Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಬದಲಾವಣೆ ವಿಚಾರ: ಈಶ್ವರಪ್ಪ ಬಾಯಿ...

ಸಿಎಂ ಬದಲಾವಣೆ ವಿಚಾರ: ಈಶ್ವರಪ್ಪ ಬಾಯಿ ತಪ್ಪಿ ಸತ್ಯ ಹೇಳಿದ್ದಾರೆ ಎಂದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Dec 2021 4:06 PM IST
share
ಸಿಎಂ ಬದಲಾವಣೆ ವಿಚಾರ: ಈಶ್ವರಪ್ಪ ಬಾಯಿ ತಪ್ಪಿ ಸತ್ಯ ಹೇಳಿದ್ದಾರೆ ಎಂದ ಸಿದ್ದರಾಮಯ್ಯ

ಶಿವಮೊಗ್ಗ, ಡಿ.4: ಮುರುಗೇಶ್ ನಿರಾಣಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು  ಸಚಿವ ಈಶ್ವರಪ್ಪ ಅವರು ನೀಡಿದ ಹೇಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈಶ್ವರಪ್ಪ ಬಾಯಿ ತಪ್ಪಿ ಸತ್ಯ ಹೇಳುತ್ತಾರೆ. ಅವರಿಗೆ ಸಿಎಂ ಮೇಲೆ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಟೀಕೆ ವಿಚಾರದ ಬಗ್ಗೆ ಮಾತನಾಡಿ. ಅವರಿಗೆ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ  ಕೊಳೆತು ನಾರುತ್ತಿದೆ ಎನ್ನುವುದು  ಮನವರಿಕೆ  ಆಗಿದೆ.  ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಇಂತಹ ಹೇಳಿಕೆ ನೀಡಿದ್ದಾರೆ ಎಂದರು.

ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಗೆ ಜೆಡಿಎಸ್ ಬೆಂಬಲಿಸುತ್ತದೆ. ಕೆಲವು ಕ್ಷೇತ್ರದಲ್ಲಿ ಜೆಡಿಎಸ್ ಸ್ಥಳೀಯ ಮುಖಂಡರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ ಎಂದರು.

ಅಧಿವೇಶನ ಆರಂಭವಾಗುತ್ತಿದೆ. ಅತಿವೃಷ್ಟಿ ಸಮಸ್ಯೆಯಾಗಿದೆ. ಮೂರು ನಾಲ್ಕು ಪಟ್ಟು ಹೆಚ್ಚು  ಮಳೆ ಹೆಚ್ಚಾಗಿದೆ. ಅಪಾರ ಪ್ರಮಾಣದ ಬೆಳೆ ನಷ್ಟ ಆಗಿದೆ. ಒಂದು ತಿಂಗಳಾಯ್ತು, ಇನ್ನು  ಕೂಡಾ  ಸರ್ವೇ  ಆಗಿಲ್ಲ. 6 ಲಕ್ಷ  ಹೆಕ್ಟೇರ್ ಬೆಳೆ ಹಾನಿಯಾಗಿದೆ. ರೈತರ ವಿರೋಧಿ ಸರ್ಕಾರ ಇದಾಗಿದೆ.  ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜನರು ಶಾಪ ಹಾಕುತ್ತಿದ್ದಾರೆ ಎಂದರು.

ರಾಜಕೀಯ ಧೃವೀಕರಣ ಶುರುವಾಗಿದೆ. ಜೆಡಿಎಸ್ ಮತ್ತು ಬಿಜೆಪಿಯಿಂದ ಅನೇಕರು ಕಾಂಗ್ರೆಸ್ ಪಕ್ಷ  ಸೇರ್ಪಡೆಯಾಗುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಪತ್ತೆ  ಹಿನ್ನೆಲೆಯಲ್ಲಿ ಹೊರ ದೇಶದಿಂದ ಬಂದವರು ಮಿಸ್ಸಿಂಗ್ ಆಗಿದ್ದಾರೆ. ಏರ್ ಪೋರ್ಟ್ ನಲ್ಲಿ ಭ್ರಷ್ಟಾಚಾರ ಇರಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮಿಸ್ಸಿಂಗ್ ಆಗಿದ್ದಾರೆ ಎಂದರು.

ಇದು ಲಂಚ ಹೊಡೆಯುವ ಸರ್ಕಾರ. ಇದರ ಮೇಲೆ ಯಾವುದೇ ನಿರೀಕ್ಷೆ ಇಲ್ಲ. 40 ಪರ್ಸೆಂಟ್ ಸರ್ಕಾರ ಆಗಿದೆ. ಗುತ್ತಿಗೆದಾರರು ಈಗಾಗಲೇ ಮೋದಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದಿರುವೆ.  ನ್ಯಾಯಾಂಗ ತನಿಖೆ ಆಗಬೇಕು. ರಾಜ್ಯಪಾಲ ಆಡಳಿತ ರಾಜ್ಯದಲ್ಲಿ   ಜಾರಿಯಾಗಬೇಕು. ಕಾಂಗ್ರೆಸ್ ಸರ್ಕಾರ ಸೇರಿ ಎಲ್ಲ ತನಿಖೆ ಮಾಡಲಿ. ಇವರಿಗೆ ಧಮ್ ಇಲ್ಲ. ತನಿಖೆ ಆದರೆ ಅವರು ಬೆತ್ತಲೆ ಆಗುತ್ತಾರೆ. ಸಿದ್ಧು ಟೀಕೆ ಮಾಡಿದ್ರೆ ಈಶ್ವರಪ್ಪ ಲೀಡರ್ ಆಗುತ್ತೇನೆ ಅಂದುಕೊಂಡಿದ್ದಾನೆ. ಜನರ ಆಶೀರ್ವಾದ ಇದ್ದರೆ ಮಾತ್ರ ನಾಯಕ ಆಗಲು ಸಾಧ್ಯ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X