Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ...

57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ29 Nov 2021 7:04 PM IST
share
57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆ

ಬೆಂಗಳೂರು, ನ.29: ರಾಜ್ಯ ಚುನಾವಣಾ ಆಯೋಗವು 2021ರ ಜೂನ್ ತಿಂಗಳಿನಿಂದ 2022ರ ಮಾರ್ಚ್ ತಿಂಗಳವರೆಗೆ ಅವಧಿ ಮುಕ್ತಾಯವಾಗುವ 44 ಗ್ರಾಮ ಪಂಚಾಯತ್, ನ್ಯಾಯಾಲಯ ಪ್ರಕರಣ, ಇತರೆ ಕಾರಣಗಳಿಂದ ಚುನಾವಣೆ ನಡೆಯದೆ ಬಾಕಿ ಇದ್ದ 13 ಗ್ರಾಮ ಪಂಚಾಯತ್ ಗಳು ಒಟ್ಟು 57 ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ, ಖಾಲಿ ಉಳಿದಿರುವ 386 ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿ ಆದೇಶಿಸಿದೆ.

ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಡಿ.13ರಂದು ಹೊರಡಿಸಲಿದ್ದು, ಡಿ.17ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಡಿ.18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಡಿ.20ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ಅವಕಾಶ ನೀಡಲಾಗಿದೆ. ಡಿ.27ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕವಿದ್ದರೆ ಡಿ.29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ನಡೆಸಬಹುದು. ಡಿ.30ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದ್ದು, ಅಂದೆ ಫಲಿತಾಂಶ ಪ್ರಕಟಿಸಲಾಗುವುದು. ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಿ.13 ರಿಂದ 30ರವರೆಗೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಅವಧಿ ಮುಕ್ತಾಯವಾಗುವ ಗ್ರಾಮ  ಪಂಚಾಯತ್ ಗಳು: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಬೆಟ್ಟಹಲಸೂರು, ಬಾಗಲೂರು, ಸಾತನೂರು ಗ್ರಾಮ ಪಂಚಾಯಿತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ, ದರ್ಗಾಜೋಗಿಹಳ್ಳಿ, ಚನ್ನರಾಯಪಟ್ಟಣ, ನಲ್ಲೂರು ಗ್ರಾಮ ಪಂಚಾಯಿತಿ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಗ್ಗೀಕುಪ್ಪೆ ಹಾಗೂ ಬೆಳಗುಂಬ ಗ್ರಾಮ ಪಂಚಾಯಿತಿ.

ಶಿವಮೊಗ್ಗ ತಾಲೂಕಿನ ಪುರದಾಳು, ಕುಂಸಿ, ಶಿಕಾರಿಪುರ ತಾಲೂಕಿನ ಹಾರೋಗೊಪ್ಪ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಹಾಸನ ತಾಲೂಕಿನ ಅಂಬುಗ, ಅಂಕಪುರ, ಚನ್ನಂಗಿಹಳ್ಳಿ, ಕಟ್ಟಾಯ, ಆಲೂರು ತಾಲೂಕಿನ ಹಂಚೂರು, ಅರಸೀಕೆರೆ ತಾಲೂಕಿನ ಬಾಣಾವರ, ಅರಕಲಗೂಡು ತಾಲೂಕಿನ ಕೊಣನೂರು, ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಗ್ರಾಮ ಪಂಚಾಯಿತಿ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ, ಮೂಡಿಗೆರೆ ತಾಲೂಕಿನ ಬಣಕಲ್, ತರುವೆ, ಬೆಳಗಾವಿ ತಾಲೂಕಿನ ಬಿಜಗರ್ಣಿ, ಬೆಳವಟ್ಟಿ, ಅಥಣಿ ತಾಲೂಕಿನ ಸವದಿ, ರಾಯಭಾಗ ತಾಲೂಕಿನ ಸಿದ್ದಾಪೂರ, ಯಲ್ಪಾರಟ್ಟಿ, ಯಡ್ರಂವ, ರಾಮದುರ್ಗ ತಾಲೂಕಿನ ತುರನೂರ, ಹಲಗತ್ತಿ, ಒಬಳಾಪೂರ.

ಧಾರವಾಡ ತಾಲೂಕಿನ ಮಾರಡಗಿ, ನವಲಗುಂದ ತಾಲೂಕಿನ ಕಾಲವಾಡ, ಅಣ್ಣೇಗೇರಿ ತಾಲೂಕಿನ ಸಾಸ್ವಿಹಳ್ಳಿ, ಕಲಘಟಗಿ ತಾಲೂಕಿನ ಬೇಗೂರ, ಕುಂದಗೋಳ ತಾಲೂಕಿನ ಮಳಲಿ, ಪಶುಪತಿಹಾಳ, ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಡೊಣಗಾಂವ, ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ), ಹುಲಸೂರು ಹಾಗೂ ತೊಗಲೂರು ಗ್ರಾಮ ಪಂಚಾಯಿತಿಯ ಒಟ್ಟು 633 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸಾರ್ವತ್ರಿಕ ಚುನಾವಣೆಯಲ್ಲಿ ಸದಸ್ಯರು ಆಯ್ಕೆಯಾಗದ ಪೂರ್ಣ ಗ್ರಾಮ ಪಂಚಾಯಿತಿಗಳು: 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಂಕಸಂದ್ರ, ತಿಪಟೂರು ತಾಲೂಕಿನ ಹೊನ್ನವಳ್ಳಿ, ಚಿಕ್ಕಮಗಳೂರು ತಾಲೂಕಿನ ಮೇಲಿನಹುಲುವತ್ತಿ, ತರೀಕೆರೆ ತಾಲೂಕಿನ ಕೆಂಚಿಕೊಪ್ಪ, ಜಮಖಂಡಿ ತಾಲೂಕಿನ ಸಾವಳಿಗಿ, ದಾವಣಗೆರೆ ತಾಲೂಕಿನ ಮಾಯಕೊಂಡ, ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಪಟ್ಟಣ, ಸಿಂಧಗಿ ತಾಲೂಕಿನ ಬಂದಾಳ, ಕನ್ನೊಳ್ಳಿ, ದೇವದುರ್ಗ ತಾಲೂಕಿನ ಜಾಲಹಳ್ಳಿ, ಚಿಂಚೋಡಿ ಹಾಗೂ ಕರಡಿಗುಡ್ಡ ಗ್ರಾಮ ಪಂಚಾಯಿತಿಯ ಒಟ್ಟು 245 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇದಲ್ಲದೆ, 2021ನೆ ಸಾಲಿನಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಒಟ್ಟು 386 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X