Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಸೋಂಕು ತಡೆಯುವಲ್ಲಿ ವಿಮಾನ...

ಕೋವಿಡ್ ಸೋಂಕು ತಡೆಯುವಲ್ಲಿ ವಿಮಾನ ನಿಲ್ದಾಣ, ಎನ್ಎಂಪಿಟಿ ಪಾತ್ರ ಮುಖ್ಯ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ30 Nov 2021 9:18 PM IST
share
ಕೋವಿಡ್ ಸೋಂಕು ತಡೆಯುವಲ್ಲಿ ವಿಮಾನ ನಿಲ್ದಾಣ, ಎನ್ಎಂಪಿಟಿ ಪಾತ್ರ ಮುಖ್ಯ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಇತ್ತೀಚೆಗೆ ಹೊರ ರಾಷ್ಟ್ರಗಳಲ್ಲಿ ವರದಿಯಾಗುತ್ತಿರುವ ಅದರ ರೂಪಾಂತರಿಯನ್ನು ತಡೆಗಟ್ಟುವಲ್ಲಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರು ಟ್ರಸ್ಟ್ ನ ಪಾತ್ರ ಅತಿ ಮುಖ್ಯವಾಗಿದ್ದು,  ಕೋವಿಡ್ ಸೋಂಕಿತರ  ಪತ್ತೆಗಾಗಿ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಸಂಬಂಧಿಸಿದವರಿಗೆ ಸೂಚಿಸಿದರು.

ಅವರು, ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಅಂತರಾಷ್ಟ್ರೀಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ತಪಾಸಣೆ ಹಾಗೂ ನಿಗಾ ವಹಿಸುವ ಕುರಿತು ಹಮ್ಮಿಕೊಳ್ಳಲಾಗಿದ್ದ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏರ್ ಪೋರ್ಟ್ ಗೆ ಬರುವವರು ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿ ಹೊಂದಿರಬೇಕು. ಕೋವಿಡ್ ತಪಾಸಣೆ ವೇಳೆ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು, ಏರ್ ಪೋರ್ಟ್ ಮ್ಯಾನೇಜರ್ ಗೆ ಸೋಂಕಿತರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಜವಬ್ದಾರಿ ನೀಡಲಾಗಿದೆ ಎಂದರು.

ಅದೇ ರೀತಿ ನವ ಮಂಗಳೂರು ಬಂದರು ಟ್ರಸ್ಟ್ ಗೆ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಹಡಗುಗಳಲ್ಲಿ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಹಾಗೂ  ಎಷ್ಟು ಪ್ರಯಾಣಿಕರು, ಎಷ್ಟು ಹಡಗುಗಳು ಇಲ್ಲಿಗೆ ಬಂದವು, ಆ ವಿವರಗಳನ್ನು ಪ್ರತಿ ವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಎನ್ ಎಂ ಪಿ ಟಿ ಮ್ಯಾನೇಜರ್ ಗೆ ತಿಳಿಸಿದರು.

ಪ್ರಮುಖವಾಗಿ ಎಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೋವಿಡ್ ವ್ಯಾಕ್ಸಿನ್ ನ ಮೊದಲ ಹಾಗೂ ಎರಡನೇ ಡೋಸ್  ಪಡೆದುಕೊಂಡಿರುವ ಬಗ್ಗೆ  ಜಿಲ್ಲಾಧಿಕಾರಿಗಳ ಕಚೇರಿಗೆ ಕೂಡಲೇ ಮಾಹಿತಿ ಒದಗಿಸಬೇಕು,  ಅದೇ ರೀತಿ ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರು ಕೂಡ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು,  ಪಡೆಯದವರ  ಅನುಕೂಲಕ್ಕಾಗಿ ಸಮೀಪ ದಲ್ಲಿಯೇ ವ್ಯಾಕ್ಸಿನ್ ನೀಡುವ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಗೆ ಆಗಮಿಸುವ ಸಾರ್ವಜನಿಕರು ಕೋವಿಡ್ ನ  ಮೊದಲ ಹಾಗೂ ಎರಡನೇ ಡೋಸ್  ಪಡೆದಿರುವ ಬಗ್ಗೆ ಮಾಹಿತಿ ನೀಡಬೇಕು,  ಆರ್ ಟಿ ಒ ಕಚೇರಿಗೆ ಸಾಕಷ್ಟು ಜನರು ಪ್ರತಿನಿತ್ಯ ಬರುತ್ತಾರೆ ಅವರು ಕೂಡ ವ್ಯಾಕ್ಸಿನ್ ಪಡೆದಿರುವ ಮಾಹಿತಿ ನೀಡಬೇಕು,  ಕೇರಳ ಹಾಗೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರ ವಾಹನಗಳನ್ನು ತಪಾಸಣೆ ಮಾಡಬೇಕು, ವಾಹನಗಳಲ್ಲಿರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ ಟಿ ಪಿ ಸಿ ಆರ್ ವರದಿ ಇಟ್ಟುಕೊಂಡಿರಬೇಕು,  ರಾಂಡಮ್ ಆಗಿ ಪರಿಶೀಲಿಸುವ ಸಂದರ್ಭದಲ್ಲಿ ಈ ವರದಿ ನೀಡದಿದ್ದರೆ ಅಂತರಾಜ್ಯ ಸಾರಿಗೆಯನ್ನು  ನಿರ್ಬಂಧಿಸುವ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಮುಖ್ಯವಾಗಿ ಕೇರಳದಿಂದ ಜಿಲ್ಲೆಗೆ ಆಗಮಿಸುವವರು ಆರ್ ಟಿ ಪಿ ಸಿ ಆರ್ ರಿಪೋರ್ಟ್ ಹೊಂದಿರಬೇಕು, ಕೋವಿಡ್ ನ ಎರಡು ಡೋಸ್ ಲಸಿಕೆ ಪಡೆದಿರಬೇಕು,  ಪ್ರತಿನಿತ್ಯ ಕೇರಳದಿಂದ ಇಲ್ಲಿಗೆ  ಆಗಮಿಸುವವರು 14 ದಿನಗಳಿಗೊಮ್ಮೆ ಕೋವಿಡ್ ತಪಾಸಣೆ ಮಾಡಿಸಿಕೊಂಡು,  ವರದಿ  ಇಟ್ಟುಕೊಂಡಿರಬೇಕು, ತಪಾಸಣೆ ವೇಳೆ ಅದನ್ನು ಹಾಜರು ಪಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಡಾ.  ಕುಮಾರ್,  ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಡಿಸಿಪಿ ಹರಿರಾಮ್ ಶಂಕರ್,  ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ,  ಸಹಾಯಕ ಆಯುಕ್ತ ಮದನ್ ಮೋಹನ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವರ್ಣೇಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X