊಟ್ಟಿಗೆ ಹೋಗಲು ಸೂಚಿಸಿತು. 

ಈ ವೇಳೆ ಬಾಲಕಿ ನಿರಾಕರಿಸಿದಳು. ಜತೆಗೆ ಸರಕಾರ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಪೋಷಕರು ಶಿಕ್ಷಣ ಮೊಟಕುಗೊಳಿಸಿ ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ, ಬಾಲಕಿ ಮನೆ ಬಿಟ್ಟು ಹೋಗಿದ್ದಳು ಎಂದರು.

ಇದೇ ವೇಳೆ ಬಾಲಕಿ ಕೂಡ ಪೋಷಕರೊಂದಿಗೆ ಮನೆಗೆ ಹೋಗುವುದಿಲ್ಲ ಎಂದು ತಿಳಿಸಿದಳಲ್ಲದೇ, ಬೇರೆಡೆ ಉಳಿಯಲು ಅವಕಾಶ ಕೋರಿದಳು. ತಾಯಿ ಪರ ವಕೀಲರು, ಅಪ್ರಾಪ್ತಳನ್ನು ಅಪಹರಿಸಲಾಗಿದೆ. ಈ ವಿಚಾರವನ್ನು ಪೊಲೀಸರು ಮರೆಮಾಚಿದ್ದಾರೆ. ಪೋಷಕರು ಆಕೆಗೆ ಮದುವೆಯಾಗುವಂತೆ ಅಥವಾ ಶಿಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿಲ್ಲ. ಹೀಗಾಗಿ, ಬಾಲಕಿಯನ್ನು ಪೋಷಕರಜತೆ ಕಳುಹಿಸಿಕೊಡಬೇಕು ಎಂದು ಕೋರಿದರು.

ನ್ಯಾಯಮೂರ್ತಿಗಳು ಮತ್ತೆ ವಿಚಾರಿಸಿದಾಗ ಬಾಲಕಿ ತಾನು ಪೋಷಕರೊಂದಿಗೆ ಹೋಗಲು ಸಿದ್ಧವಿಲ್ಲ. ಬಾಲಮಂದಿರಕ್ಕೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದಳು. ಬಾಲಕಿಯ ಮನವಿಯನ್ನು  ಗಂಭೀರವಾಗಿ ಪರಿಗಣಿಸಿದ ಪೀಠ, ನ್ಯಾಯಾಲಯಕ್ಕೆ ಮಗುವಿನ ಕಲ್ಯಾಣವೇ ಮುಖ್ಯವಾಗಿದೆ. ಹೀಗಾಗಿ ಆಕೆಯನ್ನು ಸುರಕ್ಷತೆ ದೃಷ್ಟಿಯಿಂದ ಗದಗದ ಸಂಗೊಳ್ಳಿ ರಾಯಣ್ಣ ಸರ್ಕಲ್ ಸಮೀಪದ ಬಾಲಕಿಯರ ಮಂದಿರಕ್ಕೆ ಬಿಡುವಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್ ಗೆ ಸೂಚಿಸಿತು. ಅಲ್ಲದೇ, ಆಕೆ ವಯಸ್ಕಳಾಗುವರೆಗೆ ಅಥವಾ ಪೋಷಕರಜತೆ ಹೋಗಲು ಮನಸ್ಸು ಬದಲಾಯಿಸುವವರೆಗೆ ಬಾಲಕಿಯರ ಮಂದಿರದಲ್ಲಿ ಇರಿಸಬೇಕು. ಆಕೆ ವ್ಯಾಸಂಗ ಮುಂದುವರಿಸುವುದನ್ನು ಬಾಲಕಿಯರ ಮಂದಿರ ಖಾತರಿಪಡಿಸಬೇಕು. ಒಂದು ವೇಳೆ ಪೋಷಕರಜತೆ ಹೋಗಲು ಬಯಸಿದರೆ, ಆಕೆಯ ಸುರಕ್ಷತೆ ಮತ್ತು ಭವಿಷ್ಯಕ್ಕೆ ತೊಂದರೆ ಉಂಟು ಮಾಡುವುದಿಲ್ಲ ಎಂದು ಮುಚ್ಚಳಿಕೆ ಪಡೆದು ಪೋಷಕರೊಂದಿಗೆ ಕಳುಹಿಸಬೇಕು. ಬಾಲಕಿಯರ ಮಂದಿರದಲ್ಲಿ ಇರುವ ವೇಳೆ ಆಕೆ ಪೋಷಕರನ್ನು ಕಾಣಲು ಬಯಸಿದರೆ, ಅದಕ್ಕೆ ಸೂಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದು ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X