Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರ್ಸೆಂಟೇಜ್ ಆರೋಪ ತನಿಖೆ: ಸದನ ಸಮಿತಿ...

ಪರ್ಸೆಂಟೇಜ್ ಆರೋಪ ತನಿಖೆ: ಸದನ ಸಮಿತಿ ರಚನೆಗೆ ಡಿ.ಕೆ.ಶಿವಕುಮಾರ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Nov 2021 9:59 PM IST
share
ಪರ್ಸೆಂಟೇಜ್ ಆರೋಪ ತನಿಖೆ: ಸದನ ಸಮಿತಿ ರಚನೆಗೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು, ನ.27: ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಕಾರ್ಪೊರೇಷನ್ ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ಆರೋಪದ ತನಿಖೆಗೆ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಸದನ ಸಮಿತಿ ರಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಬಿಜೆಪಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ್ದೂ ಸೇರಿಸಿ ತನಿಖೆ ನಡೆಸಲಾಗುವುದು ಎಂಬ ಸಿಎಂ ಬೊಮ್ಮಾಯಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಯಾರು ಬೇಡ ಅಂದೋರು? ಕಳೆದ 10 ವರ್ಷಗಳದ್ದನ್ನೂ ಸೇರಿಸಿ ತನಿಖೆ ಮಾಡಿಸಲಿ. ಸಾರ್ವಜನಿಕರ ಹಣ ಯಾರು ದುರುಪಯೋಗ ಮಾಡಿದ್ದರೂ ತಪ್ಪೇ? ಅದು ಬಿಜೆಪಿಯವರು ಇರಲಿ, ಕಾಂಗ್ರೆಸ್‍ನವರು ಇರಲಿ, ಜೆಡಿಎಸ್‍ನವರು ಇರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಬಿಜೆಪಿಯವರ ನೇತೃತ್ವದಲ್ಲೇ ಸದನ ಸಮಿತಿ ರಚನೆ ಆಗಲಿ. ಅವರ ಪಕ್ಷ ಬಿಜೆಪಿಯವರನ್ನೇ ಅಧ್ಯಕ್ಷರನ್ನಾಗಿ ಮಾಡಲಿ ಎಂದು ಶಿವಕುಮಾರ್ ಹೇಳಿದರು.

ಪ್ರಧಾನಿಗೆ ದೂರು ಹೋಗಿದೆ. ಅವರ ಪಕ್ಷದವರೂ ದೂರಿದ್ದಾರೆ. ರಾಕೇಶ್ ಸಿಂಗ್ ಅವರು ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು. ಅವರೇನು ತನಿಖೆ ಮಾಡಲು ಸಾಧ್ಯ? ಅದಕ್ಕೆ ಹೇಳಿದ್ದು ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಲಿ ಎಂದು. ಅದನ್ನು ಮಾಡಲು ಈ ಸರಕಾರದವರು ಹೋಗುವುದಿಲ್ಲ. ಹೋಗಲಿ ಮೊದಲಿಗೆ ಸದನ ಸಮಿತಿಯಿಂದ ತನಿಖೆ ಮಾಡಿಸಲಿ. ಯಾರು, ಯಾರು, ಏನು ಮಾಡಿದ್ದಾರೆ ಎಂಬುದು ಆಚೆ ಬರಲಿ ಎಂದೂ ಶಿವಕುಮಾರ್ ಹೇಳಿದರು.

ಪಸೆರ್ಂಟೇಜ್ ವಿರುದ್ಧ ಹೋರಾಟ ಮುಂದುವರಿಸುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ಅವರಿಗೆ ದೂರು ಕೊಟ್ಟ ಮೇಲೆ ಸುಮ್ಮನೆ ಇರಲು ಆಗುತ್ತದಾ? ಖಂಡಿತಾ ಮುಂದುವರಿಸುತ್ತೇವೆ. ಪ್ರಧಾನಿಗೆ ಪತ್ರ ಬರೆದಿರೋ ಕಂಟ್ರಾಕ್ಟರ್‍ಗಳು ದಡ್ಡರೇನೂ ಅಲ್ಲ ಎಂದರು.

ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ ಸೇರಿದಂತೆ ನಾನಾ ಇಲಾಖೆಗಳ ಕೆಲಸ ಮಾಡಿಸೋ ಒಂದು ಲಕ್ಷ ಜನ ಇದ್ದಾರೆ. ಬೇರೆ, ಬೇರೆ ಇಲಾಖೆಗಳ ಕಂಟ್ರಾಕ್ಟ್ ಕೆಲಸ ಮಾಡುತ್ತಿದ್ದಾರೆ. ಅವರಿಗಾಗಿರುವ ನೋವು ಹೇಳಿಕೊಂಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಯಾರು, ಯಾರನ್ನು ಹೇಗೆ ಸುಲಿಗೆ ಮಾಡಿದರು ಎಂಬುದೂ ಜನರಿಗೆ ಗೊತ್ತಿದೆ. ಹೀಗಾಗಿ ಗುತ್ತಿಗೆದಾರರ ಆರೋಪದ ಬಗ್ಗೆ ಸದನ ಸಮಿತಿ ತನಿಖೆ ಮಾಡಲಿ ಎಂದು ಅವರು ಆಗ್ರಹಿಸಿದರು.

ಬಿಜೆಪಿಯವರು ನಮ್ಮ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ, ಹಿಂದೆ ಮೈತ್ರಿ ಸರಕಾರ ಮಾಡಿದ್ರಿ. ಈಗ ನಿಮ್ಮ ಪಕ್ಷವನ್ನು ಕೇಳಿದರೆ ಸಪೋರ್ಟ್  ಮಾಡ್ತೀರಾ ಎಂಬ ಪ್ರಶ್ನೆಗೆ, ಅವರ ಪಾರ್ಟಿ, ಅವರ ತತ್ವ, ಅವರ ಸಿದ್ಧಾಂತ. ಯಾರ ಕೈಲಿ ವೋಟು ಹಾಕಿಸಿಕೊಳ್ಳಬೇಕು, ಯಾರಿಗೆ ಹಾಕಿಸಬೇಕು ಎಂಬುದು ಅವರಿಗೆ ಬಿಟ್ಟದ್ದು. ಕೆಲವೊಮ್ಮೆ ಫ್ರೆಂಡ್ಲಿ ಫೈಟ್ ಕೂಡ ನಡೀತದೆ. ಅವರವರ ಮತದಾರರನ್ನು ಉಳಿಸಿಕೊಳ್ಳುವ ಪ್ರಯತ್ನ ಅವರದ್ದು ಎಂದರು.

ಬಿಜೆಪಿಯವರು, ಕಾಂಗ್ರೆಸ್‍ನವರು, ಜೆಡಿಎಸ್‍ನವರು ಎಲ್ಲ ಪಕ್ಷದವರು ಅಭ್ಯರ್ಥಿಗಳನ್ನು ಹಾಕಿದ್ದೇವೆ. ನಾವು 25ಕ್ಕೆ 25 ಅಥವಾ 20 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ನಮ್ಮ ಶಕ್ತಿ ಮೇಲೆ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಹೆಚ್ಚು ಸಂಖ್ಯೆಗಳನ್ನು ಗೆಲ್ಲುತ್ತೇವೆ ಎಂದಷ್ಟೇ ಹೇಳಬಲ್ಲೆ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ, ಏನು ಬೇಕಾದರೂ ಮಾಡಿಕೊಳ್ಳಲಿ. ಹಿಂದೆ ಬಿಜೆಪಿ ರಾಷ್ಟ್ರೀಯ ನಾಯಕ ಅರುಣ್ ಸಿಂಗ್ ಏನು ಹೇಳಿದ್ದರು, ಯಡಿಯೂರಪ್ಪ ಮೊನ್ನೆ ಏನು ಹೇಳಿದ್ದಾರೆ, ಬೊಮ್ಮಾಯಿ ಅವರ ಸಂಪುಟದ ಮಂತ್ರಿಗಳು ಏನೇನು ಮಾತಾಡಿದರು ಎಂಬುದನ್ನು ನೀವೇ ನೋಡಿದ್ದೀರಲ್ಲಾ, ಇಷ್ಟೆಲ್ಲ ಆದಮೇಲೂ ಅವರು ಹೊಂದಾಣಿಕೆ ಮಾಡಿಕೊಂಡರೆ ಅದು ಅವರ ಸಿದ್ಧಾಂತ ಎಂದು ಶಿವಕುಮಾರ್ ಹೇಳಿದರು.

ಕನಕಪುರದಲ್ಲಿ ನಮ್ಮ ಪಕ್ಷ 70 ಸಾವಿರ ವೋಟು ತಗೊಳ್ಳೋ ಕೆಪಾಸಿಟಿ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂದಾಗ, ಬಹಳ ಸಂತೋಷ. ನಾವೆಲ್ಲಿ ಇಲ್ಲ ಎಂದು ಹೇಳಿದ್ದೇವೆ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ಇದೆ. ನಾವ್ಯಾಕೆ ಅದನ್ನು ಅಲ್ಲಗಳೆಯಲು ಹೋಗೋಣ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X