Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಲಸಿಕೆ ಪಡೆಯದವರ ಮನವೊಲಿಸಿ:...

ಕೋವಿಡ್ ಲಸಿಕೆ ಪಡೆಯದವರ ಮನವೊಲಿಸಿ: ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ29 Nov 2021 9:22 PM IST
share
ಕೋವಿಡ್ ಲಸಿಕೆ ಪಡೆಯದವರ ಮನವೊಲಿಸಿ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ನ.29: ಜಿಲ್ಲೆಯು ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲಾ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು ಮತ್ತು ವೈದ್ಯರೊಂದಿಗೆ ನಡೆಸಿದ ಕೋವಿಡ್ ಲಸಿಕೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ  ಹಿಸಿ ಅವರು ಮಾತನಾಡುತಿದ್ದರು.

ಎರಡೂ ಡೋಸ್ ಕೋವಿಡ್ ಲಸಿಕೆ ಪಡೆಯುವುದರಿಂದ ಮಾತ್ರ ಕೋವಿಡ್ ನಿಂದ ಗರಿಷ್ಠ ಸುರಕ್ಷೆ ದೊರೆಯಲಿದೆ. ಜಿಲ್ಲೆಯಲ್ಲಿ ಪ್ರಥಮ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಮತ್ತು ಈಗಾಗಲೇ ಮೊದಲ ಡೋಸ್ ಪಡೆದು 2ನೇ ಡೋಸ್ ಪಡೆಯಲು ಅವಧಿ ಮೀರಿದವರು ತಕ್ಷಣವೇ ಲಸಿಕೆ ಯನ್ನು ಪಡೆಯಬೇಕು. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕು. ಲಸಿಕೆ ಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಯ ಎಲ್ಲಾ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ಲಸಿಕೆ ಪಡೆಯ ದಿದ್ದಲ್ಲಿ ಅವರಿಗೆ ಲಸಿಕೆಯ ಪ್ರಯೋಜನ ಕುರಿತು ಮನವರಿಕೆ ಮಾಡಿಕೊಡಬೇಕು. ರೋಗಿಗಳಿಗೆ ನೀಡುವ ಸಲಹಾ ಚೀಟಿಯಲ್ಲಿ ಲಸಿಕೆ ಪಡೆಯುವ ಕುರಿತಂತೆ ಹಾಗೂ ರೋಗ ಲಕ್ಷಣ ಗಳಿದ್ದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆಗಳನ್ನು ಬರೆದು ಕೊಡಬೇಕು ಎಂದರು.

ಜಿಲ್ಲೆಯ ಎಲ್ಲಾ ವೈದ್ಯರು ತಮ್ಮಲ್ಲಿಗೆ ಬರುವ ರೋಗಿಗಳು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ಲಸಿಕೆ ಪಡೆಯ ದಿದ್ದಲ್ಲಿ ಅವರಿಗೆ ಲಸಿಕೆಯ ಪ್ರಯೋಜನ ಕುರಿತು ಮನವರಿಕೆ ಮಾಡಿಕೊಡಬೇಕು. ರೋಗಿಗಳಿಗೆ ನೀಡುವ ಸಲಹಾ ಚೀಟಿಯಲ್ಲಿ ಲಸಿಕೆ ಪಡೆಯುವ ಕುರಿತಂತೆ ಹಾಗೂ ರೋಗ ಲಕ್ಷಣ ಗಳಿದ್ದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆಗಳನ್ನು ಬರೆದು ಕೊಡಬೇಕು ಎಂದರು.

ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನದಡಿಯಲ್ಲಿ, ಆಶಾ ಕಾರ್ಯಕರ್ತೆಯರು ಮತದಾರರ ಪಟ್ಟಿಯೊಂದಿಗೆ ಮನೆಮನೆಗೆ ಭೇಟಿ ನೀಡಿ, ಲಸಿಕೆ ಪಡೆಯದೇ ಇರುವವರ ಮಾಹಿತಿ ಸೇರಿದಂತೆ, ಲಸಿಕೆ ಪಡೆಯದೇ ಇರುವ ಕಾರಣ ತಿಳಿದು ಅವರುಗಳ ಮನವೊಲಿಸಿ ಲಸಿಕೆ ನೀಡುತ್ತಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಗ್ರಾಮೀಣ ಟಾಸ್ಕ್‌ಪೋರ್ಸ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಸೇರಿ, ಲಸಿಕೆ ಪಡೆಯದೇ ಇರುವವರ ಮಾಹಿತಿ ಪಡೆದು ಅವರುಗಳಿಗೆ ತಿಳಿಹೇಳಬೇಕು. ಯಾವುದಾದರೂ ಇತರೆ ಕಾಯಿಲೆಗಳು ಇದ್ದಲ್ಲಿ ವೈದ್ಯರ ಸಲಹೆ ಪಡೆದು ಲಸಿಕೆ ತೆಗೆದುಕೊಳ್ಳುವಂತೆ ತಿಳಿಸಬೇಕು ಎಂದರು.

ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು 2 ಡೋಸ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಪೌರಾಯುಕ್ತ ಉದಯ ಶೆಟ್ಟಿ, ವಿವಿಧ ಸಮುದಾಯಗಳ ಮುಖಂಡರು, ಐಎಂಎ ಮತ್ತು ಆಯುಷ್ ವೈದ್ಯರು ಉಪಸ್ಥಿತರಿದ್ದರು.

ಮಾಸ್ಕ್ ಇಲ್ಲದವರಿಗೆ ದಂಡ!

ಜಿಲ್ಲೆಗೆ ಹೊರ ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಬರುವವರಿಗೆ ಕೂಡಾ ಲಸಿಕೆ ನೀಡಲು ಕ್ರಮ ಕೈಗೊಂಡಿದ್ದು, ಕೋವಿಡ್ ಕುರಿತು ಜಾಗೃತಿ ಮೂಡಿಸಲು ಬಸ್ ಸ್ಟಾಂಡ್, ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳು ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಮಾಸ್ಕ್ ಡ್ರೈವ್ ಮಾಡಲಾಗುವುದು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯ ಮತ್ತೆ ಪ್ರಾರಂಭಗೊಳ್ಳಲಿದ್ದು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ಗಳಲ್ಲಿ ಈ ಕಾರ್ಯ ನಡೆಯಲಿವೆ. ಸಾರ್ವಜನಿಕರು ಸಭೆ ಸಮಾರಂಭಗಳಲ್ಲಿ ಸುರಕ್ಷತಾ ಅಂತರ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X