Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉದ್ಯಮ ಬೆಳವಣಿಗೆಗೆ ಒತ್ತು: ವರ್ಷದಲ್ಲಿ...

ಉದ್ಯಮ ಬೆಳವಣಿಗೆಗೆ ಒತ್ತು: ವರ್ಷದಲ್ಲಿ ಅಂತರ್‍ರಾಷ್ಟ್ರೀಯ ಮಟ್ಟದ 10 ಕಾರ್ಯಕ್ರಮ; ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 Dec 2021 11:09 PM IST
share
ಉದ್ಯಮ ಬೆಳವಣಿಗೆಗೆ ಒತ್ತು: ವರ್ಷದಲ್ಲಿ ಅಂತರ್‍ರಾಷ್ಟ್ರೀಯ ಮಟ್ಟದ 10 ಕಾರ್ಯಕ್ರಮ; ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಡಿ. 3: ‘ಕೈಗಾರಿಕಾ ರಂಗದ ಬೆಳವಣಿಗೆಗೆ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಶಸ್ತ ತಾಣವಾಗಿದ್ದು, ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಅಸೋಚಮ್) ಜತೆಗೂಡಿ ಮುಂದಿನ ಒಂದು ವರ್ಷದಲ್ಲಿ ಅಂತರ್‍ರಾಷ್ಟ್ರೀಯ ಮಟ್ಟದ ಗರಿಷ್ಠ ಹತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು' ಎಂದು ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಅಸೋಚಮ್ ಹಮ್ಮಿಕೊಂಡಿದ್ದ `ಸ್ಮಾರ್ಟ್ ಟೆಕ್ ಇಂಡಿಯಾ-2021’ ಸಮಾವೇಶದಲ್ಲಿ ಮಾತನಾಡಿದ ಅವರು, `ರಾಜ್ಯದಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಹೇಳಿಮಾಡಿಸಿದಂತಹ ಹಲವು ನೀತಿಗಳು ಮತ್ತು ಕಾರ್ಯಪರಿಸರವಿದೆ. ಕೈಗಾರಿಕಾ ವಲಯದ ಬೆಳವಣಿಗೆಗೆ ಪೂರಕವಾಗಿ ಯಾವುದೇ ಬದಲಾವಣೆ ಬೇಕೆನಿಸಿದರೆ ಅದನ್ನು ಕ್ಷಿಪ್ರಗತಿಯಲ್ಲಿ ಮಾಡಲು ರಾಜ್ಯ ಸರಕಾರ ಸಿದ್ಧವಿದೆ’ ಎಂದು ಹೇಳಿದರು.

‘ರಾಜ್ಯವು ಜಾಗತಿಕ ಮಟ್ಟದಲ್ಲಿ ಅತ್ಯುತ್ತಮ ಮತ್ತು ಕೌಶಲ್ಯಪೂರ್ಣ ಮಾನವ ಸಂಪನ್ಮೂಲಕ್ಕೆ ಹೆಸರಾಗಿದೆ. ಇಡೀ ದೇಶವು ಈ ವಿಚಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ. ಉದ್ಯಮ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಜತೆಗೂಡಿದರೆ ಎಂತಹ ಪರಿವರ್ತನೆಯನ್ನಾದರೂ ತರಬಹುದು. ಮೋದಿಯವರಿಗೆ ಉದ್ಯಮಗಳ ಬೆಳವಣಿಗೆಗೆ ಎಂತಹ ರಚನಾತ್ಮಕ ಕ್ರಮಗಳು ಅಗತ್ಯವೆನ್ನುವುದರ ಸ್ಪಷ್ಟವಾದ ಅರಿವಿದೆ. ರಾಜ್ಯವೂ ಇದೇ ನಿಟ್ಟಿನಲ್ಲಿ ದಾಪುಗಾಲಿಡುತ್ತಿದೆ. ಈಗ ಜಾರಿಗೆ ತರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಉದ್ಯೋಗರಂಗದ ಸಮಸ್ಯೆಗಳಿಗೆ ಸಮರ್ಥ ಪರಿಹಾರವಾಗಿದೆ ಎಂದು ನುಡಿದರು.

‘ನೂತನ ಶಿಕ್ಷಣ ನೀತಿಯನ್ನು ಉದ್ಯೋಗ ಮತ್ತು ಕೌಶಲಕೇಂದ್ರಿತವನ್ನಾಗಿ ಮಾಡಲಾಗಿದ್ದು, ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ದಿಮೆಗಳನ್ನು ಬೆಸೆಯಲಾಗುತ್ತಿದೆ. ಇವು ಕೇವಲ ಕ್ಯಾಂಪಸ್ ಸಂದರ್ಶನದ ಸಮಯವಲ್ಲದೆ ಇನ್ನುಮುಂದೆ ಇಡೀ ಶೈಕ್ಷಣಿಕ ವರ್ಷದುದ್ದಕ್ಕೂ ವಿದ್ಯಾಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿವೆ ಎಂದು ಅವರು ನುಡಿದರು.

ದೇಶದ ಉದ್ಯಮ ವಲಯಕ್ಕೆ ಅಗಾಧ ಪ್ರಮಾಣದಲ್ಲಿ ಕೌಶಲ್ಯಪೂರ್ಣ ಅಭ್ಯರ್ಥಿಗಳು ಬೇಕಾಗಿದ್ದಾರೆ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ, ಸ್ವಾತಂತ್ರ್ಯ ಕೊಡಲಾಗುತ್ತಿದ್ದು, ವಿಕೇಂದ್ರೀಕರಣಗೊಳಿಸಲಾಗುತ್ತಿದೆ. ಶಿಕ್ಷಣದ ವಿಚಾರದಲ್ಲಿ ಸರಕಾರವು ಉದಾರವಾಗಿ ನಡೆದುಕೊಳ್ಳುತ್ತಿದೆ ಎಂದರು. ಇದೇ ವೇಳೆ ಉದ್ಯಮರಂಗದ ನಾನಾ ವಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಎಲ್ ಆಂಡ್ ಟಿ ಟೆಕ್ನಾಲಜೀಸ್, ಇನ್ಸೊಲ್ಯೂಷನ್ಸ್ ಗ್ಲೋಬಲ್ ಲಿಮಿಟೆಡ್, ಬ್ಲೂ ಕಕೂನ್ ಡಿಜಿಟಲ್, ತಿರುಪತಿ ಗ್ರೂಪ್, ಎಸ್ ಮೆಂಟರ್ ಸೊಲ್ಯೂಷನ್ಸ್ ಮತ್ತು ಅಪಿರಿಯ್ರೋನ್ ಟೆಕ್ನೋ ವೆಂಚರ್ಸ್ ಕಂಪೆನಿಗಳಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X