Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಓಮಿಕ್ರಾನ್ ವೈರಾಣು ಭೀತಿ: ರಾಜ್ಯದಲ್ಲಿ...

ಓಮಿಕ್ರಾನ್ ವೈರಾಣು ಭೀತಿ: ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಪ್ರಕರಣಗಳು ಕಂಡು ಬಂದಿಲ್ಲ; ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ28 Nov 2021 3:51 PM IST
share
ಓಮಿಕ್ರಾನ್ ವೈರಾಣು ಭೀತಿ: ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಪ್ರಕರಣಗಳು ಕಂಡು ಬಂದಿಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು, ನ. 28: `ಕೋವಿಡ್‍ನ ಹೊಸ ತಳಿ ಓಮಿಕ್ರಾನ್ ವೈರಾಣು ಭೀತಿ ಹಿನ್ನೆಲೆಯಲ್ಲಿ ಹೊಸ ಪ್ರಬೇಧದ ಸಂಪರ್ಕಕ್ಕೆ ಬಂದಿರುವ ದೇಶದಿಂದ ವಿಮಾನಗಳ ಮೂಲಕ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್ ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ರವಿವಾರ ಇಲ್ಲಿನ ಆರ್.ಟಿ.ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಸೌತ್ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಕೋವಿಡ್‍ನ ಹೊಸ ಪ್ರಬೇಧ ಕಾಣಿಸಿಕೊಂಡಿದೆ. ಈ ಮೂರು ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿ ಮೋದಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ' ಎಂದರು.

`ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ವಿಶೇಷವಾಗಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರಕಾರಕ್ಕೆ ಇಡಲಾಗಿದೆ. ಹೊಸ ತಳಿಯ ಓಮಿಕ್ರಾನ್ ವೈರಾಣು ಭೀತಿ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

`ಕೇರಳ ರಾಜ್ಯದಿಂದ ಬರುವವರಲ್ಲಿ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು' ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

`ಮೇಲ್ಕಂಡ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಆರ್‍ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ತಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್ ಲಸಿಕೆಯನ್ನು ಪಡೆದಿರಬೇಕು. ಆರ್‍ಟಿಪಿಸಿಆರ್ ಪರೀಕ್ಷೆಗಳನ್ನು ಹೆಚ್ಚಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಅವರು ಮಾಹಿತಿ ನೀಡಿದರು.

`ಧಾರವಾಡ, ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್‍ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್‍ಗಳನ್ನು ಕಂಟೈನ್ಮೆಂಟ್ ಝೋನ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಸ್‍ಡಿಎಂ ಕಾಲೇಜನ ವೈದ್ಯರು, ನರ್ಸ್‍ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿಬರ್ಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೆ, ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.

`ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್‍ನ್ನು ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಮಾಲ್ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಅವರು ವಿವರ ನೀಡಿದರು.

`ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು, 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್‍ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೆÇೀರ್ಟ್ ಬಂದ ನಂತರದ 7ನೆ ದಿನಕ್ಕೆ ಮತ್ತೊಮ್ಮೆ ಆರ್‍ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

`ಹೊಸ ವರ್ಷದ ಆಚರಣೆ ಬಗ್ಗೆ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿನ ಬೆಳವಣಿಗೆಗಳನ್ನು ಗಮನಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದ ಅವರು, ವಿಧಾನ ಪರಿಷತ್ ಚುನಾವಣೆಗೆ ಸಾರ್ವಜನಿಕ ಪ್ರಚಾರ ಸಭೆಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 80ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಶೇ.70ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X