Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಮುಳುಗುತ್ತಿರುವವರು ಯಾರು...

ರಾಜ್ಯದಲ್ಲಿ ಮುಳುಗುತ್ತಿರುವವರು ಯಾರು ಎಂದು ಜನರೇ ತೀರ್ಮಾನಿಸಲಿ: ಬಿಜೆಪಿ ನಾಯಕರ ಹೇಳಿಕೆಗೆ ಡಿಕೆಶಿ ತಿರುಗೇಟು

ವಿಧಾನಪರಿಷತ್ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ29 Nov 2021 7:55 PM IST
share
ರಾಜ್ಯದಲ್ಲಿ ಮುಳುಗುತ್ತಿರುವವರು ಯಾರು ಎಂದು ಜನರೇ ತೀರ್ಮಾನಿಸಲಿ: ಬಿಜೆಪಿ ನಾಯಕರ ಹೇಳಿಕೆಗೆ ಡಿಕೆಶಿ ತಿರುಗೇಟು

ಬೆಳಗಾವಿ, ನ.29: ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ ಜೆಡಿಎಸ್ ಬೆಂಬಲ ಕೇಳುತ್ತಿದ್ದಾರೆ ಎಂಬ ಸುದ್ದಿ ನೋಡಿದ್ದೇನೆ. ಈಗ ಬಿಜೆಪಿಯವರು ಬೆಂಬಲ ಕೇಳುತ್ತಿದ್ದಾರೆ ಅಂದರೆ ಅವರ ಶಕ್ತಿ ಏನು? ಎಷ್ಟು ಕುಂದಿದೆ? ಎಂದು ಪ್ರಶ್ನಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ಅರುಣ್ ಸಿಂಗ್ ಹೇಳಿಕೆ ಕೊಟ್ಟ ಮೇಲೆ, ಯಡಿಯೂರಪ್ಪ ಬೆಂಬಲ ಕೇಳಿದ್ದಾರೆ ಎಂದರೆ ಮುಳುಗುತ್ತಿರುವವರು ಯಾರು? ಎಂದು ಜನರೇ ತೀರ್ಮಾನಿಸಲಿ. ಬಿಜೆಪಿಯವರು ಬಲಿಷ್ಠವಾಗಿದ್ದರೆ ಬೇರೆಯವರ ಬೆಂಬಲ ಯಾಕೆ ಕೇಳುತ್ತಿದ್ದರು? ಎಂದರು.

ಕಾಂಗ್ರೆಸ್ ನಮ್ಮ ಜತೆ ಮೈತ್ರಿ ಮಾಡಿಕೊಳ್ಳದಿದ್ದರೆ ನಾವು ಏನು ಮಾಡಬೇಕು ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಅವರವರ ಶಕ್ತಿಗೆ ಅನುಗುಣವಾಗಿ ಅವರು ಆತ್ಮವಿಶ್ವಾಸದಲ್ಲಿ ಚುನಾವಣೆ ಎದುರಿಸಬೇಕು' ಎಂದರು.

ಬೆಳಗಾವಿಯಲ್ಲಿ ಬಹಳ ಒಳ್ಳೆಯ ವಾತಾವರಣ ಇದೆ. ಮಳೆ, ಬೆಳೆ ಎಲ್ಲವೂ ಚೆನ್ನಾಗಿ ಆಗುತ್ತಿದ್ದು, ರಾಜಕೀಯದಲ್ಲೂ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದೇವೆ. ಕಳೆದ ಬಾರಿಗಿಂತ ಹೆಚ್ಚಿನ ಸೀಟು ಗೆಲ್ಲುವ ವಿಶ್ವಾಸ ಇದೆ. ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರಿಗೆ ಮಾತ್ರ ಈ ಚುನಾವಣೆ. ನಾವು ಗ್ರಾಮ ಪಂಚಾಯಿತಿಗೆ ಹೆಚ್ಚಿನ ಒತ್ತು ನೀಡಿದ್ದು, ಜೆ.ಎಚ್.ಪಟೇಲರ ಕಾಲದಲ್ಲಿದ್ದ 1 ಲಕ್ಷ ರುಪಾಯಿ ಅನುದಾನವನ್ನು ಎಸ್.ಎಂ.ಕೃಷ್ಣ ಕಾಲದಲ್ಲಿ 5 ಲಕ್ಷ ರೂ.ಗಳಿಗೆ ಹೆಚ್ಚಿಸಿ ನಾವು ಗ್ರಾಮ ಪಂಚಾಯಿತಿಗೆ ಶಕ್ತಿ ತುಂಬಿದೆವು ಎಂದು ಅವರು ಹೇಳಿದರು.

ನಂತರ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪ್ರತಿ ಪಂಚಾಯಿತಿಗೆ ಒಂದರಿಂದ ಎರಡು ಕೋಟಿ ರುಪಾಯಿವರೆಗೂ ಖರ್ಚು ಮಾಡುವ ಅವಕಾಶ ನರೇಗಾದಿಂದ ಬಂದಿದೆ. ಗ್ರಾಮ ಪಂಚಾಯಿತಿ ಸದಸ್ಯರು ಜನರ ಸೇವೆ ಮಾಡಲು ಶಕ್ತಿ ಇದೆ ಎಂದರೆ ಅದು ಕಾಂಗ್ರೆಸ್‍ನ ನರೇಗಾ ಕಾರ್ಯಕ್ರಮದಿಂದ ಎಂದು ಶಿವಕುಮಾರ್ ತಿಳಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರಾಜೀವ್ ಗಾಂಧಿ ಅವರು ಸಂವಿಧಾನ ತಿದ್ದುಪಡಿ ತಂದು ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ತಂದರು. ಇದೆಲ್ಲವೂ ಕಾಂಗ್ರೆಸ್ ಕಾರ್ಯಕ್ರಮ ಎಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ಅರಿವಾಗಿದೆ. ಅವರೆಲ್ಲ ಪ್ರಜ್ಞಾವಂತರಿದ್ದು, ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರದಿಂದ ಪ್ರಯೋಜನವಾಗಿಲ್ಲ ಎಂದು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಚುನಾವಣೆ ಮುಂದಿನ ವಿಧಾನಸಭೆಗೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಿಜೆಪಿ ಪಕ್ಷದವರೇ ಹೇಳಿದ್ದಾರೆ ಎಂದರು. ವಸತಿ ಸಚಿವ ವಿ.ಸೋಮಣ್ಣ ಪತ್ರಿಕಾಗೋಷ್ಠಿ ನಡೆಸಿ ಕೆಜಿಎಫ್ ಬಾಬು ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಾರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ನೂರಾರು ಅಭ್ಯರ್ಥಿಗಳು ನೂರಾರು ವ್ಯವಹಾರ ಇಟ್ಟುಕೊಂಡಿರುತ್ತಾರೆ. ಅವರು ದಾಖಲೆ ಬಿಡುಗಡೆ ಮಾಡಲಿ. ಯಾವ ಅಭ್ಯರ್ಥಿ ಬಗ್ಗೆ ಏನು ಅಂತಾ ಹೇಳಲಿ?' ಆಮೇಲೆ ನೋಡೋಣ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಸೋಲಿಸುತ್ತೇವೆ ಎಂಬ ರಮೇಶ್ ಜಾರಕಿಹೊಳಿ ಅವರ ಆಕ್ರೋಶದ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, 'ಬಿಜೆಪಿ ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುತ್ತಾರೆ. ಅವರಿಗೆ ಸ್ವಾಭಿಮಾನ ಇದ್ದರೆ, ಅವರಲ್ಲಿ ಶಿಸ್ತು ಇದ್ದರೆ ಅವರು ಉತ್ತರ ನೀಡಲಿ. ಬಿಜೆಪಿಯಲ್ಲಿ ಶಿಸ್ತು ಇಲ್ಲ, ಇದು ಬ್ಲಾಕ್ ಮೇಲರ್ ಗಳಿಗೆ ಹೆದರುವ ಪಕ್ಷ ಎನ್ನುವುದಾದರೆ ಅವರ ಇಚ್ಛೆಗೆ ಬಂದಂತೆ ಮಾಡಲಿ. ಎಲ್ಲವನ್ನು ಜನ ನೋಡುತ್ತಿದ್ದಾರೆ. ಬಿಜೆಪಿ ಹೆದರಿ ಸರಕಾರ ನಡೆಸುವ ಮಟ್ಟಕ್ಕೆ ಬಂದಿರುವುದು ಬಹಳ ಸಂತೋಷದ ಬೆಳವಣಿಗೆ. ನಮ್ಮ ಪಕ್ಷದಲ್ಲಿ ಈ ರೀತಿ ಮಾಡಿದ್ದರೆ ಒಂದು ಗಂಟೆಯೂ ಪಕ್ಷದಲ್ಲಿ ಇಟ್ಟುಕೊಳ್ಳದೆ ಅವರನ್ನು ವಜಾ ಮಾಡುತ್ತಿದ್ದೆ' ಎಂದರು.

ಮಹಿಳಾ ಶಾಸಕಿ ವಿರುದ್ಧ ರಮೇಶ್ ಜಾರಕಿಹೊಳಿ ಅವರ ಹಗುರವಾದ ಮಾತುಗಳ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಮಹಿಳಾ ಶಾಸಕಿ ವಿರುದ್ಧ ರಮೇಶ್ ಜಾರಕಿಹೊಳಿ ಆಡಿರುವ ಮಾತುಗಳನ್ನು ಕೆಲ ಮಾಧ್ಯಮಗಳು ಸಂಪೂರ್ಣ ತೋರಿಸಿದರೆ, ಕೆಲವರು ಕಟ್ ಮಾಡಿ ತೋರಿಸಿದ್ದಾರೆ. ಇದು ಬಿಜೆಪಿ ಸಂಸ್ಕøತಿಯ ಪ್ರತಿಬಿಂಬ. ಬಿಜೆಪಿ ಸಂಸ್ಕಾರ ಇರುವ ಪಕ್ಷ ಎಂದು ಹೇಳಿಕೊಳ್ಳುತ್ತದೆ. ಅದಕ್ಕೆ ಶೋಭಕ್ಕನವರು, ಯಡಿಯೂರಪ್ಪನವರು, ಬೊಮ್ಮಾಯಿಯವರು, ಕಟೀಲ್ ಅವರು ಉತ್ತರ ನೀಡಲಿ' ಎಂದರು.

ಬೆಳಗಾವಿಯಲ್ಲಿ ಮತದಾರರನ್ನು ಬೆದರಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಮ್ಮ ಪಕ್ಷ ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದು, ಗೋಕಾಕ್, ಅರಬಾವಿ, ರಾಯಭಾಗ್ ಹಾಗೂ ಇತರ ಕಡೆಗಳಲ್ಲಿ ಮತದಾರರ ಚೀಟಿ ಪಡೆದು ಬೇರೆಯವರು ಮತ ಹಾಕುವ ಪದ್ಧತಿ ನಡೆದುಕೊಂಡು ಬಂದಿದೆ. ನಮ್ಮ ಜಿಲ್ಲಾ ಘಟಕ, ಅಭ್ಯರ್ಥಿ ಮತ್ತಿತರರು ರಾಜ್ಯ ಮಟ್ಟದ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ಪೊಲೀಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ವಿಡಿಯೋ ವ್ಯವಸ್ಥೆ ಮಾಡಬೇಕು ಎಂದೂ ಮನವಿ ಮಾಡಿದ್ದೇವೆ ಎಂದರು.

ನಮ್ಮ ಕಾರ್ಯಾಧ್ಯಕ್ಷರು, ಇತರೆ ನಾಯಕರೇ ಬೂತ್ ಏಜೆಂಟರಾಗಿ ಕೂರುತ್ತೇವೆ ಎಂದು ಹೇಳಿದ್ದಾರೆ. ನಮ್ಮ ನಾಯಕರು ಎಲ್ಲಿ ಪ್ರಚಾರ ಮಾಡಬೇಕು ಎಂದು ಹೇಳುತ್ತಾರೋ ಅಲ್ಲಿ ಹೋಗಿ ನಾನು ಪ್ರಚಾರ ಮಾಡುತ್ತೇನೆ' ಎಂದು ಶಿವಕುಮಾರ್ ತಿಳಿಸಿದರು.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಸದ್ಯಕ್ಕೆ ಆ ವಿಚಾರ ಬೇಡ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಗಮನಹರಿಸೋಣ. ನಾವು ಜಿಲ್ಲಾಧಿಕಾರಿಗಳಿಗೆ ದೂರು ನೀಡಿ, ಅವರು ಕೂಡಲೇ ಬೆಂಗಳೂರು ನಗರ, ಬೆಳಗಾವಿ ಸೇರಿದಂತೆ ಎಲ್ಲ ಕಡೆಗಳಲ್ಲಿ ವಿಡಿಯೋ ವ್ಯವಸ್ಥೆ ಮಾಡಿ, ಮತದಾರರೇ ಮತ ಹಾಕುವಂತೆ ನೋಡಿಕೊಳ್ಳಬೇಕು. ಪಾರದರ್ಶಕ ಹಾಗೂ ಮುಕ್ತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸುತ್ತೇವೆ' ಎಂದರು.

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಯುವಕರಿದ್ದು, ಸಜ್ಜನರಿದ್ದಾರೆ. ಜನಸೇವೆ ಮಾಡಿಕೊಂಡು ಬಂದಿದ್ದಾರೆ. ಒಂದೇ ಪಕ್ಷದಲ್ಲಿದ್ದು, ನಮ್ಮ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಒಂದು ಅವಕಾಶ ಮಾಡಿಕೊಡಿ' ಎಂದು ಮನವಿ ಮಾಡಿದರು ಎಂದರು.

ಬೆಳಗಾವಿ ಅಧಿವೇಶನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಎರಡು ವರ್ಷಗಳ ಹಿಂದೆಯೇ ಬೆಳಗಾವಿ ಅಧಿವೇಶನ ನಡೆಯಬೇಕಿತ್ತು. ಅಲ್ಲಿ ಅಧಿವೇಶನ ನಡೆಸದ ಹಿನ್ನೆಲೆಯಲ್ಲಿ ಸುವರ್ಣ ಸೌಧ ಬಾಡಿಗೆಗೆ ನೀಡಿ ಎಂದು ಹೇಳಿದ್ದೆ. ನೆರೆ ಪರಿಹಾರ, ರೈತರಿಗೆ ಬೆಂಬಲ ಬೆಲೆ, ಕೋವಿಡ್ ಸಮಯದಲ್ಲಿ ನೆರವಾಗಿಲ್ಲ, ಕಬ್ಬು ಬೆಳೆಗಾರರಿಗೆ ಹಣ ಕೊಡಿಸಲು ಆಗಿಲ್ಲ.  ಜನರ ಆಕ್ರೋಶಕ್ಕೆ ಹೆದರಿ ಇಷ್ಟು ದಿನ ಬೆಳಗಾವಿಯಲ್ಲಿ ಅಧಿವೇಶನ ಮಾಡಿರಲಿಲ್ಲ. ಈಗ ವಿಧಿ ಇಲ್ಲದೇ ಅಧಿವೇಶನ ಮಾಡುತ್ತಿದ್ದಾರೆ' ಎಂದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X