ಮಂಗಳೂರು; ವಿದ್ಯಾರ್ಥಿನಿಗೆ ಕಿರುಕುಳ: ಶಾಲಾ ಬಸ್ ಚಾಲಕ ಸೆರೆ

ಮಂಗಳೂರು, ಡಿ.3: ನಗರದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ಆರೋಪಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story





