ಉಡುಪಿ : 9 ಮಂದಿಗೆ ಕೊರೋನ ಸೋಂಕು

ಉಡುಪಿ, ಡಿ.1: ಜಿಲ್ಲೆಯಲ್ಲಿ ಬುಧವಾರ 9 ಮಂದಿಯಲ್ಲಿ ಕೊರೋನಾ ಸೋಂಕು ಪಾಸಿಟಿವ್ ಬಂದಿದ್ದು, ಇಂದು ನಾಲ್ಕು ಮಂದಿ ಕೋವಿಡ್‌ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. 63 ಮಂದಿ ಇನ್ನು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಎಚ್‌ಓ ಡಾ ನಾಗಭೂಷಣ ಉಡುಪ ತಿಳಿಸಿದ್ದಾರೆ.
ಸೋಂಕಿತರ ಪೈಕಿ ಮೂವರು ಉಡುಪಿ, ಆರು ಮಂದಿ ಕುಂದಾಪುರ ತಾಲೂಕಿನವರು. ಪಾಟಿಸಿಟಿವ್ ಬಂದ ಎಂಟು ಮಂದಿ ಹೋಮ್ ಐಸೋ ಲೇಶನ್ ಹಾಗೂ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76894ಕ್ಕೇರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 76355 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬುಧವಾರ ಒಟ್ಟು 12,021 ಮಂದಿ ಕೋವಿಡ್ ಲಸಿಕೆ ಪಡೆದು ಕೊಂಡಿದ್ದಾರೆ. ಇವರಲ್ಲಿ 1680 ಮಂದಿ ಮೊದಲ ಡೋಸ್ ಹಾಗೂ 10341 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ
Next Story