ಪ್ರದರ್ಶನ ಮಳಿಗೆಯಿಂದ ಚಿನ್ನಾಭರಣ ಕಳವು
ಕುಂದಾಪುರ, ಡಿ.1: ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ಸೇರಿದಂತೆ ಮೂವರು ಕೋಟೇಶ್ವರದ ಯುವ ಮೆರಿಡಿಯನ್ ಬ್ಯಾಂಕೆಟ್ ಹಾಲ್‌ನಲ್ಲಿ ನಡೆಯುತ್ತಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಈ ಪ್ರದರ್ಶನಕ್ಕೆ ನ.29ರಂದು ಮಧ್ಯಾಹ್ನ ವೇಳೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನು ಗ್ರಾಹಕರಂತೆ ಬಂದು 2 ಜೊತೆ ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಸಿಸಿಟಿವಿ ಪೋಟೇಜ್ ಪರಿಶೀಲನೆ ವೇಳೆ ತಿಳಿದುಬಂದಿದೆ. ಕಳವಾದ 2 ಚಿನ್ನದ ಬಳೆಗಳು ಸುಮಾರು 43 ಗ್ರಾಂ ಇದ್ದು, ಇವುಗಳ ಮೌಲ್ಯ 2,86,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





