Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಯಮಗಳ ಅನುಸಾರ ಕೆಯುಡಬ್ಲ್ಯುಜೆ ಚುನಾವಣೆ...

ನಿಯಮಗಳ ಅನುಸಾರ ಕೆಯುಡಬ್ಲ್ಯುಜೆ ಚುನಾವಣೆ ನಡೆಸಬೇಕು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ29 Nov 2021 10:43 PM IST
share
ನಿಯಮಗಳ ಅನುಸಾರ ಕೆಯುಡಬ್ಲ್ಯುಜೆ ಚುನಾವಣೆ ನಡೆಸಬೇಕು: ಹೈಕೋರ್ಟ್

ಬೆಂಗಳೂರು, ನ.29: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯುಜೆ) ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಸ್ಪರ್ಧಿಸುವವರು ನೈಜ ಪತ್ರಕರ್ತರೇ ಆಗಿರಬೇಕು ಮತ್ತು ಕರ್ನಾಟಕ ಟ್ರೇಡ್ ಯೂನಿಯನ್ ಮಾದರಿ ನಿಯಮಗಳು–1953ರ ಅನುಸಾರ ಕಟ್ಟುನಿಟ್ಟಿನ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೈಕೋರ್ಟ್, ಕಾರ್ಮಿಕ ಇಲಾಖೆಗೆ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಈ ಸಂಬಂಧ ರಾಯಚೂರಿನ ‘ಈಶಾನ್ಯ ಟೈಂಸ್’ ಸಂಪಾದಕ ಎನ್. ನಾಗರಾಜ, ಶಿವಮೊಗ್ಗದ ‘ಕ್ರಾಂತಿದೀಪ’ ದಿನಪತ್ರಿಕೆ ಸಂಪಾದಕ ಎನ್.ಮಂಜುನಾಥ ಮತ್ತು ರಾಯಚೂರಿನ ‘ಸುದ್ದಿ ಮೂಲ’ ದಿನಪತ್ರಿಕೆ ಮುಖ್ಯ ವರದಿಗಾರ ಬಿ.ವೆಂಕಟಸಿಂಗ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಆದೇಶ ಪರಿಪಾಲನೆ ಆಗದೆ, ಯಾವುದೇ ತಕರಾರು ಉದ್ಭವವಾದಲ್ಲಿ ಅರ್ಜಿದಾರರು ಪುನಹ ಹೈಕೋರ್ಟ್‍ಗೆ ಬರಬಹುದು ಎಂದು ತಿಳಿಸಿದೆ.

ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಸಂಘದಲ್ಲಿ ಟ್ರೇಡ್ ಯೂನಿಯನ್ ನಿಯಮಗಳ ಅನುಸಾರ ಮಾಲಕರೂ ಸದಸ್ಯತ್ವ ಹೊಂದಿರುವುದು ಆಕ್ಷೇಪಾರ್ಹ. ಸಂಘದಲ್ಲಿ 7,800 ಸದಸ್ಯರು ಇದ್ದಾರೆ. ಆದರೆ, ಇವರಲ್ಲಿ ನೈಜ ಪತ್ರಕರ್ತರ ಸಂಖ್ಯೆ ತುಂಬಾ ಕಡಿಮೆ ಇದೆ. ಹೀಗಾಗಿ, 2018–2021ರ ಸಾಲಿಗೆ ಮರುಚುನಾವಣೆಗೆ ಆದೇಶಿಸಲು ನಿರ್ದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದರು.

ಟ್ರೇಡ್ ಯೂನಿಯನ್ ಕಾಯ್ದೆ–1926ರ ಅನುಸಾರ ಕೆಯುಡಬ್ಲ್ಯುಜೆ ನೋಂದಣಿಯಾಗಿದೆ. ಇದಕ್ಕೆ ಕರ್ನಾಟಕ ವೃತ್ತಿಪರ ಸಂಘಗಳ ಚುನಾವಣಾ (ಮಾದರಿ) ನಿಯಮಗಳು–1953ರ ಅಡಿಯಲ್ಲೇ ಚುನಾವಣೆ ನಡೆಯಬೇಕು. ಸಂಘದಲ್ಲಿನ ಅವ್ಯವಹಾರಗಳ ಬಗ್ಗೆ 2018ರಲ್ಲಿ ಸಲ್ಲಿಸಲಾದ ರಿಟ್ ಅರ್ಜಿಗೆ  ಸಂಬಂಧಿಸಿದಂತೆ 2018ರ ಆ.21ರಂದು ತೀರ್ಪು ನೀಡಿದ್ದ ಏಕಸದಸ್ಯ ನ್ಯಾಯಪೀಠವು, ಅರ್ಜಿದಾರರ ಮನವಿ ಪರಿಗಣಿಸಲು ಕಾರ್ಮಿಕ ಆಯುಕ್ತರಿಗೆ ಆದೇಶಿಸಿತ್ತು ಎಂದು ವಿವರಿಸಿದ್ದರು.

ಈ ಮೊದಲಿನ ಅರ್ಜಿದಾರ ಎಂ.ವೆಂಕಟೇಶ ಸಿಂಹ ಭೋವಿ ಸಲ್ಲಿಸಿದ್ದ ಮನವಿಯನ್ನು ಅಂದಿನ ಸಹಾಯಕ ಕಾರ್ಮಿಕ ಆಯುಕ್ತ ಎಚ್.ಎಲ್.ಗುರುಪ್ರಸಾದ್ ಅವರಿದ್ದ ಅರೆನ್ಯಾಯಿಕ ಪೀಠವು ವಿಚಾರಣೆ ನಡೆಸಿ, ‘ಅರ್ಜಿದಾರರು ತಕರಾರು ಎತ್ತಿರುವ ಅಂಶಗಳ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿ ಪರಿಹಾರ ಕಂಡುಕೊಳ್ಳಬಹುದು‘ ಎಂದು 2018ರ ಡಿಸೆಂಬರ್ 15ರಂದು ಆದೇಶಿಸಿತ್ತು. ಆದರೆ, ‘ಈ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯವಾಗಿದೆ’’ ಎಂದು ಎನ್. ನಾಗರಾಜ ಮತ್ತು ಇತರರು ಆಕ್ಷೇಪಿಸಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಚುನಾವಣಾಧಿಕಾರಿ, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಆಯುಕ್ತರು, ಬನ್ನೇರುಘಟ್ಟ ರಸ್ತೆಯಲ್ಲಿರುವ ನಾಲ್ಕನೇ ವಿಭಾಗದ ಕಾರ್ಮಿಕ ಆಯುಕ್ತರು ಹಾಗೂ ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷರೂ ಆದ ಚಿಕ್ಕಮಗಳೂರಿನ ಎನ್.ರಾಜು ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಸರಕಾರದ ಪರ ಕೆ.ಆರ್.ರೂಪಾ ವಾದ ಮಂಡಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X