ಜೇನು ತರಬೇತಿ ನೋಂದಣಿಗೆ ಸೂಚನೆ
ಉಡುಪಿ, ನ.30: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ, ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಆಸಕ್ತ ರೈತರು ಡಿ.3ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820- 2522837 ಹಾಗೂ 7996394553 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





