Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿ...

'ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ' ಎಂದ ಸಚಿವ ‌ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ28 Nov 2021 9:39 PM IST
share
ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದ ಸಚಿವ ‌ಈಶ್ವರಪ್ಪ

ಬಾಗಲಕೋಟೆ, ನ.28:  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು, ರಾಜ್ಯದ 'ಮುಖ್ಯಮಂತ್ರಿ' ಆಗಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಭವಿಷ್ಯ ನುಡಿದಿದ್ದಾರೆ.

ರವಿವಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಿಜಾಪುರ ಹಾಗೂ ಬಾಗಲಕೋಟೆ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ನಮ್ಮ ನಾಯಕರಾದ ಮುರುಗೇಶ್ ನಿರಾಣಿ ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ‌ಖಚಿತ. ಆದರೆ, ನಾಳೆಯೇ ಆಗುತ್ತಾರೆ ಎಂದು ನಾನು ಹೇಳುವುದಿಲ್ಲ ಎಂದು ‌ಸೂಚ್ಯವಾಗಿ ಹೇಳಿದರು.

ನಾನು ಈ ರೀತಿ ಹೇಳಿದೆ ಎಂದರೆ, ಈಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರನ್ನು ತೆಗೆದುಬಿಡುತ್ತಾರೆ ಎಂದು ಪತ್ರಕರ್ತರು ‌ಸೇರಿದಂತೆ ಯಾರೊಬ್ಬರೂ ಅನ್ಯಥಾ ‌ಭಾವಿಸಬಾರದು ಎಂದು ತಮ್ಮ ಹೇಳಿಕೆ ಕುರಿತು ಸ್ಪಷ್ಟನೆಯನ್ನೂ ನೀಡಿದರು.

ರಾಜ್ಯದ ಮುಖ್ಯಮಂತ್ರಿ ಆಗುವ 'ಅರ್ಹತೆ ' ನಿರಾಣಿಯವರಿಗೆ ಇದೆ. ಅವರಿಗೆ ರಾಜ್ಯವನ್ನು ಮುನ್ನಡೆಸುವ ಶಕ್ತಿ ಇದೆ. ಒಂದಲ್ಲೊಂದು ದಿನ ಆ 'ಸ್ಥಾನಕ್ಕೆ ' ಬರಲಿದ್ದಾರೆ ಎಂದು ಪುನರುಚ್ಚರಿಸಿದರು.

ರಾಜ್ಯದಲ್ಲಿ ‌ ಹಿಂದುಳಿದ ವರ್ಗದವರಿಗೆ ನ್ಯಾಯ ಕೊಡುವ ನಾಯಕ ಮುಖ್ಯಮಂತ್ರಿ ‌ಆಗಬೇಕು ಎಂಬುದು ಬಹುತೇಕ ಜನತೆಯ ಆಶಯವಾಗಿದೆ. ನಿರಾಣಿ ಅವರು ಸಿಎಂ ಆದರೆ ಖಂಡಿತವಾಗಿ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಈಶ್ವರಪ್ಪ ವ್ಯಕ್ತಪಡಿಸಿದರು.

ನೀವು (ನಿರಾಣಿ) ಸಿಎಂ ಆದರೆ, ಹಿಂದುಳಿದಿರುವ ವರ್ಗಕ್ಕೆ ನ್ಯಾಯ ಕೊಡುತ್ತೀರಾ ಎಂದು  ಸಚಿವರನ್ನು ಈಶ್ಬರಪ್ಪ ಪ್ರಶ್ನಿಸಿದಾಗ, ವೇದಿಕೆಯಲ್ಲಿದ್ದ ಸಚಿವ ನಿರಾಣಿ ಅವರು ಖಂಡಿತವಾಗಿಯೂ ಮಾಡೇ ಮಾಡುತ್ತೇನೆ ಎಂದು ವಿಜಯದ ಸಂಕೇತವನ್ನು ತೋರಿದರು.

ಇದೇ ಸಂದರ್ಭದಲ್ಲಿ ನಿರಾಣಿ ಅವರು ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಈಶ್ವರಪ್ಪ ಹೇಳುತ್ತಿದ್ದಂತೆ ಸಭೆಯಲ್ಲಿ ನೆರೆದಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು. 

ಕಾರ್ಯಕರ್ತರು ಜೈಕಾರ ಹಾಕಿ, ಚಪ್ಪಾಳೆ ಹೊಡೆದು," ಮುಂದಿನ ಮುಖ್ಯಮಂತ್ರಿ ಮುಖ್ಯಮಂತ್ರಿ ಮುರುಗೇಶ್ ನಿರಾಣಿ‌ "ಅವರಿಗೆ 
ಶುಭವಾಗಲಿ ಎಂದು ಕೇಕೆ ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X