Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೋಷಿತರ ಅಧಿಕಾರಕ್ಕಾಗಿ ಹೋರಾಡಿದ ಮಹಾನ್...

ಶೋಷಿತರ ಅಧಿಕಾರಕ್ಕಾಗಿ ಹೋರಾಡಿದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್: ಡಾ.ಎಚ್.ಎಸ್.ಅನುಪಮಾ

ವಾರ್ತಾಭಾರತಿವಾರ್ತಾಭಾರತಿ28 Nov 2021 9:36 PM IST
share
ಶೋಷಿತರ ಅಧಿಕಾರಕ್ಕಾಗಿ ಹೋರಾಡಿದ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್: ಡಾ.ಎಚ್.ಎಸ್.ಅನುಪಮಾ

ಚಿಕ್ಕಮಗಳೂರು, ನ.28: ಭಾರತ ದೇಶವನ್ನು ಆಳುವ ಅಧಿಕಾರಕ್ಕಾಗಿ ಈ ಹಿಂದೆ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರೇ, ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಶೋಷಿತ ಸಮುದಾಯಗಳ ಹಕ್ಕುಗಳೆಂಬ ಪಾಲಿಗಾಗಿ ಹೋರಾಟ ಮಾಡಿದರು. ಅಧಿಕಾರದಲ್ಲಿ ಶೋಷಿತ ಸಮುದಾಗಳಿಗೂ ಪಾಲು ಬೇಕೆಂಬ ಉದ್ದೇಶಕ್ಕಾಗಿ ಹೋರಾಟ ಮಾಡಿದರು ಎಂದು ಸಾಮಾಜಿಕ ಚಿಂತಕಿ, ಸಾಹಿತಿ, ವೈದ್ಯೆ ಡಾ.ಎಚ್.ಎಸ್.ಅನುಪಮ ತಿಳಿಸಿದ್ದಾರೆ.

ರವಿವಾರ ನಗರ ಸಮೀಪದ ಅಲ್ಲಂಪುರ ಗ್ರಾಮದ ರಾಜ್ ವಿಲ್ಲಾ ಸಭಾಂಗಣದಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಆಸಕ್ತ ನೌಕರರು ಹಾಗೂ ಸಮಾನ ಮನಸ್ಕರ ವೇದಿಕೆ ಹಮ್ಮಿಕೊಂಡಿದ್ದ ಒಂದು ದಿನದ ಅಧ್ಯಯನ ಶಿಬಿರದಲ್ಲಿ ಬುದ್ಧನ ಬೆಳಕಿನಲ್ಲಿ ಬಾಬಾ ಸಾಹೇಬರು ವಿಷಯದ ಕುರಿತು ವಿಚಾರ ಮಂಡಿಸಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದಲ್ಲಿದ್ದ ಬ್ರಿಟಿಷರ ಕೈಯಲ್ಲಿದ್ದ ಅಧಿಕಾರವನ್ನು ಈ ದೇಶದವರೇ ಚಲಾಯಿಸುವ ಉದ್ದೇಶದಿಂದ ಸ್ವಾತಂತ್ರ್ಯ ಚಳವಳಿ ನಡೆಸಲಾಯಿತು. ಸ್ವಾತಂತ್ರ್ಯದ ಬಳಿಕ ಬ್ರಿಟಿಷರು ತಮ್ಮ ಅಧಿಕಾರವನ್ನು ಈ ದೇಶದವರ ಕೈಗಿತ್ತು ಹೊರಟು ಹೋದರು. ಆದರೆ ಇದೇ ಅವಧಿಯಲ್ಲಿ ಮಹಾ ಬುದ್ಧಿವಂತರಾಗಿದ್ದ ಓರ್ವ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಮಾತ್ರ ಬ್ರಿಟಿಷರು ಹೊರಡುವ ಮುನ್ನ ಈ ದೇಶದಲ್ಲಿ ಶೋಷಣೆಗೆ ತುತ್ತಾಗಿದ್ದ ಅಸ್ಪøಶ್ಯತೆಯ ವಿಷವರ್ತುಲದಲ್ಲಿ ನರಳುತ್ತಿದ್ದ, ಎಲ್ಲ ಹಕ್ಕುಗಳಿಂದ ವಂಚಿತರಾಗಿದ್ದ ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಹಕ್ಕುಗಳಿಗಾಗಿ ಹೋರಾಡಿದರು. ದೇಶದ ಶಾಸಕಾಂಗ ವ್ಯವಸ್ಥೆಯಲ್ಲಿ ಶೋಷಿತರಿಗೂ ಪಾಲು ಕೊಡಿಸುವಲ್ಲಿ ಸಫಲರಾದರು ಎಂದರು.

ಅಸ್ಪೃಶ್ಯತೆ ಎಂದರೆ ಮೇಲ್ವರ್ಗದವರಿಂದ ಮುಟ್ಟಿಸಿಕೊಳ್ಳದಿರುವುದು, ದೇವಾಲಯಗಳ ಪ್ರವೇಶಿಸದಿರುವುದು, ವಿದ್ಯೆ, ಸಂಪತ್ತು ಹೊಂದದಿರುವುದು ಎಂದರ್ಥ. ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪøಶ್ಯತೆ ಎಂದರೆ ಅಧಿಕಾರ ಹೀನತೆ ಎಂದು ವ್ಯಾಖ್ಯಾನಿಸಿದ್ದರು. ಅವರ ಪ್ರಕಾರ ಅಧಿಕಾರದಿಂದ ಅಸ್ಪøಶ್ಯತೆ ನಾಶ ಸಾಧ್ಯ ಎಂದಾಗಿತ್ತು. ಈ ಕಾರಣಕ್ಕೆ ದೇಶದ ಅಧಿಕಾರ ವ್ಯವಸ್ಥೆಯಲ್ಲಿ ಅವರು ಶೋಷಿತ, ಅಸ್ಪøಶ್ಯ ಸಮುದಾಯಗಳಿಗೂ ಅಧಿಕಾರ ಕಲ್ಪಿಸಲು ಶ್ರಮಿಸಿ ಅದರಲ್ಲಿ ಯಶಕಂಡರು. ಪ್ರಸಕ್ತ ಶೋಷಿತ ಸಮುದಾಗಳು ಕೋಮುವಾದಿಗಳು, ಮೇಲ್ವರ್ಗದ ಜಾತಿಗಳ ವಿರುದ್ಧ ಸೆಟೆದು ನಿಲ್ಲುವಂತಾಗಲು ಅಂಬೇಡ್ಕರ್ ಹೋರಾಟದ ಫಲವಾಗಿ ಶೋಷಿತ ಸಮುದಾಯಗಳಿಗೆ ಸಿಕ್ಕಿರುವ ಅಧಿಕಾರವೇ ಕಾರಣ ಎಂದ ಅವರು, ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಆಗುವ ಸಂದರ್ಭದಲ್ಲಿ ಶೋಷಿತ ಸಮುದಾಯಗಳ ಸಂಖ್ಯೆಗನುಗುಣವಾಗಿ ಅಧಿಕಾರದ ಹಂಚಿಕೆ ಆಗಬೇಕೆಂದು ಅಂಬೇಡ್ಕರ್ ಅವರ ಹೋರಾಟದ ಉದ್ದೇಶವಾಗಿತ್ತು. ಆದರೆ ಗಾಂಧೀಜಿ ಮತ್ತು ಕಾಂಗ್ರೆಸ್‍ನವರು ನಾಶ ಮಾಡಿದರು. ಆದರೆ ಅಂಬೇಡ್ಕರ್ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಅಧಿಕಾರ ನೀಡಿದರು ಎಂದು ಅಭಿಪ್ರಾಯಿಸಿದರು.

ಡಾ.ಅಂಬೇಡ್ಕರ್ ಅವರು ಹಿಂದೂ ಧರ್ಮದಿಂದ ಶೋಷಿತ ಸಮುದಾಯಗಳ ಉದ್ಧಾರ ಸಾಧ್ಯವಿಲ್ಲ ಎಂಬ ಕಠೋರ ಸತ್ಯವನ್ನು ಅಂದೇ ಮನಗಂಡಿದ್ದರು. ಈ ಕಾರಣಕ್ಕೆ ಅವರು ನಾನು ಹಿಂದುವಾಗಿ ಹುಟ್ಟಿದ್ದೇನೆ, ಹಿಂದುವಾಗಿ ಸಾಯುವುದಿಲ್ಲ ಎಂದು ಘೋಷಿಸಿದ್ದರು. ಅದರಂತೆ ಅವರು ತಮ್ಮ ಕಡೆಯ ದಿನಗಳಲ್ಲಿ ಹಿಂದೂಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿ ತನ್ನ ಹಾದಿಯನ್ನು ಶೋಷಿತ ಸಮುದಾಯಗಳ ಜನತೆ ತುಳಿಯಲಿದ್ದಾರೆಂದು ಭಾವಿಸಿದ್ದರು. ಆದರ ಸಾಕಾರಕ್ಕೆ ಜಾತಿವಾದಿ ಮನಸ್ಥಿತಿಯವರು ಬಿಟ್ಟಿಲ್ಲ ಎಂದ ಅವರು, ಪ್ರಸಕ್ತ ಸಂವಿಧಾನದ ಮೂಲಕ ಶೋಷಿತರಿಗೆ ಸಿಕ್ಕಿರುವ ಮೀಸಲಾತಿಯನ್ನು ನಾಶ ಮಾಡಲು ಸಂಚು ನಡೆಯುತ್ತಿದೆ. ರಾಜಕೀಯ ಮೀಸಲಾತಿಯ ನಾಶ ಅಷ್ಟು ಸುಲಭ ಸಾಧ್ಯವಲ್ಲ ಎಂಬ ಕಾರಣಕ್ಕೆ ಸರಕಾರಿ ಸಂಸ್ಥೆಗಳ ನಾಶಕ್ಕೆ ಮುಂದಾಗಿದ್ದಾರೆ. ದೇಶದಲ್ಲಿ ಕಳೆದ 30 ವರ್ಷಗಳಲ್ಲಿ ಖಾಸಗೀಕರಣ ಪ್ರಕ್ರಿಯೆ ಸದ್ದಿಲ್ಲದೇ ನಡೆಯುತ್ತಿದೆ. ಸದ್ಯ ನರೇಂದ್ರ ಮೋದಿ ಅಧಿಕಾರದಿಂದ ಇಳಿಯುವ ಹೊತ್ತಿಗೆ ಶೇ.100 ಖಾಸಗೀಕರಣ ಆಗಲಿದ್ದು, ಈ ಮೂಲಕ ಶೋಷಿತ ಸಮುದಾಯಗಳ ಹಕ್ಕುಗಳ ನಾಶ ಮಾಡಲಾಗುತ್ತದೆ. ಬಿಜೆಪಿ ಸರಕಾರ ಖಾಸಗೀಕರಣಕ್ಕೆ ಪೂರಕವಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಯನ್ನು ಜಾರಿ ಮಾಡುತ್ತಿದೆ. ಈ ಬೆಳವಣಿಗೆಗಳ ಬಗ್ಗೆ ಶೋಷಿತ ಸಮುದಾಯಗಳ ಜನರು ಜಾಗೃತರಾಗಬೇಕು. ಅಂಬೇಡ್ಕರ್ ಅವರ ಹಾದಿ ತುಳಿಯಬೇಕೆಂದರು.

ಬಾಬಾ ಸಾಹೇಬರು ಎಳೆದು ತಂದ ಪರಿವರ್ತನಾ ಚಳವಳಿಯ ಮಹತ್ವ ಮತ್ತು ನಮ್ಮ ಜವಬ್ದಾರಿ ವಿಷಯದ ಕುರಿತು ಮಾತನಾಡಿದ ನಿವೃತ್ತ ಡಿಡಿಪಿಯು ರುದ್ರಸ್ವಾಮಿ ಮಾತನಾಡಿ, ಭಾರತದ ಸಂವಿಧಾನ ಕೇವಲ ದೇಶದ ಆಡಳಿತ ವ್ಯವಸ್ಥೆಯ ನಿರ್ದೇಶನಕ್ಕಾಗಿ ಮಾಡಿರುವುದಲ್ಲ, ದೇಶದ ಸಾಮಾಜಿಕ, ಆರ್ಥಿಕ ಬದಲಾವಣೆಯ ಆಶಯದೊಂದಿಗೆ ಅಂಬೇಡ್ಕರ್ ಅವರು ಸಂವಿಧಾನವನ್ನು ರೂಪಿಸಿದ್ದಾರೆ. ಅವರು ಸಾಮಾಜಿಕ ವ್ಯವಸ್ಥೆಯಲ್ಲಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಎಲ್ಲ ಜನರನ್ನು ಸಾಮಾಜಿಕವಾಗಿ, ರಾಜಕೀಯವಾಗಿ ಆರ್ಥಿಕವಾಗಿ ನ್ಯಾಯ ದೊರಕಿಸಲು ಸಂವಿಧಾನವನ್ನು ಜಾರಿಗೊಳಿಸಿದ್ದಾರೆ. ಇಂತಹ ಸಂವಿಧಾನದಕ್ಕೆ ಪ್ರಸಕ್ತ ಅಪಾಯಗಳು ಎದುರಾಗುತ್ತಿರುವ ಸಂದರ್ಭದಲ್ಲಿ ಎಲ್ಲರೂ ಪ್ರಜ್ಞಾಪೂರ್ವಕವಾದ ಜಾಗೃತಿ ಮೂಡಿಸಿಕೊಳ್ಳಬೇಕು. ಅಂಬೇಡ್ಕರ್ ಸಂವಿಧಾನ ಇಲ್ಲದಿದ್ದರೇ ಈ ದೇಶದ ಯುವಜನತೆ, ಬಡವರು, ಶೋಷಿತ ಸಮುದಾಯಗಳು, ಮಹಿಳೆಯರಿಗೆ ದೊಡ್ಡ ಅನ್ಯಾಯವಾಗಲಿದೆ ಎಂದರು.

ಮೈಸೂರು ಜಿಲ್ಲೆಯ ಅಕ್ಕ ಐಎಎಸ್ ಅಕಾಡೆಮಿಯ ಡಾ.ಶಿವಕುಮಾರ್ ಉಪನ್ಯಾಸ ನೀಡಿದರು. ಡಿಎಫ್‍ಒ ಡಾ.ಕ್ರಾಂತಿ, ಚಿಕ್ಕಮಗಳೂರು ಡಿವೈಎಸ್ಪಿ ಪ್ರಭು ಮಾತನಾಡಿದರು. ಜಿಲ್ಲಾ ಕಾರಾಗೃದ ಅಧೀಕ್ಷಕ ರಾಕೇಶ್ ಕಾಂಬ್ಳೆ ಶಿಬಿರ ಉದ್ಘಾಟಿಸಿದರು. ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಹಾಗೂ ವಕೀಲ ಅನಿಲ್‍ಕುಮಾರ್ ಶಿಬಿರದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ವಕೀಲರು, ಸರಕಾರಿ ಇಲಾಖೆಗಳ ಅಧಿಕಾರಿಗಳು, ನೌಕರರು ಶಿಬಿರದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X