ಉಡುಪಿ ಜಿಲ್ಲೆಯಲ್ಲಿ ಶೇ.93.27 ಮಂದಿಗೆ ಮೊದಲ ಕೋವಿಡ್ ಡೋಸ್

ಉಡುಪಿ, ನ.28: ಉಡುಪಿ ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ಶೇ.93.27 ಮಂದಿಗೆ ಮೊದಲ ಡೋಸ್ ಹಾಗೂ ಶೇ. 68.13 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ 18 ವರ್ಷ ಮೇಲಿನ ಒಟ್ಟು 9,99,000 ಮಂದಿಗೆ ಲಸಿಕೆ ನೀಡುವ ಗುರಿ ಇದ್ದು, ಇದುವರೆಗೆ ಒಟ್ಟು 9,31,813 ಮಂದಿಗೆ ಮೊದಲ ಡೋಸ್ (ಶೇ.93.27) ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 6,80,647 ಮಂದಿಗೆ (ಶೇ.68.13) ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story