ಡಿ.3ರಿಂದ ಆರೋಗ್ಯ ಸಚಿವರ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಡಿ.1: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಡಿ.3ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಡಿ.3ರ ಶುಕ್ರವಾರ ಮಧ್ಯಾಹ್ನ 4.20ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದ ಹೆಲಿಪ್ಯಾಡ್‌ಗೆ ಆಗಮಿಸಿ ಸಂಜೆ 5 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತ ರ್ವಣಿ ಸಭಾಭವನದಲ್ಲಿ ನಡೆಯುವ 89ನೇ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವರು.
ಡಿ.4ರಂದು ಬೆಳಿಗ್ಗೆ 7 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





