ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ಗೆ ಸೇರ್ಪಡೆ

Photo: Indian express
ಚಂಡೀಗಢ: ಜನಪ್ರಿಯ ಪಂಜಾಬಿ ಗಾಯಕ ಹಾಗೂ ರಾಪರ್ ಸಿಧು ಮೂಸೆವಾಲಾ ಅವರು ಶುಕ್ರವಾರ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಹಾಗೂ ಪಿಪಿಸಿಸಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ನಾಲ್ಕು ವರ್ಷಗಳ ಹಿಂದೆ ತನ್ನ ಸಂಗೀತ ವೃತ್ತಿಜೀವನವನ್ನು ಆರಂಭಿಸಿದ್ದು, ಈಗ ತಮ್ಮ ಜೀವನದಲ್ಲಿ ಹೊಸ ಹೆಜ್ಜೆ ಇಡಲು ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡ ನಂತರ ಹೇಳಿದ್ದಾರೆ.
“ನಾನು ಈಗಲೂ ನನ್ನ ಹಳ್ಳಿಯ ಅದೇ ಮನೆಯಲ್ಲಿ ಇದ್ದೇನೆ. ನನ್ನ ತಂದೆ ಮಾಜಿ ಸೈನಿಕ ಹಾಗೂ ನನ್ನ ತಾಯಿ ಸರಪಂಚ್. ನನ್ನ ಪ್ರದೇಶದ ನಿವಾಸಿಗಳಾದ ಬಟಿಂಡಾ ಹಾಗೂ ಮಾನ್ಸಾ ನನ್ನೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ನನ್ನಿಂದ ನಿರೀಕ್ಷೆ ಇಟ್ಟುಕೊಂಡಿದ್ದಾರೆ'' ಎಂದರು.
ನಾನು ಸ್ಥಾನಮಾನಕ್ಕಾಗಿ ಅಥವಾ ಪ್ರಶಂಸೆಗಾಗಿ ರಾಜಕೀಯಕ್ಕೆ ಬರುತ್ತಿಲ್ಲ. ಜನರ ದನಿ ಎತ್ತಲು ಕಾಂಗ್ರೆಸ್ ಸೇರುತ್ತಿದ್ದೇನೆ. ಕಾಂಗ್ರೆಸ್ನಲ್ಲಿ ಸಾಮಾನ್ಯ ಕುಟುಂಬದಿಂದ ಬಂದ ನಾಯಕರು ಇರುವುದರಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಅವರು ಹೇಳಿದರು.