ನಾಲ್ಕು ದಿನಗಳ ಪ್ರವಾಸಕ್ಕಾಗಿ ಮಂಗಳೂರಿಗೆ ಆಗಮಿಸಿದ ರಾಜ್ಯಪಾಲರು
ಮಂಗಳೂರು, ಡಿ.2: ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಪ್ರವಾಸಕ್ಕಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ರಾಜ್ಯಪಾಲರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ರಾಜ್ಯಪಾಲರನ್ನು ಸ್ವಾಗತಿಸಿದರು,
ನಂತರ ರಾಜ್ಯಪಾಲರು ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದರು.