Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿದೇಶಗಳಿಂದ ಬರುವವರಿಗೆ ಕಡ್ಡಾಯ ಕೋವಿಡ್...

ವಿದೇಶಗಳಿಂದ ಬರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಡಾ. ಸುಧಾಕರ್

'ಬೂಸ್ಟರ್ ಬಗ್ಗೆ ಕೇಂದ್ರ ಮಟ್ಟದಲ್ಲಿ ಚರ್ಚೆ'

ವಾರ್ತಾಭಾರತಿವಾರ್ತಾಭಾರತಿ1 Dec 2021 2:14 PM IST
share
ವಿದೇಶಗಳಿಂದ ಬರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಡಾ. ಸುಧಾಕರ್

ಬೆಂಗಳೂರು : ಹೊರ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ಇಂದಿನಿಂದ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ವಿದೇಶದಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ  ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಡುವ ಆರ್ ಟಿಪಿಸಿಆರ್ ಪರೀಕ್ಷೆ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸಿ ಅಲ್ಲಿ ಅವರನ್ನು 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಲಾಗುವುದು. ಕ್ವಾರಂಟೈನ್ ನಲ್ಲೇ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ರೋಗ ಲಕ್ಷಣ ಇರುವವರಿಗೆ, ಆರ್ ಟಿಪಿಸಿಆರ್ ವರದಿ  ನೆಗೆಟಿವ್ ಬಂದರೆ, 5ನೇ ದಿನ ಅವರನ್ನು ಮತ್ತೆ  ಪರೀಕ್ಷೆ ಮಾಡಲಾಗುವುದು. ಅದರಲ್ಲೂ ನೆಗೆಟಿವ್ ವರದಿ ಬಂದರೆ 7 ದಿನಗಳ ಬಳಿಕ ಅವರು ಕ್ವಾರಂಟೈನ್ ನಿಂದ ಹೊರಬರಬಹುದು. ಒಂದು ವೇಳೆ ಆರ್ ಟಿಪಿಸಿಆರ್ ವರದಿಯಲ್ಲಿ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ಕೊಡಲಾಗುತ್ತದೆ. ಪರೀಕ್ಷೆ ಕಡ್ಡಾಯವಾಗಿರುವುದರಿಂದ ಪ್ರಯಾಣಿಕರಿಗೆ ಸ್ವಲ್ಪ ತಡವಾಗಬಹುದು. ಆದರೆ ಇದು ಅನಿವಾರ್ಯ ಎಂದು ತಿಳಿಸಿದರು.

ಕೋವಿಡ್ ಸೋಂಕಿತರು ಕಂಡುಬಂದರೆ ಅವರಿಗೆ ಆಸ್ಪತ್ರೆಗಳಲ್ಲಿ ವಿಶೇಷ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುವುದು. ಇದಕ್ಕಾಗಿ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜುಗಳ ಜೊತೆ ಮಾತುಕತೆ ನಡೆಸಲಾಗಿದೆ. ಆರೋಗ್ಯ ಇಲಾಖೆ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚಿಸಿದೆ ಎಂದರು.

ಬೂಸ್ಟರ್ ಬಗ್ಗೆ ಚರ್ಚೆ

ಡಿಸೆಂಬರ್ 2 ಅಥವಾ 3 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚೆ ಮಾಡಲಿದ್ದಾರೆ.  ಬೂಸ್ಟರ್ ಡೋಸ್ ಬಗ್ಗೆ ವೈಜ್ಞಾನಿಕವಾದ ಸಾಧಕ, ಬಾಧಕಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಟೆಲಿ ಮಡಿಸಿನ್, ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಮತ್ತು ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೆ ತರಲಾಗುವುದು. ಸಾರ್ವಜನಿಕರು ಸರ್ಕಾರದ ಜೊತೆ ಕೈ ಜೋಡಿಸಿದರೆ ಬೇಗನೆ ಆತಂಕದಿಂದ ಹೊರಬರಬಹುದು. ಒಮಿಕ್ರಾನ್ ಮಣಿಸಲು ಜಾಗೃತಿ ಮತ್ತು ಜಾಗ್ರತೆ ಎರಡೂ ಬೇಕು ಎಂದು ತಿಳಿಸಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಎರಡು ಡೋಸ್ ಲಸಿಕೆ ಪಡೆಯದವರಿಗೆ ಸರ್ಕಾರದಿಂದ ಕೊಡುವ ಸೌಲಭ್ಯಗಳನ್ನು ಕಡಿತ ಮಾಡಬೇಕು ಮತ್ತು ದಂಡ ಹಾಕಬೇಕು ಎಂದು ಸಲಹೆ ನೀಡಿತ್ತು. ಆದರೆ ಸರ್ಕಾರ ಅದನ್ನು ಮಾಡುವುದಿಲ್ಲ. ಬದಲಾಗಿ ಲಸಿಕೆ ಪಡೆಯದಿರುವವರ ಮನ ಒಲಿಸಿ ಅವರನ್ನು ಲಸಿಕೆ ಪಡೆಯುವಂತೆ ಮಾಡಲಾಗುವುದು. ಕಳೆದ ಎರಡು ದಿನಗಳಿಂದ ಲಸಿಕೆ ತೆಗೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮ ಫಲಪ್ರದವಾಗಿದೆ ಎಂದು ತಿಳಿಸಿದರು.

ಒಮಿಕ್ರಾನ್ ಮಕ್ಕಳ ಮೇಲೆ ಪ್ರಭಾವ ಬೀರುವ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಇದು ಬಹಳ ವೇಗವಾಗಿ ಹರಡುವ ವೈರಸ್ ಎಂದು ತಿಳಿದುಬಂದಿದೆ. ಮಕ್ಕಳ ಲಸಿಕೆ ಬಗ್ಗೆ ಕೂಡ ಕೇಂದ್ರ ಸರ್ಕಾರ ಚರ್ಚೆ ಮಾಡುತ್ತಿದೆ. ಆದಷ್ಟು ಶೀಘ್ರದಲ್ಲಿ ಮಕ್ಕಳ ಲಸಿಕೆ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X