Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಸಂದರ್ಭ ಸಾರ್ವಜನಿಕರಿಗೆ ಅಗತ್ಯ...

ಕೋವಿಡ್ ಸಂದರ್ಭ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸುವಲ್ಲಿ ರೆಡ್ ಕ್ರಾಸ್ ಕಾರ್ಯ ಶ್ಲಾಘನೀಯ: ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ1 Dec 2021 2:49 PM IST
share
ಕೋವಿಡ್ ಸಂದರ್ಭ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸುವಲ್ಲಿ ರೆಡ್ ಕ್ರಾಸ್ ಕಾರ್ಯ ಶ್ಲಾಘನೀಯ: ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ರಾಜ್ಯದಲ್ಲಿ  ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ  ಕಾರ್ಯ ಹಾಗೂ ಯುವಜನತೆಯಲ್ಲಿ  ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ತೊಡಗಿಕೊಂಡಿದ್ದು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ತಿಳಿಸಿದ್ದಾರೆ.

ಇಂದು ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ  ಸಂಭವಿಸುತ್ತಿರುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಹಾಗೂ ಕೋವಿಡ್-19 ಜಾಗೃತಿ ಮತ್ತು ನಿರ್ವಹಣೆಯಲ್ಲಿ ರಾಜ್ಯಾದ್ಯಂತ ರೆಡ್ ಕ್ರಾಸ್ ನ ಸ್ವಯಂಸೇವಕರು ಅತ್ಯುತ್ತಮವಾಗಿ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಶ್ಲಾಘಿಸಿದರು.

2019-20ನೇ ವರ್ಷದಲ್ಲಿ ಉತ್ತಮವಾಗಿ ರೆಡ್ ಕ್ರಾಸ್ ಚಟುವಟಿಕೆಗಳನ್ನು ಕಾರ್ಯಗತ ಮಾಡಿದ  ರಾಯಚೂರು, ತುಮಕೂರು, ದಕ್ಷಿಣ ಕನ್ನಡ ಜಿಲ್ಲಾ ಶಾಖೆಗಳು  ಹಾಗೂ ಸಾರ್ವಜನಿಕರಿಗೆ  ಉತ್ತಮ ಸೇವೆಯನ್ನು ನೀಡಿದ ಹಾಸನ, ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ ಜಿಲ್ಲಾ ರೆಡ್ ಕ್ರಾಸ್ ಶಾಖೆಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರವಾಹ ಸಂದರ್ಭ ಅತ್ಯುತ್ತಮ  ಕಾರ್ಯ ನಿರ್ವಹಿಸಿದ ಬಾಗಲಕೋಟೆ ಜಿಲ್ಲಾ ರೆಡ್ ಕ್ರಾಸ್ ಹಾಗೂ ಉತ್ತಮ ಆರೋಗ್ಯ ಸೇವೆಗಳಿಗಾಗಿ  ಹಿರಿಯೂರು ರೆಡ್ ಕ್ರಾಸ್ ತಾಲ್ಲೂಕು ಶಾಖೆಗೆ  ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಹಿರಿಯ ಸದಸ್ಯರಾದ ಅಪ್ಪಾರಾವ್ ಅಕ್ಕೋಣೆ ರವರ ರೆಡ್ ಕ್ರಾಸ್ ಕಾರ್ಯಚಟುವಟಿಕೆಗಳನ್ನು ಗುರುತಿಸಿ ರಾಷ್ಟ್ರೀಯ ಕೇಂದ್ರ ಕಚೇರಿಯಿಂದ ನೀಡಲಾಗಿದ್ದ ಮೆರಿಟ್ ಸರ್ಟಿಫಿಕೆಟ್ ನ್ನು ಈ  ಸಂದರ್ಭದಲ್ಲಿ ಅವರಿಗೆ ಹಸ್ತಾಂತರಿಸಲಾಯಿತು.

ಇದೇ ಸಂದರ್ಭ ರೆಡ್ ಕ್ರಾಸ್ ರಕ್ತ ಕೇಂದ್ರದ ಉನ್ನತೀಕರಣಕ್ಕೆ ಸಹಾಯ ನೀಡಿದ  NTT DATA ಗ್ಲೋಬಲ್ ಡಿಲಿವರಿ ಸರ್ವಿಸ್ ಸಂಸ್ಥೆಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯದಲ್ಲಿನ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಯುವ ರೆಡ್ ಕ್ರಾಸ್ ಕಾರ್ಯಚಟುವಟಿಕೆಗಳು ಅತ್ಯಂತ ಪರಿಣಾಮಕಾರಿಯಾಗಿ ನಡೆಯುತಲಿದ್ದು 2019-20 ನೇ ಸಾಲಿನ ಅತ್ಯುತ್ತಮ ಯುವ ರೆಡ್ ಕ್ರಾಸ್ ಕಾರ್ಯನಿರ್ವಹಣೆ ಮಾಡಿದ ಮಂಗಳೂರು ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಇವರಿಗೆ ಅತ್ಯುತ್ತಮ ಯುವ ರೆಡ್ ಕ್ರಾಸ್ ಘಟಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೋವಿಡ್-19 ರಿಂದ ಇಡೀ ವಿಶ್ವದಾದ್ಯಂತ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡು ಪರ್ಯಾಯ ಜೀವನೋಪಾಯಗಳನ್ನು ಹುಡುಕುತ್ತಿರುವ ಬೆನ್ನಲ್ಲೇ ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯು ಮೈಕ್ರೋಫೋಕಸ್ ಸಂಸ್ಥೆಯ ಸಹಯೋಗದೊಂದಿಗೆ ಕರ್ನಾಟಕದಾದ್ಯಂತ 900 ಕ್ಕೂ ಹೆಚ್ಚಿನ ಕುಟುಂಬಗಳಿಗೆ ಜೀವನೋಪಾಯದ ನೆರವು ನೀಡುವಲ್ಲಿ ಕಸೂತಿ ಹೊಲಿಗೆ ಯಂತ್ರಗಳನ್ನು ನೀಡಿ ತರಬೇತಿ ನೀಡುವ ಜೀವನೋಪಾಯ ಯೋಜನೆಗೆ ರಾಜ್ಯದ ರಾಜ್ಯಪಾಲರು ಫಲಾನುಭವಿಗೆ ಕಸೂತಿ ಹೊಲಿಗೆ ಯಂತ್ರವನ್ನು ಹಸ್ತಾಂತರಿಸುವ ಮೂಲಕ ಯೋಜನೆಗೆ ಜಾಲನೆ ನೀಡಿದರು.

ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ  ಜಿಲ್ಲಾಧಿಕಾರಿಗಳು, ಮಂಗಳೂರು ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಶಾಖೆಯ ಸದಸ್ಯರು ಮತ್ತು ಸ್ವಯಂಸೇವಕರು ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು.

ಗೌರವಾನ್ವಿತ ರಾಜ್ಯಪಾಲರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.  ಸಭೆಯಲ್ಲಿ  ಉಪಾಧ್ಯಕ್ಷರಾದ ಶ್ರೀ ಗೋಪಾಲ್ ಬಿ. ಹೂಸೂರು ಐ.ಪಿ.ಎಸ್. (ನಿವೃತ್ತ), ಸಭಾಪತಿ ಎಸ್. ನಾಗಣ್ಣ, ಉಪಸಭಾಪತಿಗಳಾದ ಡಾ. ಕುಮಾರ್ ವಿ.ಎಲ್.ಎಸ್. ಗೌರವ ಕೋಶಾಧ್ಯಕ್ಷರಾದ  ಆನಂದ್ ಎಸ್. ಜಿಗಜಿನ್ನಿ ಇವರು ಉಪಸ್ಥಿತರಿದ್ದರು. 

ಹೆಚ್. ಎಸ್. ಬಾಲಸುಬ್ರಮಣ್ಯ
ಪ್ರಧಾನ ಕಾರ್ಯದರ್ಶಿ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ,
ಕರ್ನಾಟಕ ರಾಜ್ಯ ಶಾಖೆ,
ಬೆಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X