Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ...

ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಫಲಿತಾಂಶ ಶೀಘ್ರ ದೊರೆಯಲು ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ2 Dec 2021 9:13 PM IST
share
ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆ ಫಲಿತಾಂಶ ಶೀಘ್ರ ದೊರೆಯಲು ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಡಿ.2: ಕೊರೋನ ಪರೀಕ್ಷೆ ಸಂಬಂಧ ವಿಮಾನ ನಿಲ್ದಾಣಗಳಲ್ಲಿ ಸಿದ್ಧತೆ ನಡೆದಿದೆ. ನಿನ್ನೆ ರಾತ್ರಿ ಮತ್ತು ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ಮಾಡಲಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರಿಗೆ ತಪಾಸಣೆ, ಪರೀಕ್ಷೆ ಬಗ್ಗೆ ಸೂಚನೆ ನೀಡಲಾಗಿದೆ. ಪರೀಕ್ಷೆ ಮುಗಿದ 3 ಅಥವಾ 4 ಗಂಟೆಯೊಳಗೆ ಫಲಿತಾಂಶ ಬರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣಗಳಲ್ಲಿ ಅಬೋಟ್ ಮತ್ತು ಆರ್‍ಟಿಪಿಸಿಆರ್ ಎಂಬ ಎರಡು ರೀತಿಯ ಪರೀಕ್ಷೆಗಳಿವೆ. ಅಬೋಟ್ ಪರೀಕ್ಷೆಗೆ ಕೇಂದ್ರ ಸರಕಾರ 3,000 ರೂ. ನಿಗದಿಪಡಿಸಿದೆ ಎಂದರು.

ಅಬೋಟ್‍ನಿಂದ ಕೇವಲ ಅರ್ಧ ಅಥವಾ 1 ಗಂಟೆಯೊಳಗೆ ಫಲಿತಾಂಶ ಪಡೆಯಬಹುದು. ಅಬೋಟ್ ಪರೀಕ್ಷೆಯಲ್ಲಿ ನಿಖರತೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ, ಅಬೋಟ್ ಕೂಡ ಆರ್‍ಟಿಪಿಸಿಆರ್ ನಷ್ಟೇ ನಿಖರತೆ ಹೊಂದಿದೆ ಎಂದು ಸುಧಾಕರ್ ಸ್ಪಷ್ಟಪಡಿಸಿದರು.

ವಿಮಾನ ನಿಲ್ದಾಣದಲ್ಲಿ ಆರ್‍ಟಿಪಿಸಿಆರ್ ಪರೀಕ್ಷೆಗೆ 500 ರೂ. ಶುಲ್ಕವಿದೆ. ಈ ಪರೀಕ್ಷೆ ನಡೆಸಿದ 3 ರಿಂದ 4 ಗಂಟೆಯೊಳಗೆ ಫಲಿತಾಂಶ ದೊರೆಯುತ್ತದೆ. ಇಡೀ ಸಮುದಾಯಕ್ಕೆ ವೈರಸ್ ಹರಡಬಾರದು ಎಂಬುದು ಸರಕಾರದ ಉದ್ದೇಶ. ಕಂಪೆನಿ ಉದ್ಯೋಗಿಗಳು ಪರೀಕ್ಷೆ ಮಾಡಿಸಿಕೊಳ್ಳುವ ಮುನ್ನ ಮನೆಗೆ ಬಿಟ್ಟುಬಿಡಿ, ಆಮೇಲೆ ಟ್ರ್ಯಾಕ್ ಮಾಡಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಲ್ಲಿ ಸರಕಾರಕ್ಕೆ ಬಹಳ ಅನುಭವ ಆಗಿದೆ. ಹೀಗಾಗಿ ಈಗಿರುವ ಕ್ರಮಗಳಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಬುಧವಾರ ನಡೆದ ಕೋವಿಡ್ ವಿಶೇಷ ಲಸಿಕೆ ಮೇಳದಲ್ಲಿ 9.50 ಲಕ್ಷ ಡೋಸ್ ಲಸಿಕೆ ನೀಡಿದ್ದು, ಉತ್ತಮವಾಗಿ ಲಸಿಕಾಕರಣ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಎರಡನೇ ಡೋಸ್ ಪಡೆದವರ ಪ್ರಮಾಣ ಶೇ.62ಕ್ಕೆ ಏರಿದೆ. ಮೊದಲ ಡೋಸ್ ಪಡೆದವರ ಪ್ರಮಾಣ ಶೇ.92ಕ್ಕೆ ತಲುಪಿದೆ. ನಿನ್ನೆವರೆಗೆ ಒಟ್ಟು 7.50 ಕೋಟಿ ಡೋಸ್‍ಗಳನ್ನು ನೀಡಲಾಗಿದೆ. ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕ ಲಸಿಕೆ ನೀಡುವಲ್ಲಿ 2 ಅಥವಾ 3 ನೇ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ಬಳಿಕ ವಿಶೇಷ ಯೋಜನೆಗಳಿಗೆ ಬಹಳ ಒತ್ತು ನೀಡುತ್ತಿದ್ದಾರೆ ಎಂದು ಸುಧಾಕರ್ ಹೇಳಿದರು.
ಮುಂದುವರಿದ ದೇಶಗಳಲ್ಲಿ ಕೂಡ ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಜನರು ದೊಡ್ಡ ಪ್ರಮಾಣದಲ್ಲಿ ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ. ಹೆಚ್ಚು ರೋಗ ನಿರೋಧಕ ಶಕ್ತಿ ಪಡೆಯಲು ಎರಡೂ ಡೋಸ್‍ಗಳನ್ನು ಪಡೆಯಬೇಕು ಎಂದು ಅವರು ತಿಳಿಸಿದರು.

ಲಸಿಕೆಯ ಒಂದು ಡೋಸ್ ಪಡೆದರೆ ಸ್ವಲ್ಪ ರೋಗ ನಿರೋಧಕ ಶಕ್ತಿ ಬರುತ್ತದೆ. ಸಂಪೂರ್ಣ ರೋಗ ನಿರೋಧಕ ಶಕ್ತಿಗಾಗಿ ಹಾಗೂ ವೈರಾಣು ವಿರುದ್ಧ ಸದೃಢವಾಗಿ ಹೋರಾಡಲು 2 ಡೋಸ್ ತೆಗೆದುಕೊಳ್ಳಬೇಕು. ಒಂದು ಕಣ್ಣಿದ್ದರೆ ಕಾಣಿಸುತ್ತದೆ. ಆದರೆ ಎರಡೂ ಕಣ್ಣುಗಳಿದ್ದರೆ ಸಂಪೂರ್ಣ ದೃಷ್ಟಿ ಸಿಗುತ್ತದೆ. ಹಾಗೆಯೇ ಕೊರೋನ ಲಸಿಕೆಯ 2 ಡೋಸ್ ತೆಗೆದುಕೊಂಡರೆ ಸಂಪೂರ್ಣ ರೋಗ ನಿರೋಧಕ ಶಕ್ತಿ ಸಿಗುತ್ತದೆ ಎಂದು ಸುಧಾಕರ್ ಹೇಳಿದರು.

ಎರಡು ಡೋಸ್ ಲಸಿಕೆ ಪಡೆದವರು ಮಾತ್ರ ಶಾಪಿಂಗ್ ಮಾಲ್‍ಗಳಿಗೆ ಪ್ರವೇಶಿಸುವಂತೆ ನಿಯಮ ರೂಪಿಸುವಂತೆ ಬಿಬಿಎಂಪಿ ಆಯುಕ್ತರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ದಿಲ್ಲಿ ಪ್ರವಾಸ ಮುಗಿಸಿ ಬಂದ ನಂತರ ಈ ಕುರಿತು ಚರ್ಚಿಸಲಾಗುವುದು ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X