ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಎನ್ಡಿಎ ಮಿತ್ರಪಕ್ಷ ಎನ್ಪಿಪಿ ಮನವಿ

ನ್ಯಾಶನಲ್ ಪೀಪಲ್ಸ್ ಪಾರ್ಟಿ ನಾಯಕಿ ಅಗಾಥಾ ಸಂಗ್ಮಾ (PTI)
ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರೆಯಲಾದ ಎನ್ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ನ್ಯಾಶನಲ್ ಪೀಪಲ್ಸ್ ಪಾರ್ಟಿ ನಾಯಕಿ ಅಗಾಥಾ ಸಂಗ್ಮಾ ಅವರು ರವಿವಾರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.
"ಕೃಷಿ ಕಾನೂನುಗಳನ್ನು ರದ್ದುಗೊಳಿಸಿರುವುದರಿಂದ ಮತ್ತು ಇದು ಪ್ರಾಥಮಿಕವಾಗಿ ಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಳ್ಳುವುದರಿಂದ, ಈಶಾನ್ಯ ಭಾಗದ ಜನರ ಅದೇ ರೀತಿಯ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಎ ಅನ್ನು ರದ್ದುಗೊಳಿಸುವಂತೆ ನಾನು ಸರ್ಕಾರವನ್ನು ವಿನಂತಿಸಿದೆ" ಎಂದು ಅವರು ಹೇಳಿದ್ದಾರೆ.
Next Story