ಬೆಂಗಳೂರು-ಪಾಟ್ನಾ ವಿಮಾನ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಸಾಂದರ್ಭಿಕ ಚಿತ್ರ
ಮುಂಬೈ: ಒಟ್ಟು 139 ಪ್ರಯಾಣಿಕರೊಂದಿಗೆ ಬೆಂಗಳೂರಿನಿಂದ ಪಾಟ್ನಾಗೆ ಹೊರಟಿದ್ದ ಗೋ ಏರ್ಫ್ಲೈಟ್ ಶನಿವಾರ ಇಂಜಿನ್ ಒಂದರಲ್ಲಿ ದೋಷ ಉಂಟಾದ ನಂತರ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗ್ಗೆ 11.15ಕ್ಕೆ ವಿಮಾನವು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋ ಏರ್ಫ್ಲೈಟ್ನ ಪೈಲಟ್ ನಾಗ್ಪುರ ಎಟಿಸಿಯನ್ನು ಸಂಪರ್ಕಿಸಿ ವಿಮಾನದ ಇಂಜಿನ್ಗಳಲ್ಲಿ ಒಂದರಲ್ಲಿ ಸಮಸ್ಯೆ ಇದೆ ಎಂದು ತಿಳಿಸಿದ್ದು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಿದ್ದಾರೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಅಬಿದ್ ರೂಹಿ ಪಿಟಿಐಗೆ ತಿಳಿಸಿದ್ದಾರೆ.
ಸಿಬ್ಬಂದಿಯನ್ನು ಹೊರತುಪಡಿಸಿ 139 ಪ್ರಯಾಣಿಕರು ವಿಮಾನದಲ್ಲಿದ್ದರು ಎಂದು ಅವರು ಹೇಳಿದರು.
ಪ್ರಯಾಣಿಕರು ಗೋ ಏರ್ ಟರ್ಮಿನಲ್ನಲ್ಲಿ ಕಾಯುತ್ತಿದ್ದಾರೆ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
Next Story